Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶತಮಾನೋತ್ತರ ಬೆಳ್ಳಿಹಬ್ಬ ಬಂಧುತ್ವ,...

ಶತಮಾನೋತ್ತರ ಬೆಳ್ಳಿಹಬ್ಬ ಬಂಧುತ್ವ, ಸಾಮರಸ್ಯಕ್ಕೆ ಹೊಸ ಪ್ರೇರಣೆ: ಡಾ.ಪೀಟರ್ ಪಾವ್ಲ್ ಸಲ್ದಾನಾ

ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್

ವಾರ್ತಾಭಾರತಿವಾರ್ತಾಭಾರತಿ20 Nov 2019 6:10 PM IST
share
ಶತಮಾನೋತ್ತರ ಬೆಳ್ಳಿಹಬ್ಬ ಬಂಧುತ್ವ, ಸಾಮರಸ್ಯಕ್ಕೆ ಹೊಸ ಪ್ರೇರಣೆ: ಡಾ.ಪೀಟರ್ ಪಾವ್ಲ್ ಸಲ್ದಾನಾ

ಬಂಟ್ವಾಳ, ನ. 20: ಅಂತರಂಗ ಶುದ್ಧಿಯಾಗಿದ್ದಾಗ ಮಾತ್ರ ನಾವು ದೇವರಿಗೆ ಪ್ರಿಯವಾಗಿರುತ್ತೇವೆ. ಪರಸ್ಪರ ಪ್ರೀತಿ ವಿಶ್ವಾಸ  ನಂಬಿಕೆಯೇ ಜೀವನದ ಧ್ಯೇಯವಾಗಲಿ, ಉಸಿರಾಗಲಿ ಎಂದು ಮಂಗಳೂರು ಧರ್ಮಪ್ರಾಂತ್ಯ ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ದಾನಾ ಹೇಳಿದ್ದಾರೆ.

ಬಂಟ್ವಾಳ ತಾಲೂಕಿನ ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ಶತಮಾನೋತ್ತರ ಬೆಳ್ಳಿಹಬ್ಬ ಸಮಾರೋಪ ಸಮಾರಂಭದಲ್ಲಿ ಬುಧವಾರ ಪ್ರವೇಶ ದ್ವಾರ ಉದ್ಘಾಟಿಸಿ, ವಿಶೇಷ ಬಲಿಪೂಜೆಯನ್ನು ನಡೆಸಿ, ಆಶೀರ್ವಚನ ನೀಡಿದ ಅವರು, ಚಿಕ್ಕ ಗ್ರಾಮ ದಲ್ಲಿಯೂ ಮಾದರಿ ಕಾರ್ಯವನ್ನು ಅನುಷ್ಠಾನ ಮಾಡಿದ, ಧರ್ಮಗುರುಗಳು, ಪಾಲನಾ ಸಮಿತಿ ಹಾಗೂ ಎಲ್ಲ ಕುಟುಂಬಗಳೂ ಅಭಿನಂದನೀಯ ಎಂದರು.

ಶತಮಾನೋತ್ತರ ಬೆಳ್ಳಿಹಬ್ಬದ ಆಚರಣೆಯ ಮೂಲಕ ಬಂಧುತ್ವಕ್ಕೆ, ಸಾಮರಸ್ಯಕ್ಕೆ ಹೊಸ ಪ್ರೇರಣೆ ಒದಗಿಸಿದ್ದಾರೆ ಎಂದು ಚರ್ಚ್ ವ್ಯಾಪ್ತಿಯ ಕುಟುಂಬಗಳನ್ನು ಶ್ಲಾಘಿಸಿದ ಅವರು, ಸಾಮರಸ್ಯದ ಮತ್ತು ಒಗ್ಗಟ್ಟಿನ ಜೀವನ ನಡೆಸಿದರೆ ಯಶಸ್ಸನ್ನು ಕಾಣಬಹುದು ಎಂಬುದಕ್ಕೆ ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ವ್ಯಾಪ್ತಿಯ ಕುಟುಂಬಗಳೇ ಸಾಕ್ಷಿ. ಸೂರಿಕುಮೇರು ಚರ್ಚ್‍ನ ಶತಮಾನೋತ್ತರ ಬೆಳ್ಳಿಹಬ್ಬದ ಆಚರಣೆಯೂ ಅನುಕರಣೀಯ ಎಂದರು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಲಾರೆನ್ಸ್ ಮುಕ್ಕುಝಿ ಅವರು ಮಾತನಾಡಿ, ಚರ್ಚ್‍ನ ವ್ಯಾಪ್ತಿಯ ಮಕ್ಕಳೆಲ್ಲರೂ ಬಾಲಯೇಸುವಿನಂತಿರಬೇಕು. ತಾಯಂದಿರು ಕನ್ಯಾಮಾತೆಯಂತಿರಬೇಕು ಎಂದರು.

ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಗೀವರ್ಗೀಸ್ ಮಾರ್ ಮಕಾರಿಯೋಸ್ ಶುಭಹಾರೈಸಿದರು. ಕಾಂಕ್ರೀಟ್ ರಸ್ತೆ ಉದ್ಘಾಟಿಸಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಚರ್ಚ್ ಅಭಿವೃದ್ಧಿ ಕಾರ್ಯಗಳಿಗೆ ನೆರವು ನೀಡುವುದಾಗಿ ಘೋಷಿಸಿ, ಸಾಮರಸ್ಯದ ಬದುಕಿಗೆ ಚರ್ಚ್ ಮಾದರಿಯಾಗಿದ್ದು, ಕೋಮು ಸಾಮರಸ್ಯವನ್ನು ಕಾಪಾಡುವಲ್ಲಿ ಸಹಾಯ ಮಾಡಿದೆ. 125 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಇದು ಪುಣ್ಯಭೂಮಿಯಾಗಿದೆ ಎಂದರು.

ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ರೋಷನ್ ಬೊನಿಫಾಸ್ ಮಾರ್ಟಿಸ್ ಮಾತನಾಡಿ, ವಂದನೀಯ ಫಾದರ್ ಗ್ರೆಗರಿ ಪಿರೇರಾ ಅವರು ಚರ್ಚ್‍ನ ಸರ್ವತೋಮುಖ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಶತಮಾನೋತ್ತರ ಬೆಳ್ಳಿಹಬ್ಬದ ಅಂಗವಾಗಿ ಕಳೆದ 2018ರ ಸೆ. 4ರಿಂದ ಆರಂಭಗೊಂಡು ತಿಂಗಳಿಗೊಂದರಂತೆ 14 ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ದೇವಾಲಯ ವ್ಯಾಪ್ತಿಯ 152 ಕುಟುಂಬಗಳು ಒಟ್ಟು ಸೇರಿ ಇಲ್ಲಿನ ಎಲ್ಲಾ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಚರ್ಚ್‍ನ ಶತಮಾನೋತ್ತರ ಬೆಳ್ಳಿಹಬ್ಬದ ಕಾರ್ಯಕ್ರಮಗಳಿಂದ ತೊಡಗಿ, ಹಲವು ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಇಲ್ಲಿ ನಡೆಸಲಾಗಿದ್ದು, ಎಲ್ಲ ಕಾರ್ಯಗಳೂ ಚರ್ಚ್ ವ್ಯಾಪ್ತಿಯ ಕುಟುಂಬಗಳ ತನು ಮನ ಧನದ ಸಹಕಾರದಿಂದಲೇ ನಡೆದಿದೆ ಎಂದರು.

ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಪೂಜಾರಿ, ತಾಪಂ ಸದಸ್ಯ ಪ್ರಭಾಕರ ಪ್ರಭು, ಮಾಣಿ ಗ್ರಾಪಂ ಅಧ್ಯಕ್ಷೆ ಮಮತಾ ಶೆಟ್ಟಿ, ಸಿಸ್ಟರ್ ನ್ಯಾನ್ಸಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಶತಮಾನೋತ್ತರ ಬೆಳ್ಳಿಹಬ್ಬದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಶತಮಾನೋತ್ತರ ಬೆಳ್ಳಿ ಹಬ್ಬದ ಆಚರಣೆಗೆ ತೊಡಗಿಸಿಕೊಂಡ ಕುಟುಂಬಗಳನ್ನು ಗುರುತಿಸಿ ಗೌರವಿಸಲಾಯಿತು. ಅತಿಥಿಗಳ ಸ್ವಾಗತಕ್ಕೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಪ್ರೀತಿ ಲ್ಯಾನ್ಸಿ ಪಿರೇರಾ ಸ್ವಾಗತಿಸಿದರು. ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್‍ನ ಧರ್ಮಗುರು ಫಾದರ್ ಗ್ರೆಗರಿ ಪಿರೇರಾ ವಂದಿಸಿದರು. ಸ್ಟ್ಯಾನಿ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

ಹಿಂದೂ, ಮುಸ್ಲಿಮರಿಂದ ಕಾರ್ಯಕ್ರಮಕ್ಕೆ ನೆರವು

ಇಗರ್ಜಿಯ ಶತಮಾನೋತ್ತರ ಬೆಳ್ಳಿಹಬ್ಬ ಕೇವಲ ಅದರ ವ್ಯಾಪ್ತಿಗೊಳಪಟ್ಟ 152 ಕುಟುಂಬಗಳ ಸಂಭ್ರಮವಷ್ಟೇ ಆಗಿರಲಿಲ್ಲ. ಹಿಂದೂ, ಮುಸ್ಲಿಮರೂ ಕಾರ್ಯಕ್ರಮಕ್ಕೆ ನೆರವಾಗುವ ಮೂಲಕ ಸೌಹಾರ್ದ ಮೆರೆದರು. ಪುರುಷೋತ್ತಮ ಪಾಟೀಲ, ಓಂಪ್ರಕಾಶ್ ಜುವೆಲ್ಲರಿ, ಎಸ್.ಎ.ಖಾಸಿಂ, ಚಿದಾನಂದ, ಸತೀಶ್ ಮತ್ತು ಗಣೇಶ್ ಜುವೆಲ್ಲರಿಯವರು ಕಾರ್ಯಕ್ರಮಕ್ಕೆ ಅಗತ್ಯವಿದ್ದ ಕೊಡುಗೆ ನೀಡಿ ಸೌಹಾರ್ದತೆ ಮೆರೆದರು.

ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ

ಶತಮಾನೋತ್ತರ ಬೆಳ್ಳಿಹಬ್ಬದ ಅಂಗವಾಗಿ ನಡೆಸಲಾಗಿದ್ದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಇದೇ ವೇಳೆ ಲೋಕಾರ್ಪಣೆಗೊಳಿಸಲಾಯಿತು. ನೂತನವಾಗಿ ನಿರ್ಮಿಸಲಾದ ಆಕರ್ಷಕ ಪ್ರವೇಶದ್ವಾರ, ಇಸ್ರೇಲ್ ಮಾದರಿಯ ಪುಟ್‍ಪಾತ್ ರಸ್ತೆ, ಕಲ್ವಾರಿ ಪರ್ವತದ 14 ಶಿಲುಬೆ ಯಾತ್ರೆ, ಕಾಂಕ್ರೀಟು ರಸ್ತೆ ನಿರ್ಮಾಣ, ಸೋಲಾರ್ ಲೈಟ್, ಧ್ವನಿವರ್ಧಕ ವ್ಯವಸ್ಥೆ, ಸಿಸಿ ಕ್ಯಾಮೆರಾ ಅಳವಡಿಕೆ, ರಸ್ತೆಯ ಇಕ್ಕೆಲಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಯ ಉದ್ಘಾಟನೆಯನ್ನೂ ಅತಿಥಿಗಣ್ಯರು ನೆರವೇರಿಸಿದರು.

ಸ್ನೇಹ ಹಾಗೂ ವಿಶ್ವಾಸಮಯ ವಾತಾವರಣ ಬದುಕಿಗೆ ಹೊಸ ಚೈತನ್ಯ ನೀಡುತ್ತದೆ. ಸೂರಿಕುಮೇರು ಚರ್ಚ್‍ನಲ್ಲಿ ಈ ಚೈತನ್ಯ ಪಸರಿಸುತ್ತಿದೆ.

-ಡಾ.ಮಾರ್ಕ್ ಕಾಸ್ಟೆಲಿನೋ, ಮೊಗರ್ನಾಡ್ ಚರ್ಚ್‍ನ ಧರ್ಮಗುರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X