Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಕ್ಷಗಾನ ತಾಳಮದ್ದಳೆ ಸಪ್ತಾಹ ಉದ್ಘಾಟನೆ

ಯಕ್ಷಗಾನ ತಾಳಮದ್ದಳೆ ಸಪ್ತಾಹ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ18 Nov 2019 8:03 PM IST
share

ಮಂಗಳೂರು, ನ.18: ಕಳೆದ ಆರು ವರ್ಷಗಳಿಂದ ಕನ್ನಡ ರಾಜ್ಯೋತ್ಸವದ ನುಡಿಹಬ್ಬವಾಗಿ ತಾಳಮದ್ದಳೆ ಸಪ್ತಾಹವನ್ನು ಆಚರಿಸುತ್ತಿರುವ ಯಕ್ಷಾಂಗಣದ ಕಾರ್ಯ ಅನುಪಮವಾದುದು. ಇದು ಕನ್ನಡ ಭಾಷೆ ಮತ್ತು ಸಂಸ್ಕೃತಿಗಳನ್ನು ಉಳಿಸುವಲ್ಲಿ ಶ್ರೇಷ್ಠ ಸೇವೆ. ಇದಕ್ಕೆ ವಿಶ್ವವಿದ್ಯಾನಿಲಯದ ಬೆಂಬಲವಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ಹೇಳಿದರು.

ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ-ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷಭಾರತಿ (ರಿ.)ಪುತ್ತೂರು ವತಿಯಿಂದ ಕನ್ನಡ ರಾಜ್ಯೋತ್ಸವ ಕಲಾಸಂಭ್ರಮದ ಅಂಗವಾಗಿ ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಹಮ್ಮಿಕೊಂಡಿರುವ ಏಳನೇ ವರ್ಷದ ನುಡಿ ಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ -2019’ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಂಗಳೂರು ವಿವಿಯ ಯಕ್ಷಗಾನ ಅಧ್ಯಯನ ಪೀಠದಲ್ಲಿ 1 ಕೋ.ರೂ. ಮೂಲಧನವಿದೆ. ಇದರ ಶೇ.90 ಭಾಗ ಸಿಬ್ಬಂದಿಯ ವೇತನಕ್ಕೆ ಬೇಕಾಗುತ್ತದೆ. ಹೆಚ್ಚುವರಿ ಅನುದಾನ ನೀಡುವಂತೆ ಸರಕಾರವನ್ನು ಕೋರಲಾಗುವುದು. ಬಳಿಕ ಮಂಗಳೂರು ವಿವಿ ಮತ್ತು ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಯಕ್ಷಗಾನಕ್ಕೆ ಸಂಬಂಧಿಸಿದ ಕಾರ್ಯಕ್ರಮ ನಿರಂತರ ನಡೆಸಲಾಗುವುದು. ಯಕ್ಷಗಾನದಲ್ಲಿ ಒಳ್ಳೆಯ ಬದಲಾವಣೆ ಆಗಬೇಕು. ಯುವಜನತೆ ಯಕ್ಷಗಾನ ವೀಕ್ಷಿಸುವ, ತಾಳಮದ್ದಳೆ ಆಸ್ವಾದಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಡಪಡಿತ್ತಾಯ ನುಡಿದರು.

ಯಕ್ಷಗಾನದ ಮುನ್ನಡೆ ಅಬಾಧಿ

ಸಪ್ತಾಹ ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ‘ಸಂಪ್ರದಾಯ ಬಿಟ್ಟಿದ್ದಾರೆ, ವೈಭವೀಕರಣ ನಡೆಯುತ್ತಿದೆ ಎಂಬ ಆಕ್ಷೇಪದ ನಡುವೆಯೂ ಯಕ್ಷಗಾನ ಇಂದು ಅಬಾಧಿತವಾಗಿ ಮುನ್ನಡೆಯುತ್ತಿದ್ದು, ಹೊರಜಗತ್ತಿಗೂ ಪರಿಚಯಿಸಲ್ಪಟ್ಟಿದೆ. ತಾಳಮದ್ದಳೆ ಕನ್ನಡ ಭಾಷೆ, ಧಾರ್ಮಿಕತೆಗೆ ದೊಡ್ಡ ಕೊಡುಗೆ ನೀಡುತ್ತಿದೆ. ಯಕ್ಷಗಾನ ಮತ್ತು ತಾಳಮದ್ದಳೆಯ ಪ್ರೇಕ್ಷಕ ವರ್ಗ ಅಪೂರ್ವವಾದುದು ಎಂದರು. ಯಕ್ಷಾಂಗಣದ ಗೌರವಾಧ್ಯಕ್ಷ, ಉದ್ಯಮಿ ಡಾ.ಎ.ಜೆ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಕೃಷ್ಣಾಭಿವಂದನಂ

ಸಮಾರಂಭದಲ್ಲಿ ಉದ್ಯಮಿ,ಕಲಾ ಪೋಷಕ ಹಾಗೂ ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್‌ಗೆ ‘ಕೃಷ್ಣಾಭಿವಂದನಂ’ ಕಾರ್ಯಕ್ರಮದ ಮೂಲಕ ‘ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ’ ವನ್ನು ಕುಲಪತಿ ಯಡಪಡಿತ್ತಾಯ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕೃಷ್ಣ ಪಾಲೆಮಾರ್ ಕಳೆದ 40 ವರ್ಷದಿಂದ ಯಕ್ಷಗಾನ ಸಹಿತ ಜಿಲ್ಲೆಯ ಸಾಂಸ್ಕೃತಿಕ ರಂಗಕ್ಕೆ, ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದೇನೆ. ಇದು ಕಲೆಗೆ ನೀಡುವ ಪ್ರೋತ್ಸಾಹವಾಗಿದೆ. ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಯಕ್ಷಾಂಗಣ ಸಂಸ್ಥೆ ಪ್ರತಿವರ್ಷ ತಾಳಮದ್ದಳೆ ಸಪ್ತಾಹ ನಡೆಸುವ ಮೂಲಕ ಕನ್ನಡ ಭಾಷೆಗೆ ಅಪೂರ್ವ ಕೊಡುಗೆ ನೀಡುತ್ತಿದೆ ಎಂದರು.

ಮಂಗಳೂರು ವಿಶ್ವವಿದ್ಯಾಲಯದ ಡಾ. ಪಿ. ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ನಿರ್ದೇಶಕ ಡಾ. ಶ್ರೀಪತಿ ಕಲ್ಲೂರಾಯ ಆಶಯ ನುಡಿಗಳನ್ನಾಡಿದರು. ಉದ್ಯಮಿ ಶ್ರೀಪತಿ ಭಟ್ ಮೂಡುಬಿದಿರೆ, ಎಂಆರ್‌ಪಿಎಲ್ ಸಿಎಸ್‌ಆರ್ ವಿಭಾಗ ಚೀಫ್ ಮ್ಯಾನೇಜರ್ ವೀಣಾ ಟಿ. ಶೆಟ್ಟಿ, ವಿವಿ ಕಾಲೇಜಿನ ಪ್ರಾಂಶುಪಾಲ ಡಾ. ಉದಯಕುಮಾರ್ ಇರ್ವತ್ತೂರು ಅತಿಥಿಗಳಾಗಿದ್ದರು. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕರುಣಾಕರ ಶೆಟ್ಟಿ ಪಣಿಯೂರು ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು.

ಯಕ್ಷಾಂಗಣ ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸುಮಾ ಪ್ರಸಾದ್ ಸನ್ಮಾನ ಪತ್ರ ವಾಚಿಸಿದರು. ಕೋಶಾಧಿಕಾರಿ ವಿಶ್ವನಾಥ ಶೆಟ್ಟಿ ತೀರ್ಥಹಳ್ಳಿ ವಂದಿಸಿದರು.

ಪದಾಧಿಕಾರಿಗಳಾದ ಅಶೋಕ ಮಾಡ ಕುದ್ರಾಡಿಗುತ್ತು, ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ, ರವೀಂದ್ರ ರೈ ಕಲ್ಲಿಮಾರು, ಕೆ.ಲಕ್ಷ್ಮಿನಾರಾಯಣ ರೈ ಹರೇಕಳ, ಉಮೇಶ ಆಚಾರ್ಯ ಗೇರುಕಟ್ಟೆ, ನಿವೇದಿತಾ ಎನ್. ಶೆಟ್ಟಿ ಬೆಳ್ಳಿಪ್ಪಾಡಿ, ಸುಧಾಕರ ರಾವ್ ಪೇಜಾವರ, ಸಿದ್ಧಾರ್ಥ ಅಜ್ರಿ ಉಪಸ್ಥಿತರಿದ್ದರು.

ಬಳಿಕ ‘ಸಂಧಾನ ಸಪ್ತಕ’ ಸರಣಿಯ ಮೊದಲನೇ ಕಾರ್ಯಕ್ರಮವಾಗಿ ಸತೀಶ್ ಶೆಟ್ಟಿ ಬೋಂದೆಲ್ ಅವರ ಭಾಗವತಿಕೆಯಲ್ಲಿ ‘ಸುಗ್ರೀವ ಸಂಧಾನ’ ತಾಳಮದ್ದಳೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X