Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಪಿಎಸ್ಸಿ ನೇಮಕಾತಿ ನಿಯಮಗಳಿಗೆ...

ಕೆಪಿಎಸ್ಸಿ ನೇಮಕಾತಿ ನಿಯಮಗಳಿಗೆ ತಿದ್ದುಪಡಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ20 Nov 2019 8:44 PM IST
share
ಕೆಪಿಎಸ್ಸಿ ನೇಮಕಾತಿ ನಿಯಮಗಳಿಗೆ ತಿದ್ದುಪಡಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ

ಬೆಂಗಳೂರು, ನ. 20: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ದ ಮೂಲಕ ಖಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 'ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್‌(ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕ) ತಿದ್ದುಪಡಿ ನಿಯಮಗಳು- 2019ಕ್ಕೆ' ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಬುಧವಾರ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೇಲ್ಕಂಡ ತೀರ್ಮಾನ ಕೈಗೊಳ್ಳಲಾಗಿದ್ದು, ಕೆಎಎಸ್ ಹುದ್ದೆಗಳ ನೇಮಕಾತಿ ವೇಳೆ ಲಿಖಿತ ಪರೀಕ್ಷೆಯ ನಂತರ ಅರ್ಹ ಅಭ್ಯರ್ಥಿಗಳಲ್ಲಿ ಸಂದರ್ಶನಕ್ಕೆ 1:3ರ ಅನುಪಾತದಲ್ಲೆ ಅಭ್ಯರ್ಥಿಗಳನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ನಿಯಮಗಳಿಗೆ ತಿದ್ದುಪಡಿಗೆ ಸಂಪುಟ ನಿರ್ಧರಿಸಿದೆ ಎಂದು ಗೊತ್ತಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕುಮಾರಧಾರ ನದಿಗೆ ಅಡ್ಡಲಾಗಿ ಶಾಂತಿ ಮೋಗೆರು ಎಂಬಲ್ಲಿ ಸೇತುವೆ ಮತ್ತು ಅಪ್ರೋಚ್ ರಸ್ತೆ ನಿರ್ಮಾಣ ಕಾಮಗಾರಿಗೆ 13.54 ಕೋಟಿ ರೂ..ಪರಿಷ್ಕೃತ ಅಂದಾಜಿಗೆ ಒಪ್ಪಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ರಾಜ್ಯ ಆಡಳಿತ ನ್ಯಾಯಮಂಡಳಿ (ನೇಮಕಾತಿ) (ತಿದ್ದುಪಡಿ) ನಿಯಮ, 2019ಕ್ಕೂ ಸಂಪುಟ ಒಪ್ಪಿಗೆ ನೀಡಿದೆ. ಇಂಧನ ಸಂರಕ್ಷಣಾ ಕಟ್ಟಡ ಸಂಹಿತೆ 2018ಕ್ಕೆ ಸಮ್ಮತಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ (ಹಿರಿಯ ವೈದ್ಯಾಧಿಕಾರಿಗಳು ಮತ್ತು ದಂತ ವೈದ್ಯಾಧಿಕಾರಿಗಳ ನೇಮಕಾತಿ) (ವಿಶೇಷ) ನಿಯಮಕ್ಕೆ ಸಂಪುಟ ಅನುಮೋದನೆ ನೀಡಿದೆ.

ಎಸ್ಸಿ-ಎಸ್ಟಿ ವರ್ಗದ ಮೋರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ಶಾಲೆಗಳ 8 ಸಂಕೀರ್ಣ ಕಟ್ಟಡಗಳನ್ನು 215 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುವ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ 60 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡವನ್ನು 15 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲು ಹಾಗೂ ಕೆಎಚ್‌ಬಿಯಿಂದ ಮೂರು ಎಕರೆ ಜಾಗವನ್ನು ನೀಡಲು ಸಚಿವ ಸಂಪುಟ ಸಭೆ ಸಮ್ಮತಿಸಿದೆ ಎಂದು ತಿಳಿದು ಬಂದಿದೆ.

ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಗೆ ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ರೋಬಾಟಿಕ್ ಶಸ್ತ್ರ ಚಿಕಿತ್ಸಾ ವಿಭಾಗ ಆರಂಭಿಸಲು ಸರಕಾರ ಒಪ್ಪಿಗೆ ನೀಡಿದೆ. ಮೂಳೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಸರಕಾರಿ ವಲಯದ ಆಸ್ಪತ್ರೆಗಳಲ್ಲಿ ರೋಬಾಟಿಕ್ ಶಸ್ತ್ರಚಿಕಿತ್ಸೆ ವಿಭಾಗವನ್ನು ಸ್ಥಾಪಿಸುತ್ತಿರುವುದು ಇದೇ ಮೊದಲು. ಈ ತಂತ್ರಜ್ಞಾನದ ಮೂಲಕ ಅತ್ಯಂತ ನಿಖರವಾಗಿ ಮೂಳೆ ಶಸ್ತ್ರಚಿಕಿತ್ಸೆ ನಡೆಸಬಹುದಾಗಿದೆ. ರೋಗಿಗಳಿಗೆ ಅತಿ ಕಡಿಮೆ ವೆಚ್ಚಲ್ಲಿ ಶಸ್ತ್ರ ಚಿಕಿತ್ಸೆ ಮಾಡಬಹುದಾಗಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೆ, ವಿಜಯಪುರ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ 55.56 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಗಳ ಸೌಲಭ್ಯವುಳ್ಳ ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯ ನೂತನ ಶಾಖೆ ಸ್ಥಾಪಿಸಲಾಗುವುದು. ಇದಕ್ಕೆ ಪುಟ್ಟರಾಜ ಗವಾಯಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಕೇಂದ್ರ ಎಂದು ಹೆಸರಿಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X