Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಂಡೀಪುರ ರಾತ್ರಿ ಸಂಚಾರ ನಿಷೇಧ: ಬದಲಿ...

ಬಂಡೀಪುರ ರಾತ್ರಿ ಸಂಚಾರ ನಿಷೇಧ: ಬದಲಿ ರಸ್ತೆ ಬಳಸಿಕೊಳ್ಳಲು ಸುಪ್ರೀಂಗೆ ಕೇಂದ್ರ ಸರ್ಕಾರ ಅಫಿದವಿತ್

ವಾರ್ತಾಭಾರತಿವಾರ್ತಾಭಾರತಿ17 Nov 2019 5:58 PM IST
share
ಬಂಡೀಪುರ ರಾತ್ರಿ ಸಂಚಾರ ನಿಷೇಧ: ಬದಲಿ ರಸ್ತೆ ಬಳಸಿಕೊಳ್ಳಲು ಸುಪ್ರೀಂಗೆ ಕೇಂದ್ರ ಸರ್ಕಾರ ಅಫಿದವಿತ್

ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದ ಅಭಯಾರಣ್ಯದಲ್ಲಿ ಹಾದು ಹೋಗುವ ಕರ್ನಾಟಕ ಕೇರಳ ರಾಜ್ಯ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766 (ಹಿಂದೆ 212) ಅನ್ನು ಶಾಶ್ವತವಾಗಿ ಮುಚ್ಚಿದರೆ, ಅದಕ್ಕೆ ಪರ್ಯಾಯವಾಗಿ ರಾಜ್ಯ ಹೆದ್ದಾರಿ- 90, ರಾಜ್ಯ ಹೆದ್ದಾರಿ- 89, ರಾಜ್ಯ ಹೆದ್ದಾರಿ- 59 ಮತ್ತು ಪ್ರಮುಖ ಜಿಲ್ಲಾ ರಸ್ತೆಗಳಾದ 002, 001 ಅನ್ನು ಬಳಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ಅಫಿದವಿತ್ ಸಲ್ಲಿಸಿದೆ.

ಕರ್ನಾಟಕ ಸರ್ಕಾರ ಬಂಡೀಪುರ ಅಭಯಾರಣ್ಯದೊಳಗೆ ರಾತ್ರಿ ಸಂಚಾರವನ್ನು ನಿಷೇಧಿಸಿರುವುದನ್ನು ಪ್ರಶ್ನಿಸಿ ಕೇರಳ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕರ್ನಾಟಕದ ಕ್ರಮವನ್ನು ಎತ್ತಿ ಹಿಡಿದಿದ್ದ ಸುಪ್ರೀಂ ಕೋರ್ಟ್ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯನ್ನು ಸಂಪೂರ್ಣವಾಗಿ ಮುಚ್ಚುವ ನಿಟ್ಟಿನಲ್ಲಿ ಯೋಚನೆ ಮಾಡುವಂತೆಯೂ, ಪರ್ಯಾಯ ರಸ್ತೆಯನ್ನು ಹುಡುಕುವಂತೆಯೂ ಆ.7ರಂದು ಸೂಚಿಸಿ ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳ ಸಮಯ ನೀಡಿತ್ತು.
ಅದರಂತೆ ಕೇಂದ್ರ ಸರ್ಕಾರದ ಸಾರಿಗೆ ಸಚಿವಾಲಯದ ಮುಖ್ಯ ಇಂಜಿನಿಯರ್ ಸುಪ್ರೀಂ ಕೋರ್ಟ್‍ಗೆ ಅಫಿದವಿತ್ ಸಲ್ಲಿಸಿದ್ದಾರೆ.

ಶುಕ್ರವಾರ ಪ್ರಕರಣದ ವಿಚಾರಣೆ ನ್ಯಾ.ರೋಹಿಂಟನ್ ನಾರಿಮನ್ ಮತ್ತು ನ್ಯಾ.ರವೀಂದ್ರ ಭಟ್ ಅವರ ನ್ಯಾಯಪೀಠದ ಮುಂದೆ ಬಂದ ಸಂದರ್ಭದಲ್ಲಿ ಅಫಿದವಿತ್ ಸಲ್ಲಿಕೆಯಾಗಿರಲಿಲ್ಲ. ಇದಕ್ಕೆ ನ್ಯಾ.ನಾರಿಮನ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಇಂದೇ ಅಫಿದವಿತ್ ಸಲ್ಲಿಸುವುದಾಗಿ ಹೇಳಿದ ಕೇಂದ್ರ ಸರ್ಕಾರ ಆ ಬಳಿಕ ಅಫಿದವಿತ್ ಸಲ್ಲಿಕೆ ಮಾಡಿದೆ.

ರಾಜ್ಯ ಸರ್ಕಾರದ್ದೇ ಜವಾಬ್ದಾರಿ: ರಾಜ್ಯ ಹೆದ್ದಾರಿ 90, 89 ಕರ್ನಾಟಕದಲ್ಲಿದ್ದು, ರಾಜ್ಯ ಹೆದ್ದಾರಿ 59 ಮತ್ತು ಪ್ರಮುಖ ಜಿಲ್ಲಾ ರಸ್ತೆಗಳಾದ 002, 001 ಕೇರಳದಲ್ಲಿವೆ. ಕೇರಳವು ತನ್ನ ಜಿಲ್ಲಾ ರಸ್ತೆಗಳನ್ನು ರಾಜ್ಯ ಹೆದ್ದಾರಿಯನ್ನಾಗಿ ತಾಂತ್ರಿಕವಾಗಿ ಮತ್ತು ಜಾಗದ ಅಗತ್ಯಗಳಿಗೆ ಅನುಗುಣವಾಗಿ ಮೇಲ್ದರ್ಜೆಗೇರಿಸಬೇಕು. ಈ ರಸ್ತೆಗಳನ್ನು ದ್ವಿಪಥಗೊಳಿಸಿ ರಸ್ತೆಯ ಬದಿಯಲ್ಲಿ ನಿರ್ದಿಷ್ಟಪ್ರಮಾಣದ ಜಾಗವನ್ನು ನೀಡುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರಗಳು ನಿರ್ವಹಿಸಬೇಕು. ರಾಜ್ಯ ಹೆದ್ದಾರಿಗಳ ಮಾನದಂಡವನ್ನು ಈ ರಸ್ತೆಗಳು ಪೂರೈಸಿದರೆ ಬಳಿಕ ಆ ಪರ್ಯಾಯ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿಗಣಿಸಲು ಚಿಂತಿಸಲಾಗುವುದು ಎಂದು ಅಫಿದವಿತ್ ನಲ್ಲಿ ತಿಳಿಸಲಾಗಿದೆ.

ಕೇರಳದ ಕೋಯಿಕ್ಕೋಡ್ ಅನ್ನು ಕರ್ನಾಟಕದ ಕೊಳ್ಳೇಗಾಲದೊಂದಿಗೆ ಸೇರಿಸುವ 272 ಕಿ.ಮೀ.ಗಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಬಂಡೀಪುರ ಅಭಯಾರಣ್ಯದೊಳಗೆ ರಾತ್ರಿ 9 ರಿಂದ ಬೆಳಗ್ಗೆ 6ರವರೆಗೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X