ಶಶಿರಾಜ್ ಅಂಬಟ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ
ಮಂಗಳೂರು, ನ.8: ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಜಿಲ್ಲಾ ಕಾಂಗ್ರೆಸ್ನ ಮಾಜಿ ವಕ್ತಾರ ಹಾಗೂ ಜಿಲ್ಲಾ ಸದಸ್ಯ ಶಶಿರಾಜ್ ಅಂಬಟ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
‘‘ಕಳೆದ 35 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗಿ ದುಡಿದು ಪಕ್ಷದ ಹಲವಾರು ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಕಳೆದ ಕೆಲ ವರ್ಷಗಳಿಂದ ಕಾಂಗ್ರೆಸ್ ಪಕ್ಷ ಜಾತಿವಾದಿ ರಾಜಕಾರಣದತ್ತ ಹೊರಳುತ್ತಿದೆ. ವಲಸೆ ಕಾಂಗ್ರೆಸಿಗರ ಸೊತ್ತಾಗುತ್ತಿದೆ. ಜಾತ್ಯತೀತ ನಿಲುವಿನ ಕಾರ್ಯಕರ್ತರಿಗೆ ಇಲ್ಲಿ ಉಸಿರುಗಟ್ಟುವ ವಾತಾವರಣವಿದೆ. ಆದ್ದರಿಂದ ರಾಜೀನಾಮೆ ನೀಡುತ್ತಿದ್ದೇನೆ’’ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
Next Story