Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೆಹಲಿಯ ಕಲುಷಿತ ವಾತಾವರಣಕ್ಕೆ ತುಳಸಿ,...

ದೆಹಲಿಯ ಕಲುಷಿತ ವಾತಾವರಣಕ್ಕೆ ತುಳಸಿ, ಅಲೆವೇರಾ, ಅಮೃತಬಳ್ಳಿ ಬೆಳೆಸುವುದರಿಂದ ಪರಿಹಾರ: ಬಾಬಾ ರಾಮ್‌ದೇವ್

ವಾರ್ತಾಭಾರತಿವಾರ್ತಾಭಾರತಿ17 Nov 2019 6:12 PM IST
share
ದೆಹಲಿಯ ಕಲುಷಿತ ವಾತಾವರಣಕ್ಕೆ ತುಳಸಿ, ಅಲೆವೇರಾ, ಅಮೃತಬಳ್ಳಿ ಬೆಳೆಸುವುದರಿಂದ ಪರಿಹಾರ: ಬಾಬಾ ರಾಮ್‌ದೇವ್

ಉಡುಪಿ, ನ.17: ಮನೆ ಆವರಣದಲ್ಲಿ ಅಗಾಧವಾದ ಔಷಧೀಯ ಗುಣ ಹೊಂದಿರುವ ತುಳಸಿ, ಅಲೆವೇರಾ, ಅಮೃತಬಳ್ಳಿಗಳನ್ನು ಬೆಳೆಸಬೇಕು. ಡೆಂಗ್, ಚಿಕೂನ್ ಗುನ್ಯದಂತಹ ರೋಗಗಳಿಗೂ ಪರಿಣಾಮಕಾರಿ ಔಷಧವಾಗಿದೆ. ಇದರಿಂದ ವಾತಾವರಣ ಕೂಡ ಶುದ್ಧವಾಗಿರುತ್ತದೆ. ದೆಹಲಿಯ ಕಲುಷಿತ ವಾತಾವರಣ ದೂರ ಮಾಡಬೇಕಾದರೆ ಮೊದಲು ಈ ಕೆಲಸ ಮಾಡಬೇಕು ಎಂದು ಎಂದು ಯೋಗಗುರು ಬಾಬಾ ರಾಮ್‌ದೇವ್ ಹೇಳಿದ್ದಾರೆ.

ಪರ್ಯಾಯ ಪಲಿಮಾರು ಮಠ ಹಾಗೂ ಹರಿದ್ವಾರದ ಪತಂಜಲಿ ಯೋಗ ಪೀಠ ಟ್ರಸ್ಟ್‌ನ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಎರಡನೆ ದಿನವಾದ ರವಿವಾರ ಮುಂಜಾನೆ ನಡೆದ ಯೋಗ ಶಿಬಿರದಲ್ಲಿ ಅವರು ಮಾತನಾಡುತಿದ್ದರು.

ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಬೇಕು. ರಾತ್ರಿ ಏಳು ಗಂಟೆಯೊಳಗೆ ಆಹಾರ ಸೇವಿಸಿದರೆ ಉತ್ತಮ. ಆದರೆ ರಾತ್ರಿ ಎಂಟು ಗಂಟೆಯನಂತರ ಆಹಾರ ಸೇವನೆ ಮಾಡಲೇಬಾರದು. ಅಕ್ಕಿ, ಗೋಧಿ ಪ್ರಮಾಣವನ್ನು ಕಡಿಮೆ ಮಾಡಿ ತರಕಾರಿಗಳ ಸೇವನೆ ಹೆಚ್ಚಿಸಬೇಕು. ಪ್ರತಿದಿನಕ್ಕೆ ಮೂರು ಲೀಟರ್ ನೀರು ಕುಡಿಯಬೇಕು ಎಂದರು.

ಇತರ ದಿನಗಳಿಗಿಂತ ರವಿವಾರ ಹೆಚ್ಚಿನ ಸಮಯವನ್ನು ಯೋಗಾಸನ, ಪ್ರಾಣಾಯಾಮ ಅಭ್ಯಾಸಗಳಿಗೆ ಮೀಸಲಿಡಬೇಕು. ರಜಾ ದಿನ ಎಂಬ ಕಾರಣಕ್ಕೆ ರವಿವಾರ ನಿದ್ರೆ ಹಾಗೂ ಹೊರಗಿನ ಆಹಾರಗಳಿಗೆ ಆದ್ಯತೆ ನೀಡುವುದು ಸರಿಯಲ್ಲ. ಪ್ರತಿಯೊಬ್ಬರು ತಿನ್ನುವ ಆಹಾರದ ಪ್ರಮಾಣವನ್ನು ಕಡಿಮೆ ಮಾಡ ಬೇಕು ಎಂದು ಅವರು ತಿಳಿಸಿದರು.

ಜನ್ಮದಿನದಂದು ಕ್ಯಾಂಡಲ್ ಉರಿಸುವ ಬದಲು ಹವನಗಳನ್ನು ಮಾಡಬೇಕು. ಮುಖ್ಯಮಂತ್ರಿಯಾಗಿದ್ದ ಖಂಡೂರಿ ಸೂರ್ಯನಿಗೆ ಅರ್ಘ್ಯ ಪ್ರದಾನ ಮಾಡಿರುವುದರಿಂದ ಅವರ ಕಣ್ಣಿನ ಸಮಸ್ಯೆ ಪರಿಹಾರ ಕಂಡಿತು. ರೇಡಿಯೇಶನ್ ತಡೆ ಶಕ್ತಿ ಹೊಂದಿರುವ ತುಳಸಿ ಗಿಡಕ್ಕೆ ನೀರು ಹಾಕಿ, ಸೂರ್ಯನಿಗೆ ಅರ್ಘ್ಯ ಕೊಡುವುದು ವಿಜ್ಞಾನವಾಗಿದೆ. ಬಾಲಸೂರ್ಯನ ಬಿಸಿಲಿನಲ್ಲಿ ಒಂದು ಗಂಟೆ ನಿಂತರೆ ವಿಟಮಿನ್ ಡಿ ಕೊರತೆ ಆಗುವುದಿಲ್ಲ ಎಂದರು.

ಎರಡನೆಯ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಮಾತನಾಡಿ, ಮನಸ್ಸಿನ ಏಕಾಗ್ರತೆಗೆ, ದೈಹಿಕ ನೈರ್ಮಲ್ಯ, ಆರೋಗ್ಯ ವೃದ್ಧಿಗೆ ಯೋಗಾಸನ ಸಹಕಾರಿಯಾಗಿದೆ ಎಂದು ಹೇಳಿದರು.

ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಅವರ ಪತ್ನಿ ಅನ್ನಪೂರ್ಣ ಅನುವಾದಿಸಿದ ‘ಆಯುರ್ವೇದ ಸಿದ್ಧಾಂತದ ರಹಸ್ಯ’ ಪುಸ್ತಕವನ್ನು ರಾಮ್‌ದೇವ್ ಮತ್ತು ಪೇಜಾವರ ಸ್ವಾಮೀಜಿ ಬಿಡುಗಡೆಗೊಳಿಸಿದರು.

ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮೀಜಿ, ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿ, ಪೇಜಾವರ ಕಿರಿಯ ಯತಿ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹಾಜರಿದ್ದರು.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕರ್ಣಾಟಕ ಬ್ಯಾಂಕಿನ ಸಹಾಯಕ ಮಹಾ ಪ್ರಬಂಧಕ ಶ್ರೀನಿವಾಸ ದೇಶಪಾಂಡೆ, ಗೋಪಾಲಕೃಷ್ಣ ಸಾಮಗ, ಪತಂಜಲಿ ಸಮಿತಿಯ ಜ್ಞಾನೇಶ್ವರ ನಾಯಕ್, ಕರಂಬಳ್ಳಿ ಶಿವರಾಮ ಶೆಟ್ಟಿ, ಶಂಕರ ಶೆಟ್ಟಿ ಉಪಸ್ಥಿತರಿದ್ದರು. ಪತಂಜಲಿಯ ಮಹಿಳಾ ಪ್ರಭಾರಿ ಸುಜಾತಾ ಮಾರ್ಲ ಸ್ವಾಗತಿಸಿದರು.

ಯೋಗಮಯ ಕರ್ನಾಟಕ ಯೋಜನೆ

ಕರ್ನಾಟಕ ರಾಜ್ಯವನ್ನು ರೋಗಮುಕ್ತ ಮಾಡುವ ಉದ್ದೇಶದಿಂದ ಯೋಗ ಮಯ ಕರ್ನಾಟಕ ಎಂಬ ಯೋಜನೆಯನ್ನು ಆರಂಭಿಸಲಾಗುವುದು. ಇದಕ್ಕೆ ನುರಿತ ಯೋಗ ಶಿಕ್ಷಕರು ಬೇಕಾಗಿದ್ದು, ಆಸಕ್ತರಿಗೆ ತರಬೇತಿ ನೀಡಲಾಗುವುದು ಎಂದು ಬಾಬಾ ರಾಮ್‌ದೇವ್ ಹೇಳಿದರು.

ಕಪಾಲಭಾತಿ, ಭಸ್ತ್ರಿಕಾ, ಅನುಲೋಮ ವಿಲೋಮ, ಭ್ರಾಮರಿ ಮೊದಲಾದ ಪ್ರಾಣಯಾಮಗಳಿಂದಲೇ ಮಧುಮೇಹ, ಬಿಪಿ, ಥೈರಾಯ್ಡ್  ಮೊದಲಾದ ರೋಗಗಳು ಗುಣವಾಗುತ್ತವೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X