Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ : ಅ.ಭಾ.ಅಂ.ವಿವಿ...

ಮೂಡುಬಿದಿರೆ : ಅ.ಭಾ.ಅಂ.ವಿವಿ ಕ್ರೀಡಾಕೂಟಕ್ಕೆ 50 ಲಕ್ಷ ರೂ. ಅನುದಾನ : ಈಶ್ವರಪ್ಪ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ8 Nov 2019 11:04 PM IST
share
ಮೂಡುಬಿದಿರೆ : ಅ.ಭಾ.ಅಂ.ವಿವಿ ಕ್ರೀಡಾಕೂಟಕ್ಕೆ 50 ಲಕ್ಷ ರೂ. ಅನುದಾನ :  ಈಶ್ವರಪ್ಪ ಘೋಷಣೆ

ಮೂಡುಬಿದಿರೆ: ವಿದ್ಯಾರ್ಥಿಗಳು ಕಲಿಕೆಗೆ ಮೊದಲ ಆದ್ಯತೆ ನೀಡುವುದರ ಜತೆಗೆ ಕ್ರೀಡೆಯಲ್ಲೂ  ಆಸಕ್ತಿ ತೋರಬೇಕು. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕ್ರೀಡೆಗೆ ಸಿಗುವ ಪ್ರೋತ್ಸಾಹ ಕಡಿಮೆ. ಈ ನಿಟ್ಟಿನಲ್ಲಿ ಮುಂದಿನ ಜನವರಿಯಲ್ಲಿ ಮೂಡುಬಿದಿರೆಯಲ್ಲಿ ನಡೆಯುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಕ್ರೀಡಾ ಕೂಟಕ್ಕೆ ಸರಕಾರದಿಂದ ರೂ 50 ಲಕ್ಷ ಅನುದಾನ ಹಾಗೂ ಅಗತ್ಯ ಕ್ರೀಡಾ ಸಾಮಾಗ್ರಿ ಗಳನ್ನು ಒದಗಿಸಲಾಗುವುದು ಎಂದು ಗ್ರಾಮೀಣ ಅಭಿವೃದ್ಧಿ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. 

ಅವರು ಶುಕ್ರವಾರ ಆಳ್ವಾಸ್ ಆಡಳಿತ ಕಚೇರಿ ಕಟ್ಟಡದಲ್ಲಿ 80ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಕ್ರೀಡಾ ಕೂಟದ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದರು. ಉತ್ತಮ ಕ್ರೀಡಾಪಟುಗಳು ದುಶ್ಚಟಗಳಿಂದ ದೂರ ಇರುತ್ತಾರೆ. ಕ್ರೀಡೆಯನ್ನು ತಪಸ್ಸಾಗಿ ಸ್ವೀಕರಿಸಿದಾಗ ಸಾಧಕ ಕ್ರೀಡಾಪಟುವಾಗಿ ಮೂಡಿ ಬರಲು ಸಾಧ್ಯ ಎಂದ ಅವರು ತುಮಕೂರಿನಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಆರಂಭವಾಗಲಿದೆ. ರಾಜ್ಯದಲ್ಲಿ ಕ್ರೀಡಾ ಸಾಧನೆ ಮಾಡಿದ ಕ್ರೀಡಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಕ್ರೀಡಾ ಅಧಿಕಾರಿಗಳ ವಿಶೇಷ ಸಭೆಯನ್ನು ನಡೆಸಿ, ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಅದನ್ನು ಮುಂದಿನ ಬಜೆಟ್‍ನಲ್ಲಿ ಸೇರಿಸಿ ಅವುಗಳಿಗೆ ಅನುದಾನ ಕಾಯ್ದಿರಿಸಲು ಪ್ರಯತ್ನಿಸಲಾಗುವುದು. ಸಾಧಕ ಕ್ರೀಡಾಪಟುಗಳಿಗೆ ಸರಕಾರದ ವಿವಿಧ ಇಲಾಖೆಗಳಲ್ಲಿ ನೇರ ನೇಮಕಾತಿಗೆ ಸರಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿ ಕ್ರೀಡೆಯನ್ನು ಶಿಕ್ಷಣದ ಅವಿಭಾಜ್ಯ ಅಂಗವಾಗಿ ಸರಕಾರ ಪರಿಗಣಿಸಬೇಕು, ಸಾಧಕ ಕ್ರೀಡಾ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ, ಉದ್ಯೋಗದಲ್ಲಿ ಮೀಸಲಾತಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ನಡೆಸುವ ಕ್ರೀಡಾ ಕೂಟಗಳಿಗೆ ಸರಕಾರದ ಪ್ರೋತ್ಸಾಹ ಸೇರಿದಂತೆ ಕೆಲವು ಬೇಡಿಕೆಗಳನ್ನು ಸಚಿವರ ಮುಂದಿಟ್ಟರು. 

ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಶಿವಮೊಗ್ಗ ಜಿಲ್ಲಾ ಪಂಚಾಯತ್  ಆರೋಗ್ಯ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತೇಶ್, ಕ್ರೀಡಾ ಆಯುಕ್ತ ಶ್ರೀನಿವಾಸ ಮತ್ತು ದ.ಕ ಜಿಲ್ಲಾ ಪಂಚಾಯತ್ ಸಿಇಒ ಸೆಲ್ವಮಣಿ ಉಪಸ್ಥಿತರಿದ್ದರು. ಉಪನ್ಯಾಸಕ ವೇಣು ಗೋಪಾಲ ಶೆಟ್ಟಿ ನಿರೂಪಿಸಿದರು.

 ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ ಆಳ್ವ ಶಿಕ್ಷಣ ರಂಗದ ಬ್ರಹ್ಮ ಇದ್ದಂತೆ. ಈ ಸಂಸ್ಥೆಯು 800 ಕ್ರೀಡಾಪಟುಗಳಿಗೆ ಉಚಿತ ತರಬೇತಿಯನ್ನು ನೀಡುವ ಮೂಲಕ ಇತರ ಶಿಕ್ಷಣ ಸಂಸ್ಥೆಗಳಿಗೆ ಮಾದರಿಯಾಗಿದೆ. ಶಿಕ್ಷಣ ಮತ್ತು ಕ್ರೀಡೆ, ಕ್ರೀಡಾಪಟುಗಳ ಬಗ್ಗೆ ಅವರಲ್ಲಿರುವ ಚಿಂತನೆಗಳನ್ನು ಸರಕಾರ ಸ್ವೀಕರಿಸಲು ಅವಕಾಶ ಕಲ್ಪಿಸಲಾಗುವುದು

-  ಕೆ.ಎಸ್.ಈಶ್ವರಪ್ಪ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X