Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕನ್ನಡ ಭಾಷೆ, ಸಾಹಿತ್ಯಗೆ ಜೈನ ಕವಿಗಳ...

ಕನ್ನಡ ಭಾಷೆ, ಸಾಹಿತ್ಯಗೆ ಜೈನ ಕವಿಗಳ ಕೊಡುಗೆ ಅಪಾರ: ಮ.ನಾ.ಹೆಬ್ಬಾರ್

ವಾರ್ತಾಭಾರತಿವಾರ್ತಾಭಾರತಿ17 Nov 2019 9:38 PM IST
share
ಕನ್ನಡ ಭಾಷೆ, ಸಾಹಿತ್ಯಗೆ ಜೈನ ಕವಿಗಳ ಕೊಡುಗೆ ಅಪಾರ: ಮ.ನಾ.ಹೆಬ್ಬಾರ್

ಕಾಪು, ನ.17: ಭಾರತದ ಪರಂಪೆರೆಯ ಭಾಷೆಗಳಲ್ಲಿ ಕನ್ನಡ ಕೂಡ ಪುರಾತನ ಮತ್ತು ಸಮೃದ್ಧವಾದ ಭಾಷೆಯಾಗಿದೆ. ಕನ್ನಡ ಭಾಷೆ ಮತ್ತು ಸಾಹಿತ್ಯ ಸಮೃದ್ಧ ಗೊಳ್ಳುವಲ್ಲಿ ಜೈನ ಕವಿಗಳು ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಸಾಹಿತಿ ಮರೂರು ನಾರಾಯಣ ಹೆಬ್ಬಾರ್ ಹೇಳಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಕಾಪು ತಾಲೂಕು ಘಟಕದ ವತಿಯಿಂದ ಕಾಪು ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನಲ್ಲಿ ಶನಿವಾರ ಆಯೋಜಿಸಲಾದ ಶಾಲೆಯತ್ತ ಸಾಹಿತ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ದಾಖಲೆಗಳ ಪ್ರಕಾರ ಆದಿ ಕವಿ ಪಂಪನಿಂದ ಹಿಡಿದು ಇಂದಿನ ಕನ್ನಡದ ಸಮೃದ್ಧ ಸಾಹಿತ್ಯ ಪರಂಪರೆಯಲ್ಲಿ ಹಾಗೂ ಕನ್ನಡ ಭಾಷಾಶೈಲಿಯಲ್ಲಿ ನಿರಂತರ ಬದಲಾವಣೆ ಕಂಡು ಬರುತ್ತಿದ್ದರೂ ಇದರಿಂದ ಕನ್ನಡದ ಶ್ರೀಮಂತಿಕೆಗೆ ಯಾವುದೇ ತೊಡಕು ಆಗಿಲ್ಲ ಎಂದರು.

ಹಳೇ ಕನ್ನಡಗಳಲ್ಲಿ ವೌಲ್ಯಧಾರಿತ ಸಾಹಿತ್ಯ ಜೊತೆಗೆ ಭಾಷೆಯ ಜೋಡಣೆ ಯಾಗುತ್ತಿತ್ತು. ಆದರೆ ಪ್ರಸ್ತುತ ಕಾಲಘಟ್ಟದಲ್ಲಿ ಸಾಹಿತ್ಯವನ್ನೂ ವಿಂಗಡಿಸಿ ನೋಡಲಾಗುತ್ತಿದೆ. ಇಂತಹ ಕಾಲಘಟ್ಟದಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಅದರ ಪರಂಪರೆಯನ್ನು ಉಳಿಸಿ, ಬೆಳೆಸುವಲ್ಲಿ ಎಲ್ಲರೂ ಕೈ ಜೋಡಿಸಬೇಕಾಗಿೆ ಎಂದು ಅವರು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಮಾತನಾಡಿ, ಮಾತೃಭಾಷೆಯೇ ನಮ್ಮೆಲ್ಲಾ ಯೋಚನೆಗಳಿಗೆ ಪ್ರಾರಂಭವನ್ನು ನೀಡುತ್ತದೆ. ಮಾತೃಭಾಷೆಯಲ್ಲಿ ಪ್ರಾರಂಭಿಸಿದ ಯೋಚನೆಗಳನ್ನು ಇತರ ಭಾಷೆಗಳಿಗೆ ಅನುವಾದ ಮಾಡಿಕೊಂಡು ನಾವು ಮಾತನಾಡುತ್ತೇವೆ ಮತ್ತು ಯೋಜನೆಗಳನ್ನು ಅನುಷ್ಟಾನಕ್ಕೆ ತರುತ್ತಿದ್ದೇವೆ. ಇತರ ಭಾಷೆಗಳ ಪ್ರಭಾವದಿಂದ ಕುಂಠಿತಗೊಳ್ಳುತ್ತಿರುವ ಕನ್ನಡ ವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮ ವಹಿಸುವ ಅಗತ್ಯ ಇದೆ ಎಂದರು.

ಮುಖ್ಯ ಅತಿಥಿಯಾಗಿ ವಿದ್ಯಾನಿಕೇತನ ಸಮೂಹ ವಿದ್ಯಾಸಂಸ್ಥೆಯ ಮುಖ್ಯ ಅಡಳಿತಾಧಿಕಾರಿ ಪ್ರೊ.ವಿ.ಕೆ.ಉದ್ಯಾವರ ಮಾತನಾಡಿದರು. ಸಾಹಿತಿ ಮುದ್ದು ಮೂಡುಬೆಳ್ಳೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ದರು. ಶಾಲಾ ಕನ್ನಡ ಸಂಘದ ಅಧ್ಯಕ್ಷೆ ಸಂಜನಾ, ಕಸಾಪ ಕಾಪು ತಾಲೂಕು ಸಮಿತಿ ಪದಾಧಿಕಾರಿಗಳಾದ ಪ್ರೊ.ವೈ.ಭಾಸ್ಕರ್ ಶೆಟ್ಟಿ ಶಿರ್ವ, ಇನ್ನಾ ಉದಯ ಕುಮಾರ್ ಶೆಟ್ಟಿ, ಪ್ರೊ.ಸತ್ಯರಂಜನಿ ಕಟಪಾಡಿ,  ಹರೀಶ್ ಕಟಪಾಡಿ ಉಪಸ್ಥಿತರಿದ್ದರು.

ಕಾಪು ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲ ವಿದ್ಯಾಧರ್ ಪುರಾಣಿಕ್ ಸ್ವಾಗತಿಸಿದರು. ಕಸಾಪ ತಾಲೂಕು ಸಮಿತಿ ಸದಸ್ಯೆ ಸುದಕ್ಷಿಣೆ ಪ್ರಸ್ತಾವಿಕವಾಗಿ ಮಾತನಾಡಿದರು. ಅನುಷ್ಕಾ ಬಹುಮಾನಿತರ ಪಟ್ಟಿ ವಾಚಿಸಿ ದರು. ಕಾಪು ತಾಲೂಕು ಘಟಕದ ಗೌರವ ಕಾರ್ಯದರ್ಶಿ ವಿದ್ಯಾ ಅಮ್ಮಣ್ಣಾಯ ವಂದಿಸಿದರು. ವಿದ್ಯಾರ್ಥಿನಿ ದಿಶಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X