Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನ್ಯಾಯಾಲಯಗಳ ಪ್ರಕರಣಗಳು ತ್ವರಿತವಾಗಿ...

ನ್ಯಾಯಾಲಯಗಳ ಪ್ರಕರಣಗಳು ತ್ವರಿತವಾಗಿ ಮುಗಿಯುವಂತಾಗಲಿ: ನ್ಯಾ.ಪ್ರತಿಭಾ ಎಂ.ಸಿಂಗ್

ಮಹಿಳಾ ವಕೀಲರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ23 Nov 2019 11:31 PM IST
share

ಬೆಂಗಳೂರು, ನ.23: ನ್ಯಾಯಾಲಯದ ಪ್ರಕರಣಗಳು ನಿಗದಿತ ವೇಳೆಯಲ್ಲಿ ಮುಗಿಯುವಂತಾದರೆ ಜನತೆಗೆ ನ್ಯಾಯಾಲಯಗಳ ಬಗ್ಗೆ ಹೆಚ್ಚಿನ ವಿಶ್ವಾಸ ಮೂಡುತ್ತದೆ ಎಂದು ದಿಲ್ಲಿ ಕೈಕೋರ್ಟ್‌ನ ನ್ಯಾ.ಪ್ರತಿಭಾ ಎಂ.ಸಿಂಗ್ ಅಪ್ರಾಯಿಸಿದ್ದಾರೆ.

ಶನಿವಾರ ನಗರದ ಕಬ್ಬನ್ ಪಾರ್ಕ್‌ನ ಎನ್‌ಜಿಒ ಸಭಾಂಗಣದಲ್ಲಿ ಬೆಂಗಳೂರು ವಕೀಲರ ಸಂಘ ವತಿಯಿಂದ ಆಯೋಜಿಸಿದ್ದ ಬೆಂಗಳೂರು ಮಹಿಳಾ ವಕೀಲರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ನ್ಯಾಯಕ್ಕಾಗಿ ಬಂದ ಕಕ್ಷಿದಾರರಿಗೆ ತ್ವರಿತಗತಿಯಲ್ಲಿ ನ್ಯಾಯ ನೀಡುವಂತಾಗಬೇಕು. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ಸಾಕಷ್ಟು ಬದಲಾವಣೆಗಳು ಆಗಬೇಕಾಗಿದೆ ಎಂದು ತಿಳಿಸಿದರು.

ಜಗತ್ತಿಗೆ ನ್ಯಾಯ ಕೊಡುವ ಶಾಖೆ ನ್ಯಾಯಾಲಯ. ಹಿರಿಯ ನ್ಯಾಯವಾದಿಗಳ, ನ್ಯಾಯಮೂರ್ತಿಗಳು ತೋರಿಸಿದ ದಾರಿಯಲ್ಲಿ ನಾವು ನಡೆಯಬೇಕು. ಹಾಗೂ ಯುವ ವಕೀಲರು ಗ್ರಹಿಸುವ ಶಕ್ತಿಯನ್ನು ಹೆಚ್ಚು ರೂಢಿಸಿಕೊಳ್ಳಬೇಕು. ಜತೆಗೆ, ಕಕ್ಷಿದಾರರನ್ನು ಗೌರವಿಸಿದರೆ ನಮ್ಮನ್ನು ನಾವು ಗೌರವಿಸಿದಂತೆಯೇ ಎಂದು ಅವರು ತಿಳಿಸಿದರು.

ನ್ಯಾಯಕ್ಕಾಗಿ ಹಂಬಲಿಸಿ ಬರುವ ಸಂತ್ರಸ್ತರನ್ನು ವಕೀಲರು ನಗು ಮುಖದಲ್ಲಿ ಮಾತನಾಡಿಸಬೇಕು. ಇದರಿಂದ ಸಂತ್ರಸ್ತರಿಗೆ ಆತ್ಮವಿಶ್ವಾಸ ಮೂಡುತ್ತದೆ. ನ್ಯಾಯಾಲಯ ಇರುವುದೇ ಕಕ್ಷಿದಾರರಿಗಾಗಿ ಎಂಬುದನ್ನು ನಾನು ಮನಗಾಣುವ ಮೂಲಕ ಜನತೆಯ ಸೇವೆಯಲ್ಲಿ ತೊಡಗಬೇಕೆಂದು ಅವರು ಆಶಿಸಿದರು.

ವಕೀಲ ವೃತ್ತಿಯ ತರಬೇತಿಗಾಗಿ ದೆಹಲಿಗೆ ಸಾಕಷ್ಟು ವಕೀಲರು ದೇಶದ ಮೂಲೆ ಮೂಲೆಗಳಿಂದ ಬರುತ್ತಾರೆ. ಅಲ್ಲಿನ ಅನುಭವವೇ ವಿಶಿಷ್ಟವಾದುದ್ದೆಂದು ತಮ್ಮ ಅನುಭವವನ್ನು ಹಂಚಿಕೊಂಡ ಅವರು, ಮೊದಲ ಬಾರಿಗೆ ಖಾಸಗಿ ಸುದ್ದಿ ವಾಹಿನಿ ಪರವಾಗಿ ವಕಾಲತ್ತು ವಹಿಸಿದ್ದೇ. ಇದರಿಂದ ವಾಹಿನಿ ಪ್ರಸಾರ ಕಾಯ್ದೆಯೊಂದು ರೂಪಗೊಂಡಿತು ಎಂದು ಅವರು ಹೇಳಿದರು.

ಕರ್ನಾಟಕ ಹೈ ಕೋರ್ಟಿನ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮಾತನಾಡಿ, ಮಹಿಳಾ ವಕೀಲರು ಸಂಘಟಿತರಾಗಿ ಮಾಡಬೇಕಾದ ಕೆಲಸ ಸಾಕಷ್ಟಿದೆ. ಕಾನೂನಿನ ಸೀಮಿತ ತಿಳಿವಳಿಕೆಯೊಳಗೇ ಅನೇಕ ಸರಕಾರೇತರ ಸ್ವಯಂಸೇವಾ ಸಂಸ್ಥೆಗಳು ಇಂದು ಮಹಿಳೆಯರ ಪರವಾಗಿ ಕೆಲಸ ಮಾಡುತ್ತಿವೆ. ಬೀದಿಗಿಳಿದು ಹೋರಾಟ ಮಾಡಲಾಗದಿದ್ದರೂ ಮಹಿಳಾ ವಕೀಲರು ಇವರ ಬೆನ್ನಿಗೆ ನಿಂತು ಕಾನೂನು ನೆರವು ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್, ಪ್ರಧಾನ ಕಾರ್ಯದರ್ಶಿ ಎ.ಎನ್.ಗಂಗಾಧರಯ್ಯ, ಖಜಾಂಚಿ ಶಿವಮೂರ್ತಿ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X