Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ...

ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಬದ್ಧ: ಬಿ.ಎಸ್.ಯಡಿಯೂರಪ್ಪ

494 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ9 Nov 2019 9:23 PM IST
share
ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಬದ್ಧ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ನ.9: ನಗರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ಬದ್ಧವಾಗಿದ್ದು, ನಗರೋತ್ಥಾನ ಮತ್ತು ಸ್ಮಾರ್ಟ್ ಸಿಟಿ ಯೋಜನೆಯಡಿ 494 ಕೋಟಿ ರೂ. ವೆಚ್ಚದಲ್ಲಿ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಹೇಳಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚೆಗೆ ಬೆಂಗಳೂರು ಅಭಿವೃದ್ಧಿ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಚಾರ ದಟ್ಟಣೆ, ಘನತ್ಯಾಜ್ಯ ವಿಲೇವಾರಿ, ಕೆರೆ ಸಂರಕ್ಷಣೆ ಬಗ್ಗೆ ಕೆಲವು ಪ್ರಮುಖ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಬೆಂಗಳೂರು ಮ್ಯಾನೇಜ್‌ಮೆಂಟ್ ಅಥಾರಿಟಿ ಸ್ಥಾಪಿಸಿ ಸಂಯೋಜಿತ ಸಂಚಾರ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಗರಕ್ಕೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದು ಸರಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ನಗರದ ಗುಂಡಿಬಿದ್ದ ರಸ್ತೆಗಳನ್ನು ಮುಚ್ಚಲು ಅನುಕೂಲವಾಗುವಂತೆ ಬಿದರಹಳ್ಳಿಯಲ್ಲಿ ಡಾಂಬರು ಘಟಕ ಸ್ಥಾಪಿಸಲಾಗುತ್ತಿದೆ. ಹೊರವರ್ತುಲ ರಸ್ತೆಗಳನ್ನು ಸಿಗ್ನಲ್ ಮುಕ್ತಗೊಳಿಸುವ ಉದ್ದೇಶದಿಂದ ಡಾ.ಮುತ್ತುರಾಜ್ ವೃತ್ತದ ಕೆಳಸೇತುವೆಯನ್ನು ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ನಗರದ ಅತಿ ಹೆಚ್ಚು ಸಂಚಾರ ದಟ್ಟಣೆಯುಳ್ಳ 12 ರಸ್ತೆಗಳನ್ನು ಗುರುತಿಸಲಾಗಿದೆ. ಈ ರಸ್ತೆಗಳಲ್ಲಿ ಪ್ರತ್ಯೇಕ ಬಸ್ ಪಥ ಹಾಗೂ ಸೈಕಲ್ ಪಥಗಳನ್ನು ನಿರ್ಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು. 2021ರ ಡಿಸೆಂಬರ್ ವೇಳೆಗೆ ಮೆಟ್ರೋ 2ನೆ ಹಂತದ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಾರ್ವಜನಿಕ ಸಾರಿಗೆ ಹೆಚ್ಚಿಸಿ ಖಾಸಗಿ ವಾಹನಗಳಿಗೆ ಕಡಿವಾಣ ಹಾಕಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್, ಸಂಸದ ಪಿ.ಸಿ.ಮೋಹನ್, ಪಾಲಿಕೆ ಮೇಯರ್ ಗೌತಮ್ ಕುಮಾರ್ ಜೈನ್, ಉಪಮೇಯರ್ ಮೋಹನ್ ರಾಜ್, ಆಯುಕ್ತ ಅನಿಲ್ ಕುಮಾರ್, ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್ ಮತ್ತಿತರದ್ದರು.

ಸುಂದರ ಬೆಂಗಳೂರು ನಿರ್ಮಾಣ...

ಬಿಬಿಎಂಪಿ ವ್ಯಾಪ್ತಿಗೆ ಸೇರಿದ 110 ಹಳ್ಳಿಗಳಿಗೆ ಕುಡಿಯುವ ನೀರಿನ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಒಟ್ಟಾರೆ ನಗರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ನೀಲಿ ನಕ್ಷೆ ಸಿದ್ಧಪಡಿಸಿದ್ದು, ಭವಿಷ್ಯದಲ್ಲಿ ಸುಂದರ ಬೆಂಗಳೂರು ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

-ಬಿ.ಎಸ್ ಯಡಿಯೂರಪ್ಪ,ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X