Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಯೋಧ್ಯೆ ತೀರ್ಪು, 370ನೇ ವಿಧಿ ಭಾರತದ...

ಅಯೋಧ್ಯೆ ತೀರ್ಪು, 370ನೇ ವಿಧಿ ಭಾರತದ ದಿಕ್ಕನ್ನು ಬದಲಿಸಿದೆ: ನಳಿನ್ ಕಟೀಲ್

ವಾರ್ತಾಭಾರತಿವಾರ್ತಾಭಾರತಿ10 Nov 2019 9:56 PM IST
share
ಅಯೋಧ್ಯೆ ತೀರ್ಪು, 370ನೇ ವಿಧಿ ಭಾರತದ ದಿಕ್ಕನ್ನು ಬದಲಿಸಿದೆ: ನಳಿನ್ ಕಟೀಲ್

ಚಿಕ್ಕಮಗಳೂರು, ನ.10: ಅಯೋಧ್ಯೆಯಲ್ಲಿ ವಿವಾದಿತ ಸ್ಥಳದಲ್ಲೇ ರಾಮಮಂದಿರ ನಿರ್ಮಾಣಕ್ಕೆ ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದ್ದು, ಈ ತೀರ್ಪಿಗೆ ದೇಶದ ಪ್ರತೀ ನಾಗರಿಕ, ಸಮುದಾಯಗಳ ಜನರು ತಲೆಬಾಗಿದ್ದಾರೆ. ಅಯೋಧ್ಯೆ ತೀರ್ಪು ಹೊರಬಿದ್ದ ಕ್ಷಣದಿಂದಲೇ ದೇಶದಲ್ಲಿ ಬದಲಾವಣೆಯ ದಿಕ್ಕು ಆರಂಭವಾಗಿದೆ. ರಾಮಮಂದಿರ ರಾಷ್ಟ್ರ ಮಂದಿರವಾಗಲಿದೆ. ಕೇಂದ್ರದ ಬಿಜೆಪಿ ಆಡಳಿತದಿಂದಾಗಿ ದೇಶದಲ್ಲಿ ಭಾರೀ ಪರಿವರ್ತನೆಗಳಾಗಲಿದ್ದು, ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ರವಿವಾರ ನಗರದ ಬಿಜೆಪಿ ಕಚೇರಿ ಪಾಂಚಜನ್ಯಕ್ಕೆ ಆಗಮಿಸಿದ್ದ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶತಮಾನಗಳಷ್ಟು ಹಳೆಯದಾದ ಅಯೋಧ್ಯೆ ವಿವಾದವನ್ನು ಸುಪ್ರೀಂ ಕೋರ್ಟಿನ ಐವರು ನ್ಯಾಯಾಧೀಶರು ಸರ್ವಸಮ್ಮತಿಯೊಂದಿಗೆ ಹಿಂದುಗಳ ಪರವಾಗಿ ಆದೇಶ ನೀಡಿದ್ದಾರೆ. ಇದೊಂದು ಐತಿಹಾಸಿಕ ತೀರ್ಪಾಗಿದ್ದು, ಈ ಸಂಬಂಧದ ಎಲ್ಲ ರೀತಿಯ ವಿವಾದ, ಸಂಶಯ, ಚರ್ಚೆಗೆ ಇತಿಶ್ರೀ ಹಾಡಿದ್ದಾರೆ. ಈ ಸಂಬಂದದ ತೀರ್ಪಿನ ಹಿನ್ನೆಲೆಯಲ್ಲಿ ದೇಶಾದ್ಯಂತ ಒಂದು ರೀತಿಯ ಆತಂಕವಿತ್ತು. ಆದರೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮುಂದಾಲೋಚನೆಯಿಂದ ಇಡೀ ದೇಶ ಹಾಗೂ ರಾಜ್ಯಾದ್ಯಂತ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಂಡಿದ್ದು, ಯಾವುದೇ ಸಂಘರ್ಷಗಳುಂಟಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದರೆಂದ ಅವರು, ಹಿಂದುಗಳ ಪರವಾಗಿ ತೀರ್ಪು ನೀಡಿದ ನ್ಯಾಯಾಧೀಶರನ್ನು ಅಭಿನಂದಿಸುವುದಾಗಿ ತಿಳಿಸಿದರು.

ನ್ಯಾಯಾಲಯ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದಂತೆ ಟ್ರಸ್ಟ್ ರಚನೆಗೆ ಆದೇಶ ನೀಡಿದ್ದು, ಮೂರು ತಿಂಗಳೊಳಗೆ ಈ ಪ್ರಕ್ರಿಯೆ ಮುಗಿದು ಭವ್ಯವಾದ ರಾಮಮಂದರ ನಿರ್ಮಾಣಕ್ಕೆ ಚಾಲನೆ ಸಿಗಲಿದೆ. ಅತೀ ಶೀಘ್ರದಲ್ಲಿ ರಾಮ ಜನ್ಮಭೂಮಿ ಅಯೋಧ್ಯೆಯ ರಾಮಲಲ್ಲಾದಲ್ಲಿ ರಾಮಮಂದಿರ ತಲೆ ಎತ್ತಲಿದೆ. ಅಯೊಧ್ಯೆ ತೀರ್ಪಿನಿಂದಾಗಿ ಭಾರತವನ್ನು ಸಾಂಸ್ಕೃತಿಕ ದೇಶವನ್ನಾಗಿ ಮಾಡುವ ನಮ್ಮ ಹೋರಾಟಕ್ಕೆ ಬಲ ಸಿಕ್ಕಿದಂತಾಗಿದೆ. ಆರ್ಟಿಕಲ್ 370 ಹಾಗೂ ಅಯೋಧ್ಯೆ ತೀರ್ಪು ಭಾರತದ ದಿಕ್ಕನ್ನು ಬದಲಿಸಲಿದೆ ಎಂದ ಅವರು, ತೀರ್ಪಿನಿಂದಾಗಿ ದೇಶದ ಭಾವೈಕ್ಯತೆಗೆ ಯಾವುದೇ ಧಕ್ಕೆಯಾಗಿಲ್ಲ, ದೇಶದ ಸೌಹಾರ್ದ, ಸಾಮರಸ್ಯಕ್ಕೆ ಮತ್ತಷ್ಟು ಗಟ್ಟಿಯಾಗಿದೆ. ಈ ಮೂಲಕ ಶ್ರೀರಾಮ ಎಂದರೆ ವಿಭಜನೆಯಲ್ಲ, ಒಂದು ಗೂಡಿಸುವುದು ಎಂಬುದರ ಸಾಕ್ಷಾತ್ಕಾರವಾಗಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದು ನೂರು ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ. ನೂರು ದಿನಗಳಲ್ಲಿ ಬಿಜೆಪಿ ಸರಕಾರ ಜನರ ಸಮಸ್ಯೆಗಳ ಪರಿಹಾರಕ್ಕೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿದೆ. ರಾಜ್ಯಾದ್ಯಂತ ಇದ್ದ ಅತಿವೃಷ್ಟಿ ಸವಾಲಿಗೆ ಹಿಂದಿನ ಯಾವುದೇ ಸರಕಾರಗಳೂ ನೀಡದಷ್ಟು ಆದ್ಯತೆ ನೀಡಿ ಸಂತ್ರಸ್ತರ ಅಳಲು, ಸಮಸ್ಯೆಗಳನ್ನು ಪರಿಹರಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಕಟೀಲ್, ಅತಿವೃಷ್ಟಿಯಿಂದಾಗಿ ದ.ಕ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂತ್ರಸ್ತರಿಗೆ ಪರ್ಯಾಯ ಜಾಗ, ಭೂಮಿ ನೀಡಬೇಕೆಂಬ ಬೇಡಿಕೆಗೆ ರಾಜ್ಯ ಸರಕಾರ ಸ್ಪಂದಿಸಿದ್ದು, ಸರಕಾರ ಜಾಗ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ರೈತರು, ನೇಕಾರರು, ಮೀನುಗಾರರ ಸಾಲ ಮನ್ನಾ ಮಾಡಿದ್ದು, ಸರಕಾರದ ಎಲ್ಲ ಇಲಾಖೆಗಳ ಆಡಳಿತಕ್ಕೆ ವೇಗ ನೀಡಿದೆ. ಕೇಂದ್ರ ಸರಕಾರ ಅತಿವೃಷ್ಟಿ ಪರಿಹಾರಧನದ ಅನುದಾನವಾಗಿ 1200 ಕೋ. ರೂ. ಮಧ್ಯಂತರ ಪರಿಹಾರ ಧನ ನೀಡಿದ್ದು, ಬಾಕಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡಲಿದೆ ಎಂದರು.

ಬಾಬಾಬುಡನ್‍ಗಿರಿ ವಿವಾದ ಯಾವಾಗ ಬಗೆಹರಿಯುತ್ತೆ ಎಂಬ ಪತ್ರಕರ್ತರ ಪ್ರಶ್ನೆಗಳಿಗೆ ಪ್ರಶ್ನಿಸಿದ ನಳಿನ್ ಕುಮಾರ್ ಕಟೀಲ್, ದತ್ತಪೀಠ ವಿವಾದ ನ್ಯಾಯಾಲಯದಲ್ಲಿದೆ. ಈ ಸಂಬಂಧ ತಾನು ಯಾವುದೇ ಮಾತಾಡಲ್ಲ ಎಂದು ಪ್ರತಿಕ್ರಿಯಿಸಿದರು.

ಈ ವೇಳೆ ಸಚಿವ ಸಿ.ಟಿ.ರವಿ, ಮುಖಂಡರಾದ ಕೋಟೆ ರಂಗನಾಥ್, ತಮ್ಮಯ್ಯ, ವರಸಿದ್ದಿ ವೇಣುಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು. 

ಯಡಿಯೂರಪ್ಪ ಮತ್ತು ನಾನು ಒಂದೇ ಕುಟುಂಬದ ಸದಸ್ಯರಿದ್ದಂತಿದ್ದೇವೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬಿಜೆಪಿಯಲ್ಲಿನ ಯಾವುದೇ ಸಮಸ್ಯೆಗಳನ್ನು ಎಲ್ಲ ಮುಖಂಡರು ಚರ್ಚಿಸಿ ಬಗೆಹರಿಸಿಕೊಳ್ಳುತ್ತಿದ್ದೇವೆ.
- ನಳೀನ್ ಕುಮಾರ್ ಕಟೀಲ್

"ನ್ಯಾಯಾಲಯದ ಹೊರಗೆ ದತ್ತಪೀಠ ವಿವಾದ ಬಗೆಹರಿಸಿಕೊಳ್ಳಲು ಪ್ರಯತ್ನ"
ದತ್ತಪೀಠ ವಿವಾದವನ್ನು ನ್ಯಾಯಾಲಯ ಪರಸ್ಪರ ಚರ್ಚೆ ಮೂಲಕ ಕಾನೂನಿನ ಹೊರಗೆ ಬಗೆಹರಿಸಿಕೊಳ್ಳಲು ಅವಕಾಶ ನೀಡಿತ್ತು. ಆದರೆ ಹಿಂದಿನ ಕಾಂಗ್ರೆಸ್ ಸರಕಾರ ಜಸ್ಟಿಸ್ ನಾಗಮೋಹನ್‍ದಾಸ್ ನೇತೃತ್ವದ ಸಮಿತಿ ಮೂಲಕ ಪೂರ್ವಗ್ರಹ ಪೀಡಿತವಾದ, ಏಕಪಕ್ಷೀಯವಾದ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ. ಈ ಸಮಿತಿ ಯಾವುದೇ ದಾಖಲೆ, ಹೇಳಿಕೆಗಳನ್ನು ಅಧ್ಯಯನ ಮಾಡಿಲ್ಲ. ಸಮಿತಿ ನೀಡಿದ ವರದಿ ಅನ್ಯಾಯದ ವರದಿಯಾಗಿದೆ. ಇದನ್ನೇ ಸರಕಾರ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಈ ವರದಿ ವಿರುದ್ಧ ಸುಪ್ರೀಕೋರ್ಟ್‍ನಲ್ಲಿ ತಡೆಯಾಜ್ಞೆ ತರಲಾಗಿದೆ. ದತ್ತಪೀಠ ಹಿಂದುಗಳಿಗೆ ಸೇರಿದ್ದು, ಮುಸ್ಲಿಂ ಸಮುದಾಯದ ದರ್ಗಾ ತಾಲೂಕಿನ ನಾಗೇನಹಳ್ಳಿಯಲ್ಲಿರುವುದು ದಾಖಲೆಗಳಲ್ಲಿದೆ. ಹಿಂದಿನ ರಾಜ್ಯ ಸರಕಾರ ನ್ಯಾಯಾಲಯದ ಹೊರಗೆ ಈ ವಿವಾದವನ್ನು ಬಗೆಹರಿಸಿಕೊಳ್ಳಲು ನೀಡಿದ್ದ ಅವಕಾಶವನ್ನು ಕೈಚೆಲ್ಲಿದೆ. ಈ ಸಂಬಂಧ ಬಿಜೆಪಿ ಸರಕಾರ ನ್ಯಾಯಾಲಯದ ಹೊರಗೆ ಈ ವಿವಾದವನ್ನು ಪರಸ್ಪರ ಚರ್ಚೆ ಮೂಲಕ ಇತ್ಯರ್ಥ ಮಾಡಿಕೊಳ್ಳಲು ಪ್ರಮಾಣಿಕವಾಗಿ ಪ್ರಯತ್ನ ನಡೆಸಲಿದೆ.
- ಸಿ.ಟಿ.ರವಿ, ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X