ಶನಿವಾರ ಬೆಳಗ್ಗೆ 10:30ಕ್ಕೆ ಅಯೋಧ್ಯೆ-ಬಾಬರಿ ಮಸೀದಿ ಪ್ರಕರಣದ ಐತಿಹಾಸಿಕ ತೀರ್ಪು ಪ್ರಕಟ

ಹೊಸದಿಲ್ಲಿ, ನ.8: ಅಯೋಧ್ಯೆ-ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಐತಿಹಾಸಿಕ ತೀರ್ಪು ನಾಳೆ (ಶನಿವಾರ) ಬೆಳಗ್ಗೆ 10:30ಕ್ಕೆ ಪ್ರಕಟಗೊಳ್ಳಲಿದೆ.
ಐತಿಹಾಸಿಕ ತೀರ್ಪು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಸಿಜೆಐ ರಂಜನ್ ಗೊಗೊಯಿ ಅವರು ಇಂದು ಉತ್ತರ ಪ್ರದೇಶದಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಶಾಂತಿ ಸುವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದ್ದರು. 40 ದಿನಗಳ ವಿಚಾರಣೆಯ ಬಳಿಕ ಅಕ್ಟೋಬರ್ 16ರಂದು ಸಿಜೆಐ ರಂಜನ್ ಗೊಗೊಯಿ ನೇತೃತ್ವದ ಐವರು ನ್ಯಾಯಾಧೀಶರ ಪೀಠ ತೀರ್ಪನ್ನು ಕಾಯ್ದಿರಿಸಿತ್ತು.
Next Story