Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಂದ್ ಅಂಕಿತ: ಮಹಾರಾಷ್ಟ್ರದಲ್ಲಿ...

ಕೋವಿಂದ್ ಅಂಕಿತ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ

ವಾರ್ತಾಭಾರತಿವಾರ್ತಾಭಾರತಿ12 Nov 2019 5:38 PM IST
share
ಕೋವಿಂದ್ ಅಂಕಿತ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ

 ಹೊಸದಿಲ್ಲಿ,ನ.12: ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ರಾಜಕೀಯ ಬಿಕ್ಕಟ್ಟಿಗೆ ಸಾಕ್ಷಿಯಾಗಿದ್ದ ಮಹಾರಾಷ್ಟ್ರದಲ್ಲಿ ನಿರೀಕ್ಷೆಯಂತೆ ಮಂಗಳವಾರ ರಾಷ್ಟ್ರಪತಿ ಆಡಳಿತವನ್ನು ಹೇರಲಾಗಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಸಂಪುಟದ ಶಿಫಾರಸಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸಹಿ ಹಾಕುವುದರೊಂದಿಗೆ 19 ದಿನಗಳ ರಾಜಕೀಯ ಗೊಂದಲಕ್ಕೆ ಸದ್ಯಕ್ಕೆ ತೆರೆ ಬಿದ್ದಿದೆ.

ಸಂವಿಧಾನಕ್ಕೆ ಅನುಗುಣವಾಗಿ ಮಹಾರಾಷ್ಟ್ರದಲ್ಲಿ ಸರಕಾರ ರಚನೆಯ ಸಾಧ್ಯತೆಯಿಲ್ಲ ಎಂದು ರಾಜ್ಯಪಾಲ ಭಗತಸಿಂಗ್ ಕೋಶಿಯಾರಿ ಅವರು ವರದಿ ಸಲ್ಲಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಅವಸರದಲ್ಲಿ ಕರೆಯಲಾಗಿದ್ದ ಸಂಪುಟ ಸಭೆಯು ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿತ್ತು. ತನ್ಮಧ್ಯೆ ಸರಕಾರ ರಚನೆಗೆ ಅಗತ್ಯ ಸಂಖ್ಯೆಯ ಶಾಸಕರ ಬೆಂಬಲವನ್ನು ಕ್ರೋಢೀಕರಿಸಲು ತನಗೆ ಹೆಚ್ಚಿನ ಕಾಲಾವಕಾಶವನ್ನು ನಿರಾಕರಿಸಿದ್ದ ರಾಜ್ಯಪಾಲರ ನಿರ್ಧಾರದ ವಿರುದ್ಧ ಶಿವಸೇನೆ ಈಗಾಗಲೇ ಸವೋಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿದ್ದು, ರಾಷ್ಟ್ರಪತಿ ಆಡಳಿತದ ಆದೇಶವನ್ನೂ ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಜ್ಜಾಗಿದೆ.

ಕಳೆದ ತಿಂಗಳು ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮೈತ್ರಿಯೊಂದಿಗೆ ಸ್ಪರ್ಧಿಸಿದ್ದ ಶಿವಸೇನೆಯು ಮುಖ್ಯಮಂತ್ರಿ ಹುದ್ದೆಯನ್ನು ಹಂಚಿಕೊಳ್ಳಲು ಮಿತ್ರಪಕ್ಷವು ನಿರಾಕರಿಸಿದ ಬಳಿಕ ಅದರೊಂದಿಗೆ ಮೈತ್ರಿಯನ್ನು ಕಡಿದುಕೊಂಡಿದೆ.

ರಾಜ್ಯಪಾಲ ಕೋಶಿಯಾರಿ ಅವರು ಕಳೆದ ವಾರ 288 ಸದಸ್ಯಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ 105 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿರುವ ಬಿಜೆಪಿಗೆ ಸರಕಾರ ರಚನೆಗೆ ಆಹ್ವಾನ ನೀಡಿದ್ದರು. ಬಿಜೆಪಿಗೆ ಮೂರು ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು.

 ಶಿವಸೇನೆಯೊಂದಿಗೆ ಹಗ್ಗಜಗ್ಗಾಟದಿಂದಾಗಿ ಬಿಜೆಪಿಯು ಸರಕಾರ ರಚನೆಗೆ ನಿರಾಕರಿಸಿತ್ತು. ಬಳಿಕ ರಾಜ್ಯಪಾಲರು ಸರಕಾರ ರಚಿಸಲು ಸಾಧ್ಯವೇ ಎಂದು ವಿಧಾನಸಭೆಯಲ್ಲಿ 56 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿರುವ ಶಿವಸೇನೆಯನ್ನು ಕೇಳಿದ್ದರು. ಅದಾಗಲೇ ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆಗೆ ಹಿಂಬಾಗಿಲ ಮಾತುಕತೆಗಳಲ್ಲಿ ತೊಡಗಿದ್ದ ಶಿವಸೇನೆ ಸೋಮವಾರ ಸಂಜೆ ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚನೆಗೆ ಒಪ್ಪಿಕೊಂಡಿತ್ತಾದರೂ ತನ್ನೆರಡು ಸಂಭಾವ್ಯ ಮಿತ್ರಪಕ್ಷಗಳ ಬೆಂಬಲ ಪತ್ರಗಳನ್ನು ಸಲ್ಲಿಸಲು ವಿಧಿಸಲಾಗಿದ್ದ 24 ಗಂಟೆಗಳ ಗಡುವನ್ನು ತಪ್ಪಿಸಿಕೊಂಡಿತ್ತು. ಬೆಂಬಲ ಪತ್ರಗಳನ್ನು ಸಲ್ಲಿಸಲು ಇನ್ನೂ 48 ಗಂಟೆಗಳ ಕಾಲಾವಕಾಶವನ್ನು ಅದು ಕೋರಿತ್ತಾದರೂ ರಾಜ್ಯಪಾಲರು ಅದಕ್ಕೆ ನಿರಾಕರಿಸಿದ್ದರು.

ಇದರ ಬೆನ್ನಲ್ಲೇ ಸರಕಾರ ರಚನೆಗೆ ಎನ್‌ಸಿಪಿಯನ್ನು ಆಹ್ವಾನಿಸಿದ್ದ ರಾಜ್ಯಪಾಲರು ಬೆಂಬಲವನ್ನು ಸಾಬೀತುಗೊಳಿಸಲು ಮಂಗಳವಾರ ರಾತ್ರಿ 8:30ರವರೆಗೆ ಸಮಯಾವಕಾಶವನ್ನು ನೀಡಿದ್ದರು. ಆದರೆ ಮಂಗಳವಾರ ಮಧ್ಯಾಹ್ನ ಎನ್‌ಸಿಪಿ ಶಾಸಕಾಂಗ ಪಕ್ಷದ ವರಿಷ್ಠ ಅಜಿತ ಪವಾರ್ ಅವರು ರಾಜಭವನವನ್ನು ಸಂಪರ್ಕಿಸಿ ಸರಕಾರ ರಚನೆಗೆ ಚರ್ಚೆಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶವನ್ನು ಕೋರಿದ್ದರು. ಇದು ರಾಜ್ಯಪಾಲರು ಕೇಂದ್ರಕ್ಕೆ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿ ವರದಿ ಸಲ್ಲಿಸಲು ಕಾರಣವಾಗಿತ್ತು.

ಪವಾರ್ ಅದಾಗಲೇ,ಮಂಗಳವಾರ ರಾತ್ರಿ 8:30ರ ಗಡುವಿನೊಳಗೆ ಶಿವಸೇನೆ ಮತ್ತು ಕಾಂಗ್ರೆಸ್ ಜೊತೆ ಮೈತ್ರಿಯನ್ನು ಅಂತಿಮಗೊಳಿಸಲು ಸಾಧ್ಯವಾಗುತ್ತದೆ ಎಂದು ತಾನು ಭಾವಿಸಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದರು.

ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರೊಂದಿಗೆ ಇಂದು ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು,ಮೈತ್ರಿ ವಿವರಗಳನ್ನು ಅಂತಿಮಗೊಳಿಸಲು ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್ ಅವರ ನೇತೃತ್ವದಲ್ಲಿ ಮೂವರು ಹಿರಿಯ ನಾಯಕರನ್ನು ಮುಂಬೈಗೆ ರವಾನಿಸಿತ್ತಾದರೂ ಅಷ್ಟರಲ್ಲಿ ಕಾಲ ಮಿಂಚಿತ್ತು. ಕಾಂಗ್ರೆಸ್ ಶಿವಸೇನೆಯ ಬೆಂಬಲದೊಂದಿಗೆ ಎನ್‌ಸಿಪಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಲು ಒಲವು ವ್ಯಕ್ತಪಡಿಸಿತ್ತು ಎನ್ನಲಾಗಿದೆ.

ವರದಿಗಳು ತಿಳಿಸಿರುವಂತೆ ರಾಜ್ಯಪಾಲರು ರಾಷ್ಟ್ರಪತಿ ಆಡಳಿತವನ್ನು ಹೇರುವಂತೆ ಕೇಂದ್ರಕ್ಕೆ ತನ್ನ ಶಿಫಾರಸನ್ನು ಕಳುಹಿಸುವ ಮುನ್ನ ಕಾನೂನು ತಜ್ಞರೊಡನೆ ಚುರುಕಿನ ಚರ್ಚೆಗಳನ್ನು ನಡೆಸಿದ್ದರು.

ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ರೆಝಿಲ್‌ಗೆ ತೆರಳಲಿದ್ದ ಮೋದಿ ಅವರು ಕೊನೆಯ ಕ್ಷಣದಲ್ಲಿ ಅವಸರದಿಂದ ಸಂಪುಟ ಸಭೆಯನ್ನು ಕರೆದಿದ್ದರು. ಪರಿಣಾಮವಾಗಿ ಅವರ ವಿಶೇಷ ವಿಮಾನ ಸುಮಾರು 15 ನಿಮಿಷಗಳಷ್ಟು ವಿಳಂಬವಾಗಿ ನಿರ್ಗಮಿಸಿದೆ ಎಂದು ಸರಕಾರಿ ಅಧಿಕಾರಿಯೋರ್ವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X