Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಾದ್ಯಂತ ಹೆಚ್ಚುವರಿ ಸಿಸಿ...

ಬೆಂಗಳೂರಿನಾದ್ಯಂತ ಹೆಚ್ಚುವರಿ ಸಿಸಿ ಕ್ಯಾಮೆರಾ ಅಳವಡಿಕೆ: ಪೊಲೀಸ್ ಆಯುಕ್ತ ಭಾಸ್ಕರ್‌ ರಾವ್

ವಾರ್ತಾಭಾರತಿವಾರ್ತಾಭಾರತಿ12 Nov 2019 10:25 PM IST
share
ಬೆಂಗಳೂರಿನಾದ್ಯಂತ ಹೆಚ್ಚುವರಿ ಸಿಸಿ ಕ್ಯಾಮೆರಾ ಅಳವಡಿಕೆ: ಪೊಲೀಸ್ ಆಯುಕ್ತ ಭಾಸ್ಕರ್‌ ರಾವ್

ಬೆಂಗಳೂರು, ನ.12 : ನಗರದಾದ್ಯಂತ ಸುರಕ್ಷತೆ ಕಾಪಾಡುವ ಸಲುವಾಗಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಏಳೂವರೆ ಸಾವಿರ ಸಿಸಿ ಕ್ಯಾಮೆರಾಗಳ ಖರೀದಿಗೆ ಚಿಂತನೆ ನಡೆಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ಹೇಳಿದ್ದಾರೆ.

ಮಂಗಳವಾರ ನಗರದ ಗಾಂಧೀ ಭವನದಲ್ಲಿ ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದಿಂದ ಆಯೋಜಿಸಿದ್ದ ವಿಡಿಯೋ ಸಂಕಲನಕಾರರ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪೊಲೀಸ್ ಇಲಾಖೆಗೆ ರಾಜ್ಯ ಸರಕಾರದಿಂದ ಸಂಪೂರ್ಣ ಸಹಕಾರ ನೀಡುತ್ತಿದೆ. ನಗರದಲ್ಲಿ ಸುರಕ್ಷತೆ ಕಾಪಾಡಲು ಹಣಕಾಸಿನ ನೆರವನ್ನೂ ನೀಡಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಿದ್ದೇವೆ. ಸಂಚಾರ, ಅಪರಾಧ ಸೇರಿದಂತೆ ಎಲ್ಲ ರೀತಿಯಲ್ಲಿಯೂ ಭಿಗಿ ಭದ್ರತೆ ಕೈಗೊಳ್ಳಲಾಗುವುದು ಎಂದರು.

ಕಾನೂನು ಸಂರಕ್ಷಣೆ ಮಾಡುವ ಸಲುವಾಗಿ ನಮ್ಮ ಪೊಲೀಸ್ ಇಲಾಖೆಯಲ್ಲಿನ ಕ್ಯಾಮೆರಾ ಬಳಕೆ ಸಂಬಂಧ ಪೊಲೀಸರಿಗೆ ತರಬೇತಿ ನೀಡಲಾಗುವುದು. ನಮ್ಮ ಇಲಾಖೆಯಲ್ಲಿ ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಒಬ್ಬೊಬ್ಬರು ಛಾಯಾಗ್ರಾಹಕನ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಂಘದಿಂದ ಆಧುನಿಕ ತಂತ್ರಜ್ಞಾನದ ಬಳಕೆ ಹಾಗೂ ಫೋಟೋಗ್ರಫಿ ಸಂಬಂಧ ಎರಡು ದಿನಗಳ ತರಬೇತಿ ಕಾರ್ಯಾಗಾರ ನಡೆಸಬೇಕು ಎಂದು ಮನವಿ ಮಾಡಿದರು.

ಪೊಲೀಸರಿಗೆ ಪ್ರತಿಯೊಂದಕ್ಕೂ ದಾಖಲಾತಿ ಅತಿಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಛಾಯಾಚಿತ್ರಗಳು ನಮಗೆ ಅತಿಮುಖ್ಯವಾಗಿದೆ. ಹೀಗಾಗಿ, ಪೊಲೀಸರಿಗೆ ತರಬೇತಿ ಮೂಲಕ ಉತ್ತಮ ಛಾಯಾಚಿತ್ರ ತೆಗೆಯಲು ಕಲಿಸಬೇಕಿದೆ. ಬೆಂಗಳೂರು ನಗರ ಅತಿ ವೇಗವಾಗಿ ಮುಂದುವರಿಯುತ್ತಿದೆ. ಇಂತಹ ಸಂದರ್ಭದಲ್ಲಿ ನಗರದಲ್ಲಿ ಹೊಸ ತಂತ್ರಜ್ಞಾನ ಬಳಕೆ ಸಂಬಂಧ ತರಬೇತಿಗಳನ್ನು ಸಂಘದಿಂದ ನಡೆಯಲಿ ಎಂದು ನುಡಿದರು.

ಸಮಾಜದಲ್ಲಿ ಹಲವು ಹುದ್ದೆಗಳ ಅವಧಿ ಮುಗಿಯುತ್ತದೆ. ಮತ್ತೊಂದಿಷ್ಟು ಸೂರ್ಯನಂತೆ ಪ್ರತಿದಿನವೂ ಚಲನೆಯಲ್ಲಿರುತ್ತದೆ. ಅದೇ ರೀತಿ ಛಾಯಾಚಿತ್ರಗಾರರು ಎಂದಿಗೂ ಸೂರ್ಯನಂತೆಯೇ ಪ್ರಜ್ವಲಿಸುತ್ತಿರುತ್ತಾರೆ ಎಂದ ಅವರು, ಛಾಯಾಗ್ರಾಹಕರಿಂದ ಹಲವು ಸಾಫ್ಟ್‌ವೇರ್ ಗಳು, ತಂತ್ರಜ್ಞಾನ ಅಭಿವೃದ್ಧಿ ಆಗಿದೆ. ಎಷ್ಟೇ ತಂತ್ರಜ್ಞಾನ ಇದ್ದರೂ ಕೌಶಲ್ಯರಹಿತ ಛಾಯಾಚಿತ್ರ ಗುಣಮಟ್ಟವಿರಲ್ಲ. ಕೌಶಲ್ಯ ಛಾಯಾಗ್ರಾಹಕನೊಳಗೆ ಇರುತ್ತದೆ ಎಂದು ಭಾಸ್ಕರ್‌ರಾವ್ ಹೇಳಿದರು.

ಸಂಘದ ಅಧ್ಯಕ್ಷ ಎಸ್.ಪರಮೇಶ್ವರ್ ಮಾತನಾಡಿ, ತಂತ್ರಜ್ಞಾನ, ವೈಯಕ್ತಿಕ ಕೌಶಲ್ಯಾಭಿವೃದ್ಧಿ ಸೇರಿದಂತೆ ಅನೇಕ ವಿಷಯಗಳ ಕುರಿತು ಕಾರ್ಯಾಗಾರ ನಡೆಯುತ್ತಿದೆ. ಸಾಮಾಜಿಕ ಮಾಧ್ಯಮವು ಸಾಕಷ್ಟು ಬೆಳೆದಿದೆ. ಆದರೆ, ಅಲ್ಲಿನ ಛಾಯಾಚಿತ್ರಗಳು ಗುಣಮಟ್ಟವಿರಲ್ಲ. ಹೀಗಾಗಿ, ಕಲಾತ್ಮಕ ಛಾಯಾಚಿತ್ರಗಳ ಕುರಿತು ಸಾಮಾಜಿಕ ಮಾಧ್ಯಮ ಮೂಲಕವೇ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಛಾಯಾಗ್ರಾಹಕರು ಹಲವಾರು ಸಂದರ್ಭದಲ್ಲಿ ಪೊಲೀಸರಿಂದ ವಿವಿಧ ರೀತಿಯ ಕಿರುಕುಳಕ್ಕೆ ಒಳಗಾಗುತ್ತಿರುವ ವರದಿಗಳು ಕಂಡುಬಂದಿವೆ. ಈ ಸಂಬಂಧ ಕ್ರಮ ಕೈಗೊಳ್ಳಬೇಕು. ಕಿರುಕುಳಗಳನ್ನು ತಪ್ಪಿಸಬೇಕು ಹಾಗೂ ಅಧಿಕವಾಗುತ್ತಿರುವ ಕ್ಯಾಮೆರಾಗಳ ಕಳ್ಳತನವನ್ನು ತಡೆಯಬೇಕು ಎಂದು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಂಕರ್ಪ ಇಲಾಖೆ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ, ಸಂಘದ ಉಪಾಧ್ಯಕ್ಷರಾದ ಮಹದೇವ, ರವಿಕುಮಾರ್, ಜಂಟಿ ಕಾರ್ಯದರ್ಶಿ ಎಚ್.ಕೆ.ವಸಂತ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X