ದಿ ಶೆಫರ್ಡ್ಸ್ ಇಂಟರ್‌ನ್ಯಾಶನಲ್ ಅಕಾಡಮಿಯ ವಾರ್ಷಿಕ ಕ್ರೀಡಾಕೂಟ

ಮಂಗಳೂರು, ನ.24: ನಗರದ ದಿ ಶೆಫರ್ಡ್ಸ್ ಇಂಟರ್‌ನ್ಯಾಶನಲ್ ಅಕಾಡಮಿಯ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ಜೆಪ್ಪು ಶಾಂತಿನಗರದ ಮೈದಾನದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರಾಷ್ಟ್ರ ಮಟ್ಟದ ಶಟಲ್ ಬ್ಯಾಂಡ್ಮಿಂಟನ್ ಆಟಗಾರ್ತಿ ಅಕಾಂಶಾ ಪೈ ಕ್ರೀಡಾಕೂಟವನ್ನು ಉದ್ಘಾಟಿಸಿದರು.
ದಿ ಶೆಫರ್ಡ್ಸ್ ಇಂಟರ್‌ನ್ಯಾಶನಲ್ ಅಕಾಡಮಿಯ ಅಧ್ಯಕ್ಷ ಮುಹಮ್ಮದ್ ನಿಸಾರ್ ಮಾತನಾಡಿ, ಶಿಕ್ಷಣವೆಂಬುದು ಬರೀ ಅಂಕ ಗಳಿಕೆಯಲ್ಲ, ಅದು ವ್ಯಕ್ತಿತ್ವದ ಬೆಳವಣಿಗೆ ಕೂಡಾ ಆಗಿರಬೇಕು ಎಂದರು.
ಬಳಿಕ ನಡೆದ ಕ್ರೀಡಾಕೂಟದಲ್ಲಿ ಪುಟಾಣಿ ವಿದ್ಯಾರ್ಥಿಗಳು ವಿವಿಧ ಆಟೋಟಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಣ್ಯರು, ಸಂಸ್ಥೆಯ ಅಧ್ಯಕ್ಷ, ಟ್ರಸ್ಟಿಗಳು ಹಾಗೂ ಆಡಳಿತಾಧಿಕಾರಿಗಳು ಚಿನ್ನ, ಬೆಳ್ಳಿ, ಕಂಚಿನ ಪದಕ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಿದರು.
ಅಕಾಡಮಿಯ ಉಪ ಪ್ರಾಂಶುಪಾಲೆ ಅಸ್ಮಾ ಸೈಯದ್ ವಂದಿಸಿದರು. ಗ್ರೇಡ್-1 ವಿದ್ಯಾರ್ಥಿಗಳು ಪ್ರಾರ್ಥಿಸಿದರು.






.gif)
.gif)
.gif)
.gif)
.gif)
.gif)

