ಮನಪಾ ಚುನಾವಣೆ: ನ.10ಕ್ಕೆ ಬಹಿರಂಗ ಪ್ರಚಾರ ಮುಕ್ತಾಯ
ಮಂಗಳೂರು, ನ.8: ಮಂಗಳೂರು ಮಹಾನಗರ ಪಾಲಿಕೆಗೆ ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ನ.10ರಂದು ಬೆಳಗ್ಗೆ 7 ಗಂಟೆಯೊಳಗೆ ಬಹಿರಂಗ ಪ್ರಚಾರ ಮುಕ್ತಾಯಗೊಳ್ಳಲಿದೆ.
ಚುನಾವಣಾ ಪ್ರಚಾರವು ಮತದಾನ ಪ್ರಾರಂಭವಾಗುವ 48 ಗಂಟೆಗಳ ಮುಂಚೆ ಮುಕ್ತಾಯವಾಗಬೇಕು. ನ.10 ರಂದು ಬೆಳಗ್ಗೆ 7 ಗಂಟೆ ನಂತರ ರಾಜಕೀಯ ಪಕ್ಷಗಳು, ಚುನಾವಣೆಗೆ ಸ್ಫರ್ಧಿಸಿರುವ ಅಭ್ಯರ್ಥಿಗಳು ಹಾಗೂ ಅಭ್ಯರ್ಥಿಗಳ ಪರವಾಗಿ ಯಾರೇ ಇತರರು ಯಾವುದೇ ವಿಧದಲ್ಲಿ ಬಹಿರಂಗ ಚುನಾವಣಾ ಪ್ರಚಾರವನ್ನು ನಡೆಸಬಾರದು.
ಚುನಾವಣೆಗೆ ಸ್ಫರ್ಧಿಸಿರುವ ಅಭ್ಯರ್ಥಿಗಳ ಬೆಂಬಲಕ್ಕಾಗಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಹೊರಗಿನಿಂದ ಚುನಾವಣಾ ಪ್ರಚಾರಕ್ಕಾಗಿ ತಾರಾ ಪ್ರಚಾರಕರು ಮತ್ತು ಇತರರನ್ನು ಕರೆಯಿಸಿಕೊಂಡಿದ್ದಲ್ಲಿ ಅಂತಹ ವ್ಯಕ್ತಿಗಳು ಚುನಾವಣೆ ನಡೆಯುತ್ತಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯನ್ನು ಕಡ್ಡಾಯವಾಗಿ ತೊರೆಯಬೇಕು ಎಂದು ಜಿಲ್ಲಾ ಚುನಾವಣೆ ಅಧಿಕಾರಿಗಳ ಪ್ರಕಟನೆ ತಿಳಿಸಿದೆ.
Next Story