Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. '8ನೇ ಪರಿಚ್ಛೇದಕ್ಕೆ ತುಳು ಸೇರ್ಪಡೆಗೆ...

'8ನೇ ಪರಿಚ್ಛೇದಕ್ಕೆ ತುಳು ಸೇರ್ಪಡೆಗೆ ಜನಪ್ರತಿನಿಧಿಗಳು ಶ್ರಮಿಸಲಿ'

ತುಳು ಅಕಾಡಮಿಯ ನೂತನ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್

ವಾರ್ತಾಭಾರತಿವಾರ್ತಾಭಾರತಿ24 Nov 2019 10:20 PM IST
share
8ನೇ ಪರಿಚ್ಛೇದಕ್ಕೆ ತುಳು ಸೇರ್ಪಡೆಗೆ ಜನಪ್ರತಿನಿಧಿಗಳು ಶ್ರಮಿಸಲಿ

ಮಂಗಳೂರು, ನ.24: ರಾಜ್ಯದ ಎಲ್ಲ ಶಾಸಕರ ಅನುಮೋದನೆ ಪಡೆದು ತುಳು ಭಾಷೆಯನ್ನು ಅಧಿಕೃತ ರಾಜ್ಯ ಭಾಷೆಯನ್ನಾಗಿ ಮಾಡಿ, ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ನಿಟ್ಟಿನಲ್ಲಿ ಜಿಲ್ಲೆಯ ಶಾಸಕರು ಶ್ರಮಿಸಬೇಕು ಎಂದು ತುಳು ಅಕಾಡಮಿಯ ನೂತನ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್ ಮನವಿ ಮಾಡಿದ್ದಾರೆ.

ನಗರದ ತುಳುಭವನದಲ್ಲಿ ರವಿವಾರ ಅಕಾಡಮಿಯ ಸರ್ವ ಸದಸ್ಯರೊಂದಿಗೆ ಅಧಿಕಾರ ಸ್ವೀಕಾರ ಮಾಡಿ ಅವರು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯದಲ್ಲೂ ಒಂದೇ ಪಕ್ಷದ ಸರಕಾರ ಇರುವುದರಿಂದ ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರಿಸುವುದು ಇನ್ನಷ್ಟು ಸುಲಭವಾಗಿದೆ. ಈ ನಿಟ್ಟಿನಲ್ಲಿ ಅಕಾಡಮಿ ಅಧ್ಯಕ್ಷನಾಗಿ ತಾನೂ ಪ್ರಯತ್ನ ನಡೆಸುತ್ತೇನೆ. ಲಿಪಿ, ಕ್ಯಾಲೆಂಡರ್ ಎರಡೂ ಇರುವ ತುಳು ಭಾಷೆಗೆ ಈ ಸ್ಥಾನಮಾನ ಸಿಗುವುದು ಅರ್ಹವೇ ಆಗಿದೆ ಎಂದರು.

ಇನ್ನೊಂದು ವರ್ಷದೊಳಗೆ ರಾಷ್ಟ್ರಾದ್ಯಂತ ಜನಗಣತಿ ಆರಂಭವಾಗಲಿದೆ. ಈ ಸಂದರ್ಭ ತುಳುನಾಡಿನ ಎಲ್ಲ ವರ್ಗ, ಧರ್ಮಗಳ ಜನತೆ ತಮ್ಮ ವ್ಯಾವಹಾರಿಕ ಭಾಷೆ ‘ತುಳು’ ಎಂಬುದಾಗಿ ನಮೂದಿಸುವಂತೆ ಅವರು ಮನವಿ ಮಾಡಿದರು.

ಜಮ್ಮು-ಕಾಶ್ಮೀರ ಸೇರಿದಂತೆ ದೇಶ ವಿವಿಧೆಡೆ ತೆರಳಿದರೆ ಅಲ್ಲಿನ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸುವಂತೆಯೇ ದೇಶ, ವಿದೇಶಗಳ ಪ್ರವಾಸಿಗರು ತುಳುನಾಡಿಗೆ ಬರುವಾಗ ಇಲ್ಲಿನ ಉಡುಗೆ ತೊಟ್ಟು ಸಂಭ್ರಮಿಸುವಂತಾಗಬೇಕು. ಅದಕ್ಕಾಗಿ ಬಸ್ಸು, ರೈಲ್ವೆ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಮುಟ್ಟಾಳೆ, ಕೊರಂಬು ಇತ್ಯಾದಿಗಳನ್ನೊಳಗೊಂಡಂತೆ ಸಾಂಪ್ರದಾಯಿಕ ಉಡುಗೆಗಳುಳ್ಳ ಕೌಂಟರ್ ತೆರೆಯಲಾಗುವುದು ಎಂದು ತುಳು ಅಕಾಡಮಿಯ ನೂತನ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್ ಪ್ರಕಟಿಸಿದರು.

ಶಾಸಕ ರಾಜೇಶ್ ನಾಕ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ರಹೀಂ ಉಚ್ಚಿಲ್, ಮಾಜಿ ಅಧ್ಯಕ್ಷ ವಾಮನ ನಂದಾವರ, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಅಕಾಡಮಿಯ ನೂತನ ಸದಸ್ಯರು ಇದ್ದರು. ಕಳೆದ ಅವಧಿಯಲ್ಲಿ ಪ್ರಕಟಿಸಿದ ಏಳು ಪುಸ್ತಕಗಳನ್ನು ಇದೇ ಸಂದರ್ಭ ಬಿಡುಗಡೆಗೊಳಿಸಲಾಯಿತು.

ಮುಖ್ಯಮಂತ್ರಿಯಾದರೆ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವುದಾಗಿ ಹಿಂದೆ ಯಡಿಯೂರಪ್ಪ ಭರವಸೆ ನೀಡಿದ್ದರು. ಈಗ ಅವರು ಸಿಎಂ ಆಗಿದ್ದಾರೆ. ಮುಂದಿನ ಉಪಚುನಾವಣೆ ಬಳಿಕ ತಮ್ಮ ಮಾತು ಈಡೇರಿಸುತ್ತಾರೆ ಎನ್ನುವ ನಂಬಿಕೆಯಿದೆ.
-ದಯಾನಂದ ಕತ್ತಲ್‌ಸಾರ್,
ತುಳು ಅಕಾಡಮಿಯ ನೂತನ ಅಧ್ಯಕ್ಷ

ತುಳುಭವನ ಕಾಮಗಾರಿ ಶೇ.40ರಷ್ಟು ಬಾಕಿ ಉಳಿದಿದ್ದು, ಇನ್ನೂ 3-4 ಕೋಟಿ ರು. ಅನುದಾನದ ಅಗತ್ಯವಿದೆ. ಅದರ ಬಿಡುಗಡೆಗೆ ಪ್ರಯತ್ನಿಸಲಾಗುವುದು.
-ಉಮಾನಾಥ ಕೋಟ್ಯಾನ್, ಶಾಸಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X