ಅಯೋಧ್ಯೆ ತೀರ್ಪು: ಮರು ಪರಿಶೀಲನೆ ಅರ್ಜಿ ಸಲ್ಲಿಸುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ
ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್
ಹೊಸದಿಲ್ಲಿ, ನ.9: ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಇಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಮರು ಪರಿಶೀಲನೆಗೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಬೇಕೆ ಎನ್ನುವ ಬಗ್ಗೆ ನಿರ್ಧರಿಸಲು ಚರ್ಚೆ ನಡೆಸಲಾಗುವುದು ಎಂದು ಅದು ಹೇಳಿದೆ.
ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಗೌರವಿಸುತ್ತೇವೆ. ಆದರೆ ತೀರ್ಪು ನಮ್ಮ ನಿರೀಕ್ಷೆಯಂತೆ ಬಂದಿಲ್ಲ. ತೀರ್ಪಿನ ಬಗ್ಗೆ ನಮಗೆ ತೃಪ್ತಿಯಿಲ್ಲ. ತೀರ್ಪನ್ನು ಪರಿಶೀಲನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ ಝಫರ್ ಯಾಬ್ ಜಿಲಾನಿ ತಿಳಿಸಿದರು.
Next Story