Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಟೆಕ್ ಸಮ್ಮಿಟ್: ಗಮನ ಸೆಳೆದ...

ಬೆಂಗಳೂರು ಟೆಕ್ ಸಮ್ಮಿಟ್: ಗಮನ ಸೆಳೆದ ಜೈವಿಕ ಶುದ್ಧೀಕರಣ ಉತ್ಪನ್ನ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ18 Nov 2019 11:43 PM IST
share
ಬೆಂಗಳೂರು ಟೆಕ್ ಸಮ್ಮಿಟ್: ಗಮನ ಸೆಳೆದ ಜೈವಿಕ ಶುದ್ಧೀಕರಣ ಉತ್ಪನ್ನ ಪ್ರದರ್ಶನ

ಬೆಂಗಳೂರು, ನ.18: ಸ್ವಚ್ಛತಾ ಕಾರ್ಯಗಳಿಗೆ ಹಲವಾರು ಉಪಕರಣಗಳು ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದರೂ ಸಹ ಜೈವಿಕ ಉತ್ಪನ್ನದಿಂದ ತಯಾರಿಸಲ್ಪಟ್ಟಿರುವ ಉತ್ಪನ್ನಗಳು ಬಹಳಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತಿವೆ.

ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಮಲ್ಟಿಪ್ಲೆಕ್ಸ್ ಬಯೋಟೆಕ್ ಪ್ರೈ.ಲಿ. ಸ್ವಚ್ಛತಾ ಕಾರ್ಯಕ್ಕಾಗಿ ವಿಶೇಷವಾಗಿ ಸಿದ್ಧಪಡಿಸಿರುವ ಶುದ್ಧಿ ಎಂಬ ಹೆಸರಿನ ಜೈವಿಕ ಉತ್ಪನ್ನವನ್ನು ಪ್ರದರ್ಶನಕ್ಕಿಡಲಾಗಿದೆ.

ಶುದ್ದಿಯು ಸೂಕ್ಷ್ಮಾಣು ಜೀವಿಗಳನ್ನು ಗುರಿಯಾಗಿಟ್ಟುಕೊಂಡು ಸಿದ್ಧಪಡಿಸಿದ್ದು, ಇದನ್ನು ನೀರಿನ ಶುದ್ಧತೆ ಹಾಗೂ ಬಯೋರೆಮಿಡಿಯೇಷನ್‌ಗಾಗಿ ಕೇಂದ್ರೀಕರಿಸಲಾಗಿದೆ. ದ್ರಾವಣ ಹಾಗೂ ಪೌಡರ್ ಎರಡೂ ಮಾದರಿಯಲ್ಲಿ ಸಿಗುತ್ತದೆ ಎಂದು ಸಂಸ್ಥೆಯ ನಿರ್ದೇಶಕರು ಅಭಿಪ್ರಾಯಪಟ್ಟಿದ್ದಾರೆ.

ಎಲ್ಲೆಲ್ಲಿ ಬಳಸಬಹುದು: ಶುದ್ಧಿ ಎಂಬ ಶುದ್ಧೀಕರಣ ಉತ್ಪನ್ನವನ್ನು ಸಾಮಾನ್ಯವಾಗಿ ನೋಡುವಂತಹ ಕೆರೆ, ಮೀನು ಸಂಗ್ರಹ ಕೊಳ, ಈಜು ಕೊಳ, ನೀರಿನ ಸಂಸ್ಕರಣಾ ಘಟಕಗಳಲ್ಲಿ ಬಳಕೆ ಮಾಡಬಹುದು. ಅಲ್ಲದೆ, ನೀರಿನ ಮೂಲಗಳನ್ನು ಜೈವಿಕವಾಗಿ ಸ್ಪಚ್ಛಗೊಳಿಸಲು ಬಳಸಬಹುದಾಗಿದೆ.

ಇಷ್ಟೇ ಅಲ್ಲದೆ, ಗೃಹೋಪಯೋಗಿ ಶೌಚಾಲಯ, ವಾಹನ ಸ್ಪಚ್ಛತೆಯಂತಹ ಇತರೆ ಸ್ಪಚ್ಛತಾ ಕಾರ್ಯಗಳಲ್ಲಿ ಬಳಸಬಹುದಾಗಿದೆ. ಒಂದು ಲೀ. ನೀರಿಗೆ ಒಂದು ಹನಿಯಷ್ಟು ಅಥವಾ ಒಂದು ಎಂ.ಎಲ್‌ನಷ್ಟು ಹಾಕಬೇಕು. ಇನ್ನು ಈ ಉತ್ಪನ್ನ ಹಾಕಿ ಬಳಸಿದ ನೀರನ್ನು ನೇರವಾಗಿ ಗಿಡಗಳಿಗೆ ಹಾಕಬಹುದಾಗಿದೆ.

ಎಷ್ಟು ಪ್ರಮಾಣ ಬಳಕೆ: ಒಂದು ಕ್ಯೂಬಿಕ್ ಮೀಟರ್ ನೀರಿಗೆ (ಒಂದು ಸಾವಿರ ಲೀ.) ನೂರು ಎಂಎಲ್‌ನಷ್ಟು ದ್ರಾವಣ ಅಥವಾ ಎರಡು ನೂರು ಗ್ರಾಂನಷ್ಟು ಪೌಡರ್ ಹಾಕಬೇಕು. ಈ ಉತ್ಪನ್ನ ನೀರಿಗೆ ಸೇರಿದ ಕೂಡಲೇ ಅದರೊಳಗಿನ ಸೂಕ್ಷ್ಮಾಣುಗಳು ನೀರಿನಲ್ಲಿರುವ ಗಡಸುತನವನ್ನು ಕಡಿಮೆ ಮಾಡುತ್ತವೆ. ಜತೆಗೆ ಪಾಚಿ, ಇತರೆ ತ್ಯಾಜ್ಯವನ್ನು ಕರಗಿಸಿ ಆ ನೀರಿನ ಆಮ್ಲಜನಕವನ್ನು ಹೆಚ್ಚಿಸುತ್ತವೆ. ಕೆರೆಗಳ ಸ್ಪಚ್ಛತೆಯನ್ನು ಸಂಪೂರ್ಣ ಜೈವಿಕವಾಗಿ ಸಾವಿರಾರು ರೂಪಾಯಿಗಳ ಖರ್ಚಿನಲ್ಲಿಯೇ ಮಾಡಬಹುದು ಎಂದು ತಯಾರಕರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X