ಜೆಎನ್ ಯು ಶುಲ್ಕ ಹೆಚ್ಚಳ ವಿರೋಧಿಸಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ: ಕೇಂದ್ರ ಸಚಿವರ ರಾಜೀನಾಮೆಗೆ ಒತ್ತಾಯ

ಹೊಸದಿಲ್ಲಿ, ನ.21: ಜೆಎನ್ ಯು ಶುಲ್ಕ ಹೆಚ್ಚಳ ಪ್ರಸ್ತಾವ ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದು, ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ ಎಂದು thestatesman.com ವರದಿ ಮಾಡಿದೆ.
ಮಂದಿ ಹೌಸ್ ನಿಂಡ ಸಚಿವಾಲಯದ ಕಡೆಗೆ ನಡೆದ ಪ್ರತಿಭಟನಾ ರ್ಯಾಲಿಯ ಸಂದರ್ಭ ಮಾಧ್ಯಮಗಳೊಂದಿಗೆ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಸಿದ್ಧಾರ್ಥ್ ಯಾದವ್ , "ನಾವು ಬಿಜೆಪಿಯ ವಿದ್ಯಾರ್ಥಿ ಸಂಘದವರಲ್ಲ. ಯಾವ ಸರಕಾರ ಅಧಿಕಾರದಲ್ಲಿದ್ದರೂ ನಾವು ಯಾವತ್ತಿಗೂ ವಿದ್ಯಾರ್ಥಿಗಳ ಪರವಾಗಿಯೇ ನಿಂತಿದ್ದೇವೆ. ನಾವು ಇಲ್ಲಿ ವಿದ್ಯಾರ್ಥಿಗಳ ಹಕ್ಕಿಗಾಗಿ ಆಗಮಿಸಿದ್ದೇವೆ ಮತ್ತು ಕೇಂದ್ರ ಸಚಿವ ಪೋಖ್ರಿಯಾಲ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇವೆ" ಎಂದರು.
ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿಯ 160 ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದ್ದು, ನಂತರ ಬಿಡುಗಡೆಗೊಳಿಸಲಾಗಿದೆ ಎಂದು outlookindia.com ವರದಿ ತಿಳಿಸಿದೆ.





