Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಂ.ಫ್ರೆಂಡ್ಸ್ ರಾಜ್ಯೋತ್ಸವದ ಮೊತ್ತ...

ಎಂ.ಫ್ರೆಂಡ್ಸ್ ರಾಜ್ಯೋತ್ಸವದ ಮೊತ್ತ ಮಕ್ಕಳ ದಿನಾಚರಣೆಯಂದು ಕನ್ನಡ ಶಾಲೆಗೆ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ14 Nov 2019 4:01 PM IST
share
ಎಂ.ಫ್ರೆಂಡ್ಸ್ ರಾಜ್ಯೋತ್ಸವದ ಮೊತ್ತ ಮಕ್ಕಳ ದಿನಾಚರಣೆಯಂದು ಕನ್ನಡ ಶಾಲೆಗೆ ಹಸ್ತಾಂತರ

ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಕನ್ನಡ ರಾಜ್ಯೋತ್ಸವದಂದು ತೀರಾ ಕಷ್ಟದಲ್ಲಿರುವ ಕನ್ನಡ ಶಾಲೆಯೊಂದಕ್ಕೆ ದಿನಕ್ಕೆ ಒಂದು, ಮೂರು, ಐದು ಅಥವಾ 10 ರೂಪಾಯಿಯಂತೆ ಸದಸ್ಯರಿಂದ ದೇಣಿಗೆ ಸಂಗ್ರಹಿಸಿತ್ತು. ಅದರಲ್ಲಿ ವಾರ್ಷಿಕ ಮುಂಗಡವಾಗಿ ಶೇಖರಣೆಯಾದ 43,000 ರೂಪಾಯಿಯನ್ನು ಬಂಟ್ವಾಳ ತಾಲೂಕಿನ ಕಾನತ್ತಡ್ಕ ಶ್ರೀಕೃಷ್ಣ ವಿದ್ಯೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಗುರುವಾರ ಮಕ್ಕಳ ದಿನಾಚರಣೆಯಂದು ಹಸ್ತಾಂತರಿಸುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿತು.

ಕಾನತ್ತಡ್ಕ ಶಾಲೆಯು ಒಂದು ಸಮಯದಲ್ಲಿ ವೈಭವಯುತವಾಗಿ ನೂರಾರು ಮಕ್ಕಳೊಂದಿಗೆ ನಳನಳಿಸುತ್ತಿತ್ತು. ಆದರೆ  ಈ ಕನ್ನಡ ಶಾಲೆ ಇತ್ತೀಚಿನ ದಿನಗಳ ಆಂಗ್ಲ ವ್ಯಾಮೋಹ ಹಾಗೂ ಸರಕಾರಿ ಸವಲತ್ತು ಸಿಗುವ ಶಾಲೆಯ ಪರಿಣಾಮದಿಂದಾಗಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಾ 36ಕ್ಕೆ ತಲಪಿತ್ತು. ಮೂವರು ಗೌರವ ಶಿಕ್ಷಕರಿಗೆ ಸಂಬಳ ಕೊಡಲು ಪರದಾಡುವ ಪರಿಸ್ಥಿತಿಯನ್ನರಿತ ಎಂ.ಫ್ರೆಂಡ್ಸ್ ಟ್ರಸ್ಟ್ ಕಾನತ್ತಡ್ಕ ಕನ್ನಡ ಶಾಲೆಗೆ ಸದಸ್ಯರಿಂದ ರಾಜ್ಯೋತ್ಸವಕ್ಕೆ ಹಣ ಸಂಗ್ರಹಿಸಿ ಗುರುವಾರ ಅದನ್ನು ಶಾಲೆಗೆ ತೆರಳಿ ಹಸ್ತಾಂತರಿಸಿತು.

ಎಂ.ಫ್ರೆಂಡ್ಸ್ ಅಧ್ಯಕ್ಷ ಮುಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು, ಪ್ರಧಾನ ಕಾರ್ಯದರ್ಶಿ ರಶೀದ್ ವಿಟ್ಲ, ಕೋಶಾಧಿಕಾರಿ ಅಬೂಬಕರ್ ನೋಟರಿ ವಿಟ್ಲ, ಸದಸ್ಯರಾದ ಹನೀಫ್ ಕುದ್ದುಪದವು, ಟಿ.ಕೆ.ಮಹಮ್ಮದ್ ಟೋಪ್ಕೋ, ರಫೀಕ್ ನೆಟ್ಲ ಕಲ್ಲಡ್ಕ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ ಭಟ್ ಕಾನ ಸ್ವಾಗತಿಸಿದರು. ಶಿಕ್ಷಕ ಐತಪ್ಪ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕರಾದ ಉಷಾ, ದಿವ್ಯಾ, ಮುನ್ಶೀರಾ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಮಕ್ಕಳ ದಿನಾಚರಣೆಯ ವಿವಿಧ ಆಟೋಟ ಸ್ಪರ್ಧೆಗಳ ಬಹುಮಾನವನ್ನು ಇದೇ ಸಂದರ್ಭ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X