ಅಕ್ರಮ ಮದ್ಯ ಸಾಗಾಟ: ಓರ್ವ ಆರೋಪಿ ಸೆರೆ
ಬಂಟ್ವಾಳ, ನ. 6: ಕಾರೊಂದರಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿರುವುದನ್ನು ಬಂಟ್ವಾಳ ತಾಲೂಕಿನ ಮೂಡುಪಡುಕೋಡಿ ಗ್ರಾಮದ ನೇರಳಕಟ್ಟೆ ಎಂಬಲ್ಲಿ ಪತ್ತೆಹಚ್ಚಿರುವ ಪುಂಜಾಲಕಟ್ಟೆ ಪೊಲೀಸರು ಈ ಸಂಬಂಧ ಓರ್ವನನ್ನು ಬಂಧಿಸಿದ್ದಾರೆ.
ಇರ್ವತ್ತೂರುಪದವು ನಿವಾಸಿ ಬಾಲಕೃಷ್ಣ ಶೆಟ್ಟಿ ಬಂಧಿತ ಆರೋಪಿ.
ಈತನಿಂದ ವಿವಿಧ ಕಂಪನಿಗೆ ಸೇರಿದ ಒಟ್ಟು 234 ಮದ್ಯದ ಬಾಟ್ಲಿಗಳ ಸಹಿತ ಕಾರನ್ನು ವಶಪಡಿಸಿಕೊಂಡಿದ್ದು, ಇವುಗಳ ಮೌಲ್ಯ 1,32,780 ಲಕ್ಷ ರೂ. ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ ತಾಲೂಕಿನ ಮೂಡುಪಡುಕೋಡಿ ಗ್ರಾಮದ ನೇರಳಕಟ್ಟೆ ಎಂಬಲ್ಲಿ ಪುಂಜಾಲಕಟ್ಟೆ ಠಾಣೆಯ ಎಸ್ಸೈ ಸೌಮ್ಯ ಮತ್ತವರ ಸಿಬ್ಬಂದಿ ವಾಹನ ತಪಾಸಣೆಯಲ್ಲಿ ನಿರತರಾಗಿದ್ದ ವೇಳೆ ಮೂರ್ಜೆ ಕಡೆಯಿಂದ ಅನುಮಾನಾಸ್ಪದವಾಗಿ ಬರುತ್ತಿದ್ದ ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ದಾಖಲಾತಿಯಿಲ್ಲದ ಮದ್ಯದ ಬಾಟ್ಲಿಗಳು ಪತ್ತೆಯಾಗಿದೆ. ತಕ್ಷಣ ಆರೋಪಿಯನ್ನು ಬಂಧಿಸಿ ಕಾರನ್ನು ವಶಪಡಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story