Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇಶದ ರಫ್ತು ಕ್ಷೇತ್ರದಲ್ಲಿ ಕರ್ನಾಟಕ...

ದೇಶದ ರಫ್ತು ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಗೌರವ್‌ ಗುಪ್ತ

ಬೆಂಗಳೂರು: 35ನೇ ಇನ್ವೆಸ್ಟ್ ಇಂಟರ್‌ನ್ಯಾಷನಲ್ ಮತ್ತು 8ನೇ ಏಷ್ಯನ್ ವ್ಯಾಲ್ಯೂ ಎಂಜಿನಿಯರಿಂಗ್ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ15 Nov 2019 11:10 PM IST
share
ದೇಶದ ರಫ್ತು ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಗೌರವ್‌ ಗುಪ್ತ

ಬೆಂಗಳೂರು, ನ 15: ದೇಶದ ರಫ್ತು ಚಟುವಟಿಕೆಯಲ್ಲಿ ಕರ್ನಾಟಕವು ಸುಮಾರು ಮೂರನೇ ಒಂದರಷ್ಟು ಕೊಡುಗೆ ನೀಡುತ್ತಿದ್ದು, ಬೆಂಗಳೂರು ನಗರ ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ನಡೆಯುತ್ತಿರುವ ಎರಡು ದಿನಗಳ 35ನೇ ಇನ್ವೆಸ್ಟ್ ಇಂಟರ್‌ನ್ಯಾಷನಲ್ ಮತ್ತು 8ನೇ ಏಷ್ಯನ್ ವ್ಯಾಲ್ಯೂ ಇಂಜಿನಿಯರಿಂಗ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ದೇಶದಿಂದ ಒಟ್ಟಾರೆ 340 ಶತಕೋಟಿ ಡಾಲರ್ ಮೊತ್ತದಷ್ಟು ಉತ್ಪನ್ನಗಳನ್ನು ರಪ್ತು ಮಾಡುತ್ತಿದ್ದು, ಕರ್ನಾಟಕದಿಂದಲೇ 100 ಶತಕೋಟಿ ಡಾಲರ್‌ಗೂ ಹೆಚ್ಚು ಮೊತ್ತದ ಉತ್ಪನ್ನಗಳನ್ನು ರಫ್ತು ಮಾಡುತ್ತಿರುವುದು ವಿಶೇಷ ಎಂದರು.

ರಾಜ್ಯದಲ್ಲಿ ಮೈಸೂರು, ಹುಬ್ಬಳ್ಳಿಯಂತಹ ಎರಡನೇ ಹಂತದ ನಗರಗಳೂ ಸಹ ಉತ್ತಮ ಬೆಳವಣಿಗೆ ಸಾಧಿಸುತ್ತಿವೆ. ಇಂತಹ ನಗರಗಳಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಅಲ್ಲಿಯೂ ಸಹ ಹೂಡಿಕೆಗೆ ಪ್ರಶಸ್ತವಾದ ವಾತಾವರಣವಿದೆ. ಇಡೀ ದೇಶದಲ್ಲಿ ಕರ್ನಾಟಕ ನಾವೀನ್ಯತೆಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕೈಗಾರಿಕಾ ಬೆಳವಣಿಗೆಗೆ ಸರಕಾರ ಪ್ರಧಾನ ಆದ್ಯತೆ ನೀಡುತ್ತಿದೆ. ಸುಗಮ ವ್ಯವಹಾರ ವಲಯದಲ್ಲಿ ಮುಂಚೂಣಿಯಲ್ಲಿದ್ದು, ಸುಗಮ ವಹಿವಾಟು ಕ್ಷೇತ್ರದಲ್ಲಿ ದೇಶದ ಪ್ರಮುಖ ನಾಲ್ಕು ನಗರಗಳ ಪೈಕಿ ಬೆಂಗಳೂರು ಮುಂಚೂಣಿಯಲ್ಲಿದೆ ಎಂದು ವಿಶ್ವಬ್ಯಾಂಕ್ ಸಹ ಮಾನ್ಯತೆ ನೀಡಿದೆ. ಕಾಲಮಿತಿಯೊಳಗೆ ಸರಕಾರಿ ಸೇವೆಗಳನ್ನು ನೀಡುತ್ತಿದ್ದು, ಇದಕ್ಕೆ ಸಕಾಲ ಯೋಜನೆ ಜ್ವಲಂತ ನಿದರ್ಶನವಾಗಿದೆ ಎಂದು ಅವರು ತಿಳಿಸಿದರು.

ಇಂಜಿನಿಯರಿಂಗ್ ಕ್ಷೇತ್ರದಲ್ಲೂ ಸಹ ಉತ್ತಮವಾಗಿದ್ದು, ಕರ್ನಾಟಕ ವಿಶ್ವ ಮಟ್ಟದ ಇಂಜಿನಿಯರ್‌ಗಳನ್ನು ನೀಡಿದೆ. ಬೆಂಗಳೂರು ವ್ಯಾಲ್ಯೂ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಗಮನಾರ್ಹ ಸುಧಾರಣೆ ಕಾಣುತ್ತಿದ್ದು, ಕಳೆದೊಂದು ಶತಮಾನದಿಂದ ಹಲವಾರು ಬೆಳವಣಿಗೆಗೆ ಈ ನಗರ ಸಾಕ್ಷಿಯಾಗಿದೆ. ದೇಶದಲ್ಲಿ ಮೊದಲು ವಿದ್ಯುತ್ ಕಂಡ ನಗರ, ಭಾರತೀಯ ವಿಜ್ಞಾನ ಮಂದಿರ, ವಿಮಾನ ಕೈಗಾರಿಕಾ ಕಾರ್ಖಾನೆ, ನ್ಯಾನೋ ಮಾಹಿತಿ, ಜೈವಿಕ ತಂತ್ರಜ್ಞಾನ, ರೊಬೊಟಿಕ್ ತಂತ್ರಜ್ಞಾನ, ರೊಬೊಟಿಕ್ ಶಸ್ತ್ರಚಿಕಿತ್ಸೆ, ಉತ್ಪಾದನಾ ವಲಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ ಎಂದು ಅವರು ಶ್ಲಾಘನೆ ವ್ಯಕ್ತಪಡಿಸಿದರು.

ವ್ಯಾಲ್ಯೂ ಇಂಜಿನಿಯರಿಂಗ್ ವಲಯದ ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ತಾಂತ್ರಿಕ ಕ್ಷೇತ್ರದಲ್ಲಿ ಮೌಲ್ಯಕ್ಕೆ ಹೆಚ್ಚು ಆದ್ಯತೆ ನೀಡಿದೆ. ಕ್ರಿಯಾಶೀಲತೆಗೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಈ ಸಮ್ಮೇಳನ ನಡೆಸಲಾಗುತ್ತಿದ್ದು, ಜಾಗತಿಕವಾಗಿ ಬಳಕೆಯಲ್ಲಿರುವ ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳಲು ಆದ್ಯತೆ ನೀಡಲಾಗುತ್ತಿದೆ. ವ್ಯಾಲ್ಯೂ ಇಂಜಿನಿಯರಿಂಗ್ ವಲಯದಲ್ಲಿ ಗಡಿಗಳನ್ನು ಮೀರಿ ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳುವುದು ಈ ಬಾರಿಯ ಘೋಷವಾಕ್ಯವಾಗಿದೆ ಎಂದು ಹೇಳಿದರು.

ವ್ಯಾಲ್ಯೂ ಇಂಜಿನಿಯರಿಂಗ್ ಸಂಸ್ಥೆಯ ದಕ್ಷಿಣ ವಲಯದ ಅಧ್ಯಕ್ಷ ಅಮಿತ್ ಕುಮಾರ್ ಮಾತನಾಡಿ, ಮುಂಬೈ ನಂತರ ಬೆಂಗಳೂರಿನಲ್ಲಿ ಈ ಸಮ್ಮೇಳನ ನಡೆಯುತ್ತಿದೆ. ಅಮೆರಿಕ, ನೆದರ್ ಲ್ಯಾಂಡ್, ಕೆನಡಾ, ದೇಶಾದ್ಯಂತ ಹಲವಾರು ಮಂದಿ ಪಾಲ್ಗೊಂಡಿದ್ದು, 72 ಪ್ರಬಂಧಗಳನ್ನು ಮಂಡಿಸಲಾಗುತ್ತಿದೆ. ಟಾಟಾ, ಇಟಾಚಿ, ಜಿಇ, ಭಾಷ್‌ನಂತಹ ಸಂಸ್ಥೆಗಳು ಪಾಲ್ಗೊಂಡಿದ್ದು, ಶನಿವಾರ ತಜ್ಞರು ತಾಂತ್ರಿಕ ಪೇಪರ್‌ಗಳನ್ನು ಮಂಡಿಸಲಿದ್ದು. ಇದರಿಂದ ಕರ್ನಾಟಕಕ್ಕೆ ಹಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X