ಕರ್ನಾಟಕ ಸಾಹಿತ್ಯ ಅಕಾಡೆಮಿ: ವರ್ಷದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ನ.8: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ 2018 ನೆ ಸಾಲಿನ ವರ್ಷದ ಪುಸ್ತಕ ಬಹುಮಾನ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ನ.30 ರಂದು ಕೊನೆಯ ದಿನಾಂಕವಾಗಿದೆ.
ಬಹುಮಾನಕ್ಕೆ ಸಲ್ಲಿಸುವ ಪುಸ್ತಕಗಳು ಜ.1 2018 ರಿಂದ ಡಿ.31 2018 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2018 ಎಂದು ಮುದ್ರಿತವಾಗಿರಬೇಕು. ಆಸಕ್ತರು ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2 ನೆ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560 002 ಇಲ್ಲಿಗೆ ಸಲ್ಲಿಸಬೇಕು. ಕೊರಿಯರ್ ಮೂಲಕ ಅಥವಾ ಖುದ್ದಾಗಿಯೂ ತಲುಪಿಸಬಹುದಾಗಿದೆ.
ಯಾವ ಪುಸ್ತಕಗಳು ಸಲ್ಲಿಸಲು ಅರ್ಹ: ಕಾವ್ಯ(ವಚನಗಳು ಮತ್ತು ಹನಿಗವನಗಳು ಸೇರಿ), ನವಕವಿಗಳ ಪ್ರಥಮ ಕವನ ಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನಚರಿತ್ರೆ ಅಥವಾ ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ(ಜಾನಪದ, ಇತಿಹಾಸ, ರಾಜಕೀಯ ಶಾಸ್ತ್ರ, ಮಾನವಶಾಸ್ತ್ರ, ಸಮಾಜಶಾಸ್ತ್ರ, ಮನಃಶಾಸ್ತ್ರ, ಭಾಷಾಶಾಸ್ತ್ರ, ವಾಣಿಜ್ಯ, ಶಿಕ್ಷಣ..ಇತರೆ) ಕಳಿಸಲು ಅವಕಾಶವಿದೆ.
ಅದರ ಜತೆಗೆ, ಸಂಶೋಧನೆ, ವೈಚಾರಿಕ ಅಥವಾ ಅಂಕಣ ಬರಹ, ಅನುವಾದ-ಸೃಜನ, ಅನುವಾದ-2(ಸೃಜನ-ಸೃಜನೇತರ), ಲೇಖಕರ ಮೊದಲ ಸ್ವತಂತ್ರ ಕೃತಿಗೆ ಬಹುಮಾನ, ಕನ್ನಡದಿಂದ ಇಂಗ್ಲಿಷ್ ಗೆ ಅನುವಾದಗೊಂಡ ಕೃತಿಗಳನ್ನು ಪರಿಗಣಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.