Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನರ ಋಣ ತೀರಿಸಿ, ಇಲ್ಲವೇ ರಾಜೀನಾಮೆ...

ಜನರ ಋಣ ತೀರಿಸಿ, ಇಲ್ಲವೇ ರಾಜೀನಾಮೆ ನೀಡಿ: ಬಿಜೆಪಿ ನಾಯಕರ ವಿರುದ್ಧ ಡಿಕೆಶಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ21 Nov 2019 6:18 PM IST
share
ಜನರ ಋಣ ತೀರಿಸಿ, ಇಲ್ಲವೇ ರಾಜೀನಾಮೆ ನೀಡಿ: ಬಿಜೆಪಿ ನಾಯಕರ ವಿರುದ್ಧ ಡಿಕೆಶಿ ವಾಗ್ದಾಳಿ

ಹುಬ್ಬಳ್ಳಿ, ನ.21: ಉತ್ತರ ಕರ್ನಾಟಕ ಭಾಗದ ಶಾಸಕರಿಗೆ ಮಂತ್ರಿ ಸ್ಥಾನದ ಆಸೆ ತೋರಿಸಿ ಸರಕಾರ ಮಾಡಲು ಆಗುತ್ತದೆ, ನಿಮಗೆ ಮತ ನೀಡಿದ ಉತ್ತರ ಕರ್ನಾಟಕದ ಮತದಾರರ ಹಕ್ಕಿನ ಮಹಾದಾಯಿ ನೀರು ಕೊಡಿಸಲು ನಿಮ್ಮಿಂದ ಆಗುವುದಿಲ್ಲವೇ? ಜನರ ಋಣ ತೀರಿಸಿ ಇಲ್ಲವಾದ್ರೆ ರಾಜೀನಾಮೆ ನೀಡಿ ಎಂದು ಬಿಜೆಪಿ ನಾಯಕರ ವಿರುದ್ಧ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಗುರುವಾರ ನಗರದ ವಿಮಾನ ನಿಲ್ದಾಣದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರ ಇರುತ್ತದೆ ಎಂದು ಭಾವಿಸಿದ್ದೆ. ಆದರೆ ಪ್ರಬಲ ಆಪರೇಷನ್ ಮಾಡುವ ಮೂಲಕ ನಮ್ಮ ಸರಕಾರ ಬೀಳಿಸಲಾಗಿದೆ. ಪ್ರಜಾಪ್ರಭುತ್ವದಲ್ಲಿ ಏನೇನು ಆಗಬಾರದೋ ಅದೆಲ್ಲವೂ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಭಾಗದ ಶಾಸಕರಿಗೆ ಮಂತ್ರಿ ಸ್ಥಾನ ಹಾಗೂ ಇತರ ಆಮೀಷ ತೋರಿರುವುದು ಭ್ರಷ್ಟಾಚಾರ ಅಲ್ಲವೇ? ಈ ಸರಕಾರ ಬಂದು 100 ದಿನ ಆದರೂ ಈ ಭಾಗದ ಜನರ ಪ್ರಮುಖ ಬೇಡಿಕೆ ಮಹಾದಾಯಿ ಕುಡಿಯುವ ನೀರಿನ ಯೋಜನೆಯ ಕುರಿತು ಒಂದು ನೋಟಿಫಿಕೇಷನ್ ಕೂಡ ಹೊರಡಿಸಿಲ್ಲ ಎಂದು ಅವರು ಆರೋಪಿಸಿದರು.

ನಿನ್ನೆ ನಾನು ಕೋರ್ಟ್ ಕೆಲಸದ ಹಿನ್ನೆಲೆಯಲ್ಲಿ ದಿಲ್ಲಿಗೆ ಹೋಗಿದ್ದಾಗ ಸಮಿತಿ ರಚನೆ ಮಾಡಲಾಗಿದೆ ಎಂಬುದನ್ನು ನೋಡಿದೆ. ನ್ಯಾಯಾಧಿಕರಣದಲ್ಲಿ ನಮಗೆ ಕುಡಿಯಲು 5 ಟಿಎಂಸಿಯಷ್ಟು ನೀರು ಸಿಕ್ಕಿದೆ. ಇನ್ನೂ ಹೆಚ್ಚಿನ ನೀರು ಬೇಕು ಎಂದು ನಮ್ಮ ಅರ್ಜಿ ನ್ಯಾಯಾಲಯದಲ್ಲಿ ಇದೆ. ಅದು ಆಮೇಲಿನ ವಿಚಾರ. ಸದ್ಯಕ್ಕೆ ನಮಗೆ ಸಿಕ್ಕಿರುವ ನೀರನ್ನು ಜನರಿಗೆ ತಲುಪಿಸಬೇಕಲ್ಲವೇ ಎಂದು ಶಿವಕುಮಾರ್ ಹೇಳಿದರು.

ಈ ಭಾಗದಿಂದ ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ. ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ, ಲಕ್ಷ್ಮಣ ಸವದಿ ಸೇರಿ ಅನೇಕರು ರಾಜ್ಯ ಸರಕಾರದ ಉನ್ನತ ಸ್ಥಾನದಲ್ಲಿದ್ದಾರೆ. ಆದರೂ ದಿಲ್ಲಿಯಲ್ಲಿ ರಾಜ್ಯಕ್ಕೆ ಯಾವ ಪ್ರಾಮುಖ್ಯತೆ ತಂದುಕೊಟ್ಟಿದ್ದಾರೆ ಎಂಬುದು ಇದರಿಂದಲೇ ತಿಳಿಯುತ್ತದೆ ಎಂದು ಅವರು ವಾಗ್ದಾಳಿ ನಡೆಸಿದರು.

ಮಹಾದಾಯಿ ನೀರು ಸಿಗದೆ ಈ ಭಾಗದ ಜನರು ನೋವಿನಲ್ಲಿ ಬಳಲುತ್ತಿದ್ದಾರೆ. ಈ ಜನರ ನೋವಿಗೆ ಸ್ಪಂದಿಸಲು ನಿಮಗೆ ಸಾಧ್ಯವಾಗದಿದ್ದರೆ ನೀವು ಆ ಸ್ಥಾನದಲ್ಲಿ ಕೂರಲು ಲಾಯಕ್ಕಲ್ಲ. ಈ ವಿಚಾರದಲ್ಲಿ ಕೋರ್ಟ್ ಆದೇಶ ಇದೆ, ಅಗತ್ಯ ಜಾಗ ಇದೆ, ಹಣವೂ ಇದೆ. ಬೇರೆ ಯೋಜನೆಗಳನ್ನು ಸ್ವಲ್ಪತಡೆದು ಈ ಯೋಜನೆಗೆ ಒತ್ತು ನೀಡಿದರೆ ಜನರ ಸಮಸ್ಯೆಗೆ ಬೇಗ ಪರಿಹಾರ ಸಿಗುತ್ತದೆ. ಆದರೆ ಇದಕ್ಕೆ ಒಂದು ನೋಟಿಫಿಕೇಷನ್ ಹೊರಡಿಸಲು ಅವರಿಂದ ಸಾಧ್ಯವಾಗುತ್ತಿಲ್ಲ ಎಂದು ಶಿವಕುಮಾರ್ ಹೇಳಿದರು.

ವಿಧಾನಸಭೆ ಚುನಾವಣೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಅಷ್ಟು ದೊಡ್ಡ ಪ್ರಮಾಣದಲ್ಲಿ ಇಲ್ಲಿನ ಜನ ಮತ ಹಾಕಿ ಗೆಲ್ಲಿಸಿದರಲ್ಲಾ ಅವರ ಋಣ ತೀರಿಸುವುದಕ್ಕಾದರೂ ಮಹಾದಾಯಿ ವಿಚಾರದಲ್ಲಿ ಆಸಕ್ತಿ ವಹಿಸಬೇಕಿತ್ತು. ಉಪಕಾರ ಸ್ಮರಣೆ ಇರಬೇಕು. ಇಲ್ಲವಾದರೆ ಯಡಿಯೂರಪ್ಪರಾಜೀನಾಮೆ ಕೊಟ್ಟು ಹೋಗುವುದೇ ಒಳ್ಳೆಯದು ಎಂದು ಅವರು ತಿಳಿಸಿದರು.

ದೇವಾಲಯ ಭೇಟಿ ಸೇರಿದಂತೆ ಖಾಸಗಿ ಕಾರ್ಯಕ್ರಮದ ಮೇರೆಗೆ ನಾನು ಹುಬ್ಬಳ್ಳಿಗೆ ಆಗಮಿಸಿದೆ. ನನ್ನ ಕಷ್ಟಕಾಲದಲ್ಲಿ ನನ್ನ ಪರವಾಗಿ ಹೋರಾಡಿದ, ನನಗಾಗಿ ಪೂಜೆ, ಪ್ರಾರ್ಥನೆ, ಹರಕೆ ಮಾಡಿಕೊಂಡ ಜನರಿಗೆ ಅಭಿನಂದನೆ ಸಲ್ಲಿಸಲು ಕಾರ್ಯಕ್ರಮ ಮಾಡಲು ನಿರ್ಧರಿಸಿದ್ದೇನೆ ಎಂದು ಶಿವಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X