ಲತಾ ಮಂಗೇಶ್ಕರ್ ಆಸ್ಪತ್ರೆಗೆ ದಾಖಲು
ಮುಂಬೈ, ನ. 11: ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಗಾಯಕಿ ಲತಾ ಮಂಗೇಶ್ಕರ್ ಅವರನ್ನು ಇಲ್ಲಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಲತಾ ಮಂಗೇಶ್ಕರ್ ಅವರಿಗೆ ವೈರಲ್ ಸೋಂಕು ಆಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರನ್ನು ಮಂಗಳವಾರ ಬಿಡುಗಡೆ ಮಾಡಲಾಗುವುದು ಎಂದು ಲತಾ ಮಂಗೇಶ್ಕರ್ ಅವರ ಕಿರಿಯ ಸಹೋದರಿ ಉಷಾ ತಿಳಿಸಿದ್ದಾರೆ.
ಲತಾ ಮಂಗೇಶ್ಕರ್ ಅವರಿಗೆ ಸೆಪ್ಟಂಬರ್ 28ಕ್ಕೆ 90 ವರ್ಷವಾಗಲಿದೆ. ಅವರನ್ನು ಮುಂಜಾನೆ 2 ಗಂಟೆಗೆ ಆಸ್ಪತ್ರೆಗೆ ಕರೆ ತರಲಾಯಿತು. ಆಗ ಅವರು ಗಂಭೀರವಾಗಿದ್ದರು. ಕೂಡಲೇ ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಯಿತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಲತಾಮಂಗೇಶ್ಕರ್ ಅವರು ಹಿಂದಿ, ವಿವಿಧ ಪ್ರಾದೇಶಿಕ ಭಾಷೆಗಳು ಹಾಗೂ ವಿದೇಶಿ ಭಾಷೆಗಳಲ್ಲಿ 1000ಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದಾರೆ. 2001ರಲ್ಲಿ ಅವರು ದೇಶದ ಅತ್ಯುಚ್ಛ ಪ್ರಶಸ್ತಿಯಾದ ಭಾರತ ರತ್ನಕ್ಕೆ ಬಾಜನರಾಗಿದ್ದರು.
Next Story