ಐಟಿ ದಾಳಿ ಪ್ರಕರಣ: ಡಿಕೆಶಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು, ನ.12: ಹೊಸದಿಲ್ಲಿ ನಿವಾಸಗಳ ಮೇಲಿನ ಐಟಿ ದಾಳಿ ಪ್ರಕರಣವನ್ನು ಕೈಬಿಡುವಂತೆ ಕೋರಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಆಪ್ತರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಆರೋಪದಿಂದ ಕೈಬಿಡುವಂತೆ ಕೋರಿ ಡಿಕೆಶಿ, ಆಪ್ತರಾದ ಸುನೀಲ್ ಶರ್ಮಾ, ಸಚಿನ್ ನಾರಾಯಣ್, ರಾಜೇಂದ್ರ, ಆಂಜನೇಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಈ ಹಿಂದೆ ಡಿಕೆಶಿ ಪ್ರಕರಣದಿಂದ ಕೈಬಿಡುವಂತೆ ಕೋರಿ ಕೆಳ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಕೆಳ ನ್ಯಾಯಾಲಯ ಅರ್ಜಿ ತಿರಸ್ಕರಿಸಿದ ಬಳಿಕ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿತ್ತು. ಆದರೆ, ಮಂಗಳವಾರ ಅರ್ಜಿಯನ್ನು ವಜಾಗೊಳಿಸಿದ್ದು, ಇದರಿಂದ ಡಿಕೆಶಿ ಹಾಗೂ ಆಪ್ತರಿಗೆ ಹಿನ್ನಡೆಯಾಗಿದೆ.
Next Story