Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು ಪ್ರವಾಹ ಸಂತ್ರಸ್ತರಿಗೆ 25 ಮನೆಗಳ...

ಕೊಡಗು ಪ್ರವಾಹ ಸಂತ್ರಸ್ತರಿಗೆ 25 ಮನೆಗಳ ನಿರ್ಮಾಣ: ಎ.ಪಿ.ಅಬೂಬಕರ್ ಮುಸ್ಲಿಯಾರ್

'ಬೈತುಸ್ಸಖಾಫ್' ಭವನಕ್ಕೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ17 Nov 2019 11:49 PM IST
share
ಕೊಡಗು ಪ್ರವಾಹ ಸಂತ್ರಸ್ತರಿಗೆ 25 ಮನೆಗಳ ನಿರ್ಮಾಣ: ಎ.ಪಿ.ಅಬೂಬಕರ್ ಮುಸ್ಲಿಯಾರ್

ಮಡಿಕೇರಿ, ನ.17: ಕೊಡಗು ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಪ್ರವಾಹದಲ್ಲಿ ಮನೆಗಳನ್ನು ಕಳೆದುಕೊಂಡು ಸಂತ್ರಸ್ತರಾದವರಿಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಒಟ್ಟು 25 ಮನೆಗಳನ್ನು ಜಾತಿ, ಮತ ಭೇದವಿಲ್ಲದೆ ನಿರ್ಮಾಣ ಮಾಡಿ ಕೊಡಲಾಗುವುದು ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ, ಖಮರುಲ್ ಉಲಮಾ ಎ.ಪಿ ಅಬೂಬಕರ್ ಮುಸ್ಲಿಯಾರ್ ಘೋಷಣೆ ಮಾಡಿದರು.

ಕೊಂಡಂಗೇರಿಯಲ್ಲಿ ಪ್ರವಾಹಕ್ಕೆ ತುತ್ತಾಗಿ ಸಂತ್ರಸ್ತರಾದವರಿಗೆ ನಿರ್ಮಿಸಲಿರುವ 'ಬೈತುಸ್ಸಖಾಫ್' ಭವನದ ಶಿಲಾನ್ಯಾಸವನ್ನು ಮಾಡಿ ಎ.ಪಿ ಅಬೂಬಕರ್ ಮುಸ್ಲಿಯಾರ್ ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಸತತವಾಗಿ ಮಳೆಯಿಂದ ಪ್ರವಾಹ ಸಂಭವಿಸಿದೆ. ಪ್ರವಾಹದಲ್ಲಿ ಹಲವಾರು ಜನರು ತಮ್ಮ ಮನೆ, ಆಸ್ತಿಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಸಂತ್ರಸ್ತರಿಗೆ ಸೂರು ಒದಗಿಸಲು ಎಲ್ಲರೂ ಜಾತಿ, ಮತ ಭೇದವಿಲ್ಲದೆ, ಮುಂದೆ ಬರಬೇಕು. ಅಲ್ಲದೇ ಪ್ರವಾಹದಲ್ಲಿ ಮನೆ ಕಳೆದುಕೊಂಡವರು ಯಾರೂ ಕೂಡ ಎದೆಗುಂದದೆ ಧೈರ್ಯದಿಂದ ಇರಬೇಕು ಎಂದು ಎ.ಪಿ ಅಬೂಬಕರ್ ಮುಸ್ಲಿಯಾರ್ ಹೇಳಿದರು. 

ಈ ವೇಳೆ, ಕೊಂಡಂಗೇರಿಯ ನೆರೆ ಸಂತ್ರಸ್ತರಿಗೆ ಮನೆ ನಿರ್ಮಿಸಲು ಒಂದೂವರೆ ಎಕರೆ ಜಾಗ ದಾನ ನೀಡಿದ ಎಚ್.ಎಂ ಅಬ್ದುಲ್ಲಾ ಹಾಜಿ, ಒಂದು ಎಕರೆ ಜಾಗ ದಾನ ನೀಡಿದ ಸ್ವಿಸ್ ಗೋಲ್ಡ್ ಸಂಸ್ಥೆ ಅವರನ್ನು ಎ.ಪಿ ಅಬೂಬಕರ್ ಮುಸ್ಲಿಯಾರ್ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಸಿದ್ದಾಪುರದ ಡಾ. ಪಿ.ಸಿ ಹಸೈನಾರ್ ಹಾಜಿ ಮಾತನಾಡಿ, ಐದು ಲಕ್ಷ ರೂ ವೆಚ್ಚದಲ್ಲಿ ಒಂದು ಕುಟುಂಬಕ್ಕೆ ತಾವು ಮನೆ ನಿರ್ಮಿಸಿಕೊಡುವುದಾಗಿ ಘೋಷಣೆ ಮಾಡಿದರು. ಅಲ್ಲದೇ ಕೊಂಡಂಗೇರಿಯಲ್ಲಿ ಪ್ರವಾಹಕ್ಕೆ ಒಳಗಾಗಿ ಮನೆ ಕಳೆದುಕೊಂಡ ಎಲ್ಲಾ ಸಂತ್ರಸ್ತರಿಗೆ ತಮ್ಮ ಮನೆಗೆ ಬೇಕಾದ, ಮಂಚ, ಬೆಡ್, ದಿಂಬುಗಳನ್ನು ಉಚಿತವಾಗಿ ನೀಡುವುದಾಗಿ ಹೇಳಿದರು.

ಹನೀಫ್ ಸಖಾಫಿ ಮಾತನಾಡಿ, ಕೊಂಡಂಗೇರಿಯ ನೆರೆ ಸಂತ್ರಸ್ತರಿಗೆ ದಾನಿಗಳು ದಾನ ನೀಡಿದ ಒಟ್ಟು 3 ಎಕರೆ ಜಾಗದಲ್ಲಿ ಸುಮಾರು 100 ಮನೆಗಳನ್ನು ಕೊಂಡಂಗೇರಿ ಸುನ್ನಿ ಜಮಾಹತ್ ವತಿಯಿಂದ ನಿರ್ಮಿಸಿ ಕೊಡುವ ಯೋಜನೆಯನ್ನು ರೂಪಿಸಿದ್ದೇವೆ. ಸಂತ್ರಸ್ತರಿಗೆ ಮನೆ ನಿರ್ಮಿಸಿ ಕೊಡಲು ದಾನಿಗಳು ಮುಂದೆ ಬರಬೇಕು ಎಂದು ಹನೀಫ್ ಸಖಾಫಿ ಮನವಿ ಮಾಡಿದರು.

ಈ ಸಂದರ್ಭ ವೇದಿಕೆಯಲ್ಲಿ ನಾಸಿರ್ ಆಲಿ ಕಮ್ಮಾಸ್, ಶಾದುಲಿ ಫೈಝಿ, ಕೆ.ಎಂ ಯಹ್ಯಾ, ಇಕ್ಬಾಲ್, ಅಹ್ಮದ್ ಹಾಜಿ, ಕೆ.ಕೆ ಯೂಸುಫ್ ಹಾಜಿ, ಪಿ.ಇ ಶಾದುಲಿ, ಎ.ಎಂ ಅಬ್ದುಲ್ಲಾ, ಮಜೀದ್ ಮದನಿ, ಸುಲೈಮಾನ್ ಫಾಲಿಲಿ , ವಕ್ಫ್ ಬೋರ್ಡ್ ಸದಸ್ಯ (ಅಂದಾಯಿ)  ಅಬ್ದುಲ್ ರೆಹ್ಮಾನ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X