ಮಾದಕ ವಸ್ತು ಮಾರಾಟ ಆರೋಪ: ಮೂವರ ಬಂಧನ
ಬೆಂಗಳೂರು, ನ.17: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 10 ಲಕ್ಷ ರೂ. ಬೆಲೆಯ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಮೂಲತಃ ಕೇರಳದ ಶಾಕೀರ್ (32), ನಝೀಲ್(30), ಝಿಯಾದ್ (26) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಮಣಿಪಾಲ್ ಕೌಂಟಿ ಕ್ಲಬ್ ರೋಡ್ ಮನೆಯೊಂದರಲ್ಲಿ ಕೇರಳ ಮೂಲದ ಮೂವರು ಗಾಂಜಾ, ಎಂಡಿಎಂಎಗಳನ್ನಿಟ್ಟುಕೊಂಡು ಮಾರಾಟ ಮಾಡಲು ಸಜ್ಜಾಗಿದ್ದಾರೆಂದು ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಆರೋಪಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದವನ ಶೋಧ ಕಾರ್ಯ ಮುಂದುವರೆದಿದೆ.
Next Story