ಹಿರಿಯಡ್ಕ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಕಂಪ್ಯೂಟರ್‌ಗಳ ಹಸ್ತಾಂತರ
ಉಡುಪಿ, ನ.22: ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಸರಕಾರಿ ಪದವಿ ಪೂರ್ವ ಕಾಲೇಜು) ಇಲ್ಲಿ ನೂತನವಾಗಿ ನಿರ್ಮಿಸಿದ ಕಂಪ್ಯೂಟರ್ ಪ್ರಯೋಗಾಲಯದ ಉದ್ಘಾಟನೆ ನ.23ರಂದು ಬೆಳಗ್ಗೆ 11:30ಕ್ಕೆ ನಡೆಯಲಿದೆ. ಇದೇ ವೇಳೆ ಮಂಗಳೂರಿನ ಎಂಆರ್‌ಪಿಎಲ್ ನೀಡಿದ 30 ಕಂಪ್ಯೂಟರ್‌ಗಳ ಹಸ್ತಾಂತರ ಕಾರ್ಯಕ್ರಮವೂ ನಡೆಯಲಿದೆ.
ಅಲ್ಲದೇ ಹಿರಿಯಡ್ಕ ಸಂಸ್ಕೃತಿ ಸಿರಿ ಟ್ರಸ್ಟ್ ಶಾಲೆಯ ಪ್ರತಿಭಾವಂತ ವಿದ್ಯಾ ರ್ಥಿಗಳಿಗೆ ನೀಡುವ ಸ್ಕಾಲರ್‌ಶಿಪ್‌ಗಳ ವಿತರಣೆಯೂ ನಾಳೆ ನಡೆಯಲಿದೆ. ಕಾರ್ಯಕ್ರಮವನ್ನು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಲಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲ ಎಸ್.ಕುಂದರ್, ಜಿಪಂ ಅಧ್ಯಕ್ಷ ದಿನಕರ ಬಾಬು ಮತ್ತಿತರರು ಭಾಗವಹಿ ಸುವರು ಎಂದು ಪ್ರಕಟಣೆ ತಿಳಿಸಿದೆ.
Next Story





