ನ. 25ರಿಂದ ಕಿಶೋರ ಯಕ್ಷ ಸಂಭ್ರಮ
ಉಡುಪಿ, ನ. 22: ಯಕ್ಷಗಾನ ಕಲಾರಂಗ ಹಾಗೂ ಯಕ್ಷಶಿಕ್ಷಣ ಟ್ರಸ್ಟ್‌ನ ಜಂಟಿ ಆಶ್ರಯದಲ್ಲಿ ನಡೆಯುವ ಕಿಶೋರ ಯಕ್ಷಗಾನ ಸಂಭ್ರಮ-2019 ನ.25ರಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ.
ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥರು ನ.25ರ ಸೋಮವಾರ ಅಪರಾಹ್ನ 3:15ಕ್ಕೆ ಉದ್ಘಾಟಿಸಲಿದ್ದಾರೆ. ಯಕ್ಷಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷರಾದ ಉಡುಪಿ ಶಾಸಕ ಕೆ.ರಘುಪತಿ ಭಟ್,ಉಪಾಧ್ಯಕ್ಷರಾದಡಾ. ನಿ.ಬೀ.ವಿಜಯ ಬಲ್ಲಾಳ್ ಮತ್ತುಎಸ್.ವೇದವ್ಯಾಸ ತಂತ್ರಿ ಉಪಸ್ಥಿತರಿರುವರು. ಉದ್ಘಾಟನೆಯ ಬಳಿಕ ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗಳಿಂದ ‘ಚಕ್ರವ್ಯೆಹ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಉಡುಪಿ ಆಸುಪಾಸಿನ 31 ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಂದ ಡಿ.19ರ ವರೆಗೆ ರಾಜಾಂಗಣದಲ್ಲಿ ಪ್ರದರ್ಶನಗಳು ನಡೆಯಲಿದೆ. ಉಳಿದ 16 ಪ್ರೌಢ ಶಾಲೆಗಳ ವಿದ್ಯಾರ್ಥಿಗಳ ಪ್ರದರ್ಶನ ಡಿ.20ರಿಂದ 28ರವರೆಗೆ ಬ್ರಹ್ಮಾವರದಲ್ಲಿ ಜರಗಲಿದೆ ಎಂದು ಯಕ್ಷ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
Next Story