Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ : ಬಾಲಕಿಯ ಗ್ಯಾಂಗ್ ರೇಪ್ ಪ್ರಕರಣ...

ಉಡುಪಿ : ಬಾಲಕಿಯ ಗ್ಯಾಂಗ್ ರೇಪ್ ಪ್ರಕರಣ ; ಆರೋಪಿಗಳಿಬ್ಬರು ದೋಷಿ

ನ.25ಕ್ಕೆ ಶಿಕ್ಷೆ ಪ್ರಮಾಣ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ22 Nov 2019 8:29 PM IST
share
ಉಡುಪಿ : ಬಾಲಕಿಯ ಗ್ಯಾಂಗ್ ರೇಪ್ ಪ್ರಕರಣ ; ಆರೋಪಿಗಳಿಬ್ಬರು ದೋಷಿ

ಉಡುಪಿ, ನ. 22: ಮೂರು ವರ್ಷಗಳ ಹಿಂದೆ ಉಡುಪಿ ನಗರದ ಹೊರ ವಲಯದಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ದೋಷಿ ಎಂಬುದಾಗಿ ಶುಕ್ರವಾರ ಘೋಷಿಸಿರುವ ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯ, ಶಿಕ್ಷೆಯ ಪ್ರಮಾಣ ವನ್ನು ನ. 25ರಂದು ಪ್ರಕಟಿಸಲಿದೆ.

ರಾಜಸ್ಥಾನ ಮೂಲದ ಮುಖೇಶ್ ಸೇನಿ ಯಾನೆ ಮುಖೇಶ್ ಮಾಲಿ (20) ಹಾಗೂ ಪದಮ್ ಸಿಂಗ್ ಸೇನಿ (28) ಪ್ರಕರಣದ ಆರೋಪಿಗಳು.

ಟೈಲ್ಸ್ ಕೆಲಸ ಮಾಡುತ್ತಿದ್ದ ಇವರಿಬ್ಬರು ಉಡುಪಿಯ 76 ಬಡಗಬೆಟ್ಟುವಿನ ಬಾಡಿಗೆ ಮನೆ ಯಲ್ಲಿ ವಾಸವಾಗಿದ್ದರು.
ರಾಜಸ್ತಾನ ಮೂಲದ 15 ವರ್ಷ ವಯಸ್ಸಿನ ಸಂತ್ರಸ್ತ ಬಾಲಕಿಯ ಕುಟುಂಬ ಕಳೆದ 20 ವರ್ಷಗಳಿಂದ ಉಡುಪಿ ನಗರದ ಹೊರವಲಯದಲ್ಲಿ ವಾಸವಾಗಿತ್ತು. ಬಾಲಕಿಯ ತಂದೆಯೊಂದಿಗೆ ಟೈಲ್ಸ್ ಕೆಲಸಕ್ಕೆ ಹೋಗುತ್ತಿದ್ದ ಆರೋಪಿಗಳು ಆಗಾಗ ಬಾಲಕಿಯ ಮನೆಗೆ ಬರುತ್ತಿರುವುದರಿಂದ ಸಂತ್ರಸ್ತ ಬಾಲಕಿಯ ಪರಿಚಯವಾಗಿತ್ತು. ಆ ಸಮಯದಲ್ಲಿ ಆಕೆ 10ನೆ ತರಗತಿಯ ವಿದ್ಯಾರ್ಥಿನಿ ಯಾಗಿದ್ದರು.

ಮನೆಯಲ್ಲಿ ತಾಯಿ, ಸಹೋದರರು ಬೇರೆ ಕೋಣೆಯಲ್ಲಿ ಮಲಗಿದ್ದಾಗ ಮತ್ತು ತಂದೆ ಇಲ್ಲದ ಸಂದರ್ಭ 2016ರ ಜು.8ರಂದು ಮಧ್ಯರಾತ್ರಿ ವೇಳೆ ಆರೋಪಿಗಳು ಮನೆಗೆ ಬಂದು ಬಾಗಿಲು ಬಡಿದಿದ್ದು, ಬಾಗಿಲು ತೆಗೆದ ಬಾಲಕಿ ಯನ್ನು ಆರೋಪಿಗಳು ಹೊರಗಡೆ ಎಳೆದು ತಮ್ಮ ಓಮ್ನಿ ಕಾರಿನಲ್ಲಿ ಅಪಹರಿಸಿದ್ದರು. ಈ ವೇಳೆ ಪ್ರಜ್ಞೆ ಕಳೆದುಕೊಂಡ ಬಾಲಕಿಯನ್ನು ತಮ್ಮ ಬಾಡಿಗೆ ಮನೆಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ್ದರು ಎಂದು ದೂರಲಾಗಿದೆ.

ಬಳಿಕ ಆರೋಪಿಗಳು ಬಾಲಕಿಯ ಕೈ ಮತ್ತು ಬಾಯಿಗೆ ಕಟ್ಟಿದ್ದ ಬಟ್ಟೆಯನ್ನು ಕೆರೆಯ ನೀರಿಗೆ ಎಸೆದು ಸಾಕ್ಷನಾಶ ಪಡಿಸಿದ್ದರು. ಮರುದಿನ ಜು.9ರಂದು ಮನೆಗೆ ಬಂದ ಬಾಲಕಿ ಮನೆಯವರಿಗೆ ವಿಷಯ ತಿಳಿಸಿದ್ದು, ಕೂಡಲೇ ಆಕೆಯನ್ನು ಉಡುಪಿ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಯಿತು.

ಈ ಬಗ್ಗೆ ಜು.10ರಂದು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಕಲಂ 366 ಎ(ಅಪಹರಣ), 376 ಡಿ(ಸಾಮೂಹಿತ ಅತ್ಯಾಚಾರ), 201(ಸಾಕ್ಷನಾಶ), 506(ಜೀವ ಬೆದರಿಕೆ) ಜೊತೆ 34 ಭಾರತೀಯ ದಂಡ ಸಂಹಿತೆ ಮತ್ತು 4,6, ಪೊಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಅದೇ ದಿನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ತನಿಖೆ ಯನ್ನು ಆಗಿನ ಉಡುಪಿ ವೃತ್ತ ನಿರೀಕ್ಷಕರಾದ ಶ್ರೀಕಾಂತ್ ಕೆ. ಹಾಗೂ ಜೈಶಂಕರ್ ನಡೆಸಿದ್ದರು. ತನಿಖಾಧಿಕಾರಿಗಳು 2016ರ ಸೆ.29ರಂದು ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಈ ಮಧ್ಯೆ ಎರಡು ಬಾರಿ ಜಿಲ್ಲಾ ನ್ಯಾಯಾಲಯದಲ್ಲಿ ಮತ್ತು ಒಂದು ಬಾರಿ ಹೈಕೋರ್ಟ್‌ನಲ್ಲಿ ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು.

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು, ಒಟ್ಟು 34 ಸಾಕ್ಷಿಗಳ ಪೈಕಿ ಪ್ರಾಸಿಕ್ಯೂಶನ್ ಪರವಾಗಿ 21 ಸಾಕ್ಷಿಗಳನ್ನು ವಿಚಾ ರಣೆಗೆ ಒಳಪಡಿಸಿದ್ದರು. ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ. ಜೋಶಿ, ಆರೋಪಿಗಳಿಬ್ಬರು ದೋಷಿ ಎಂಬುದಾಗಿ ಆದೇಶಿಸಿದರು. ಪ್ರಾಸಿ ಕ್ಯೂಶನ್ ಪರವಾಗಿ ಜಿಲ್ಲಾ ವಿಶೇಷ ಸರಕಾರಿ ಅಭಿಯೋಜಕ ವಿಜಯ ವಾಸು ಪೂಜಾರಿ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X