ಅನರ್ಹ ಶಾಸಕರಿಗೆ ಟಿಕೆಟ್; ಇಂದಿನ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ: ನಳಿನ್ ಕುಮಾರ್
ಬೆಂಗಳೂರು, ನ.13: ಅನರ್ಹ ಶಾಸಕರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಗೊಂಡಿರುವುದರಿಂದ ಅವರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ನೀಡುವ ಬಗ್ಗೆ ಇಂದು(ನ.13) ಸಂಜೆ ನಿರ್ಧರಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ ಕರೆಯಲಾಗಿದೆ. ಇದರಲ್ಲಿ ಅನರ್ಹ ಶಾಸಕರಿಗೆ ಪಕ್ಷದಿಂದ ಟಿಕೆಟ್ ನೀಡುವ ಬಗ್ಗೆ ತೀರ್ಮಾನಿಸಲಾಗುವುದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅನರ್ಹ ಶಾಸಕರಿದ್ದ ಕ್ಷೇತ್ರದಲ್ಲಿ ಪರಾಜಿತರಾಗಿರುವ ಬಿಜೆಪಿ ಅಭ್ಯರ್ಥಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.
Next Story