Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ. 8ರಂದು "ನಮ್ಮ ಬಿರುವೆರ್'' ಐಕ್ಯತಾ...

ಡಿ. 8ರಂದು "ನಮ್ಮ ಬಿರುವೆರ್'' ಐಕ್ಯತಾ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ15 Nov 2019 11:14 PM IST
share
ಡಿ. 8ರಂದು ನಮ್ಮ ಬಿರುವೆರ್ ಐಕ್ಯತಾ ಸಮಾವೇಶ

ಬಂಟ್ವಾಳ, ನ. 15: ಡಿ. 8ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಬಿಲ್ಲವ ಕಣ್ಮಣಿಗಳ ಅಭಿನಂದನಾ ಸಮಿತಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಂಘಗಳ ಹಾಗೂ ಯುವವಾಹಿನಿ ಬಂಟ್ವಾಳ ಮತ್ತು ಮಾಣಿ ಘಟಕ ಸಹಯೋಗ ದೊಂದಿಗೆ ನಡೆಯಲಿರುವ "ನಮ್ಮ ಬಿರುವೆರ್" ಐಕ್ಯತಾ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸಜೀಪ ಬ್ರಹ್ಮಶ್ರೀ ನಾರಾಯಣ ಸಭಾ ಭವನದಲ್ಲಿ ಶುಕ್ರವಾರ ನಡೆಯಿತು.

ಸಮಿತಿಯ ಗೌರವಾಧ್ಯಕ್ಷರಾದ ಎ.ರುಕ್ಮಯ ಪೂಜಾರಿ, ಮಾಯಿಲಪ್ಪ ಸಾಲ್ಯಾನ್, ಸಂಜೀವ ಪೂಜಾರಿ ಜಂಟಿಯಾಗಿ ಅಮಂತ್ರಣ ಪತ್ರಿಕೆಯ ಬಿಡುಗಡೆ ಮಾಡಿದರು.

ಬಳಿಕ ಮಾಜಿ ಶಾಸಕ ರುಕ್ಮಯ ಪೂಜಾರಿ ಮಾತನಾಡಿ, ಅಂದು ಬೆಳಿಗ್ಗೆ 8.30ಕ್ಕೆ ಬಿ.ಸಿ.ರೋಡಿನ ನಾರಾಯಣಗುರು ಮಂದಿರದಲ್ಲಿ ಗುರುಪೂಜೆ, ಸ್ಪರ್ಶ ಕಲಾಮಂದಿರದವರೆಗೆ ಚೆಂಡೆ ವಾದ್ಯದೊಂದಿಗೆ ಸ್ವಾಮೀಜಿಗಳಿಗೆ ಮತ್ತು ಅತಿಥಿ ಗಣ್ಯರಿಗೆ ಪೂರ್ಣಕುಂಭ ಸ್ವಾಗತ ನಡೆಯಲಿದೆ. ವಿಶೇಷ ಅಕರ್ಷಣೆಯಾಗಿ ಚಿತ್ರ ನಟ ನಟಿಯರು, ಯಕ್ಷಗಾನ ಕಲಾವಿದರು, ಬಾಲನಟಿಯರು ಭಾಗಹಿಸುವರು. ಮಧ್ಯಾಹ್ನ 2 ಗಂಟೆಯಿಂದ ``ನಾರಾಯಣಗುರು'' ತುಳು ಚಲನಚಿತ್ರ ಪ್ರದರ್ಶನ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಬಿಲ್ಲವರು ಈ ಜಿಲ್ಲೆಯ ಮೂಲನಿವಾಸಿಗಳಾಗಿದ್ದರೂ ನಿರೀಕ್ಷಿತ ಸ್ಥಾನಮಾನ ಸಿಗಲಿಲ್ಲ ಎಂದರೆ ತಪ್ಪಾಗಲಾರದು. ಐಕ್ಯತಾ ಸಮಾವೇಶದ ಮೂಲಕ ಸಮಾಜದ ಜಾಗೃತಿ ಮೂಡಿಸುವ ಕೆಲಸವಾಗಬೇಕಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಒಂದೇ ಮನಸ್ಸಿನಿಂದ ಭಾಗವಹಿಸಿ, ಯಶಸ್ವಿಗೊಳಿಸಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸುಮಾರು ಹತ್ತು ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು. ಗೌರವಾಧ್ಯಕ್ಷ ಸಂಜೀವ ಪೂಜಾರಿ ಮಾತನಾಡಿ, ಸಾಮೂಹಿಕ ನಾಯಕತ್ವದಿಂದ ಮಾತ್ರ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ ಎಂದರು.

ಯಶವಂತ ದೇರಾಜೆ ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಿ ಮಾತನಾಡಿ, ಒಗ್ಗಟ್ಟಿನಿಂದ ಮಾತ್ರ ಸಮಾಜ ಶಕ್ತಿಯುತವಾಗಿ ಬೆಳೆಯಲು ಸಾಧ್ಯ. ನಮ್ಮ ಶಕ್ತಿಯ ಪ್ರದರ್ಶನಕ್ಕೆ ಈ ಕಾರ್ಯಕ್ರಮ ವೇದಿಕೆಯಾಗಲಿದ್ದು, ರಾಜಕೀಯ ರಹಿತ ಯಶಸ್ವಿ ಕಾರ್ಯಕ್ರಮದೊಂದಿಗೆ ಇತರ ಸಮುದಾಯಕ್ಕೆ ಮಾದರಿಯಾಗಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಉಪಾಧ್ಯಕ್ಷರಾದ ಜಯಂತಿ ಪೂಜಾರಿ, ಚೆನ್ನಪ್ಪ ಕೋಟ್ಯಾನ್, ರಾಜೇಶ್ ಬಾಳೆಕಲ್ಲು, ಕಾರ್ಯದರ್ಶಿ ಜಗದೀಶ್ ಕೊಯಿಲ, ಸಮಿತಿ ಹಾಗೂ ವಿವಿಧ ವಲಯದ ಪ್ರಮುಖರಾದ ಯಶವಂತ ಪೊಳಲಿ, ಬೇಬಿಕುಂದರ್, ಮೋನಪ್ಪ ದೇವಸ್ಯ, ಪುರುಷ ಸಾಲಿಯಾನ್, ವೆಂಕಪ್ಪ ಪೂಜಾರಿ, ಇಂದ್ರೇಶ್, ಸತೀಶ್ ಪೂಜಾರಿ, ಶ್ರೀಧರ ಅಮೀನ್, ಅನಂದ ಸಾಲಿಯಾನ್, ಶಾರದಾ ಎಂ, ಪ್ರೇಮನಾಥ ಕೆ, ಸುಂದರ ಪೂಜಾರಿ ಬೋಳಂಗಡಿ, ಲೋಕೇಶ್ ಪೂಜಾರಿ, ಜಯಶಂಕರ್ ಕಾನ್ಸಾಲೆ, ರಮೇಶ್ ಮುಜಲ, ರೋಶನ್ ಅಮೀನ್, ಕೃಷ್ಣಪ್ಪ ಪೂಜಾರಿ ಕೇಪುಲಕೋಡಿ, ರಮೇಶ್ ಹೊಸಕಟ್ಟ, ಗಣೇಶ್ ಪೂಜಾರಿ ಪೂಂಜರಕೋಡಿ, ಪ್ರವೀಣ್ ಪೂಜಾರಿ, ಸೀತಾರಾಮ್ ಶಾಂತಿ, ಕೊರಗಪ್ಪ ಪೂಜಾರಿ ಕೊಯಿಲ, ಸುಂದರ ಪೂಜಾರಿ ಬೋಳಿಯಾರ್, ಭವಾನಿ ಎನ್ ಅಮೀನ್, ಸುಜಾತಮೋಹನ್ ದಾಸ್ ಪೂಜಾರಿ ಬೊಳ್ಳಾಯಿ ಮತ್ತಿತರರು ಉಪಸ್ಥಿತರಿದ್ದರು.

ಜಗದೀಶ್ ಕೊಯಿಲ ಸ್ವಾಗತಿಸಿ, ಲೋಕೇಶ್ ಸುವರ್ಣ ಅಲೆತ್ತೂರು ವಂದಿಸಿದರು. ಶ್ರೀಧರ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X