ರಾಜ್ಯದಲ್ಲಿ ಎನ್ಆರ್ಸಿಗೆ ಅವಕಾಶ ನೀಡುವುದಿಲ್ಲ: ಮಮತಾ ಬ್ಯಾನರ್ಜಿ
PTI
ಸಾಗರ್ದಿಗಿ, ನ. 20: ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ)ಗೆ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜನತೆಗೆ ಭರವಸೆ ನೀಡಿದ್ದಾರೆ.
ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯ ಅಂತಿಮ ಪಟ್ಟಿಯಲ್ಲಿ 14 ಲಕ್ಷ ಹಿಂದೂ, ಬೆಂಗಾಳಿಗಳನ್ನು ಕೈಬಿಟ್ಟಿರುವ ಬಗ್ಗೆ ಮಮತಾ ಬ್ಯಾನರ್ಜಿ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ರಾಷ್ಟ್ರೀಯ ಪೌರತ್ವ ನೋಂದಣಿ ಅನುಷ್ಠಾನಗೊಳಿಸುವ ಹೆಸರಿನಲ್ಲಿ ರಾಜ್ಯದಲ್ಲಿ ಕೆಲವು ವ್ಯಕ್ತಿಗಳು ಶಾಂತಿ ಭಂಗ ಉಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ. ಪಶ್ಚಿಮಬಂಗಾಳದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಗೆ ನಾವು ಅವಕಾಶ ನೀಡುವುದಿಲ್ಲ ಎಂದು ಅವರು ತಿಳಿಸಿದರು.
‘‘ಯಾರೊಬ್ಬರೂ ನಿಮ್ಮ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಹಾಗೂ ನಿಮ್ಮನ್ನು ನಿರಾಶ್ರಿತರನ್ನಾಗಿ ಮಾಡಲು ಸಾಧ್ಯವಿಲ್ಲ. ಧರ್ಮದ ಆಧಾರದಲ್ಲಿ ಯಾವುದೇ ವಿಭಜನೆ ಸಾಧ್ಯವಿಲ್ಲ’’ ಎಂದು ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ.
Next Story