Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅನರ್ಹರಿಗೆ ಸ್ಪರ್ಧಿಸಲು ಅವಕಾಶ...

ಅನರ್ಹರಿಗೆ ಸ್ಪರ್ಧಿಸಲು ಅವಕಾಶ ನೀಡಿರುವುದನ್ನು ಸ್ವಾಗತಿಸುತ್ತೇನೆ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ13 Nov 2019 8:02 PM IST
share
ಅನರ್ಹರಿಗೆ ಸ್ಪರ್ಧಿಸಲು ಅವಕಾಶ ನೀಡಿರುವುದನ್ನು ಸ್ವಾಗತಿಸುತ್ತೇನೆ: ಸಿದ್ದರಾಮಯ್ಯ

ಬೆಂಗಳೂರು, ನ. 13: ‘ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿರುವುದನ್ನು ಸ್ವಾಗತಿಸುತ್ತೇನೆ. ಆದರೆ, ಪಕ್ಷದಿಂದ ಪಕ್ಷಕ್ಕೆ ಹಾರುವವರನ್ನು ಜನತೆ ಸಹಿಸುವುದಿಲ್ಲ, ಅವರನ್ನು ಜನತೆ ಖಂಡಿತಾ ಸೋಲಿಸುತ್ತಾರೆ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಬುಧವಾರ ಅನರ್ಹ ಶಾಸಕರ ಪ್ರಕರಣ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಪಕ್ಷಾಂತರಿಗಳು ಸೋತಿದ್ದಾರೆ, ಉಪಚುನಾವಣೆಯಲ್ಲಿಯೂ ಅದೇ ಫಲಿತಾಂಶ ಮರುಕಳಿಸುತ್ತದೆ ಎಂದು ಹೇಳಿದರು.

‘ಮೇಲ್ನೋಟಕ್ಕೆ ಅನರ್ಹ ಶಾಸಕರ ಉದ್ದೇಶ ಈಡೇರಿದಂತೆ ಕಂಡರೂ, ನೈತಿಕತೆ ಆಧಾರದಲ್ಲಿ ಇದು ಅವರಿಗೆ ಅತಿದೊಡ್ಡ ಹಿನ್ನಡೆ. ಸಂವಿಧಾನದ ನಿಯಮಗಳನ್ನು ಪಾಲಿಸಿಲ್ಲ ಎಂಬ ಕಾರಣಕ್ಕೆ ಶಾಸಕರು ಅನರ್ಹರಾಗುವುದು ಅವರ ನೈತಿಕತೆಯ ಸೋಲು. ಇದನ್ನು ಜನರು ಗಮನಿಸಿದ್ದಾರೆ ಮತ್ತು ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸಲಿದ್ದಾರೆ’ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನೈತಿಕ ಹೊಣೆಗಾರಿಕೆ ಅತಿಮುಖ್ಯವಾದುದ್ದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಒಂದು ಪಕ್ಷದಿಂದ ಗೆದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇನ್ನೊಂದು ಪಕ್ಷ ಸೇರುವುದು ಅನೈತಿಕ ಮತ್ತು ಪ್ರಜಾಪ್ರಭುತ್ವ ವಿರೋಧಿ ನಡೆ. ಇದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ’ ಎಂದು ಸಿದ್ದರಾಮಯ್ಯ ವಿಶ್ಲೇಷಿಸಿದರು.

‘ಇಂದಿನ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಣಯದ ಮೊದಲ ಭಾಗವನ್ನು ಎತ್ತಿಹಿಡಿಯಲಾಗಿದೆ ಮತ್ತು ಎರಡನೇ ಭಾಗವನ್ನು ಬದಲಾವಣೆಗೊಳಪಡಿಸಿ ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಕಲ್ಪಿಸಲಾಗಿದೆ’ ಎಂದು ಸಿದ್ದರಾಮಯ್ಯ ಹೇಳಿದರು.

‘ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಣಯದಲ್ಲಿ ಎರಡು ಭಾಗಗಳಿವೆ. ಮೊದಲನೆಯದು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿ ಸಂವಿಧಾನದ ನಿಯಮ ಉಲ್ಲಂಘಿದ್ದಕ್ಕಾಗಿ ಅನರ್ಹಗೊಳಿಸಲಾಗಿತ್ತು. ಎರಡನೆಯದು ತಪ್ಪಿತಸ್ಥರೆಂಬ ಕಾರಣಕ್ಕೆ ಈ ಅವಧಿ ಮುಗಿಯುವವರೆಗೆ ಚುನಾವಣೆಗೆ ಸ್ಪರ್ಧಿಸದಂತೆ ಅವರ ಮೇಲೆ ನಿರ್ಬಂಧ ಹೇರಲಾಗಿತ್ತು’ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದರು. ‘ಸ್ವಯಂ ಪ್ರೇರಿತವಲ್ಲದ ರಾಜೀನಾಮೆ ಹಾಗೂ ವಿಪ್ ಉಲ್ಲಂಘಿಸಿದ್ದಕ್ಕಾಗಿ ಸ್ಪೀಕರ್ ರಮೇಶ್ ಕುಮಾರ್ ಅವರು 17 ಮಂದಿ ಶಾಸಕರನ್ನು ಅನರ್ಹಗೊಳಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ. ಈ ತೀರ್ಪಿನಲ್ಲಿ ಸ್ಪೀಕರ್ ಆದೇಶವನ್ನು ಸುಪ್ರೀಂ ಕೋರ್ಟ್ ಭಾಗಶಃ ಎತ್ತಿಹಿಡಿದಿದೆ’ ಎಂದು ಸಿದ್ದರಾಮಯ್ಯ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X