44.50 ಲಕ್ಷ ವೆಚ್ಚದ ವಿವಿಧ ಕಾಮಗಾರಿಗೆ ಗುದ್ದಲಿಪೂಜೆ: ಶಾಸಕ ಕಾಮತ್
ಮಂಗಳೂರು, ನ.24: ನಗರದ ವಿವಿಧೆಡೆ 44.50 ಲಕ್ಷ ವೆಚ್ಚದಲ್ಲಿ ಹಲವು ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಸೂಚನೆಯಂತೆ ಸ್ಥಳೀಯ ಮುಖಂಡರು ರವಿವಾರ ಗುದ್ದಲಿಪೂಜೆ ನೆರವೇರಿಸಿದರು.
ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಮುಗ್ರೋಡಿ, ಕೊಪ್ಪಲಕಾಡು, ಹೊಯಿಗೆಬೈಲ್, ಬೈತುರ್ಲಿ, ಮರೋಳಿ ಜಯನಗರ, ಬಂದರ್, ಮಂಗಳಾದೇವಿ ಸೇರಿದಂತೆ ವಿವಿಧೆಡೆ ಒಟ್ಟು ಎಂಟು ಕಾಮಗಾರಿಗಳಿಗೆ ಸ್ಥಳೀಯರ ಮೂಲಕ ಗುದ್ದಲಿಪೂಜೆ ನೆರವೇರಿಸಲಾಗಿದೆ. ಸುಮಾರು 44.50 ಲಕ್ಷ ರೂ. ವೆಚ್ಚದಲ್ಲಿ ಈ ಕಾಮಗಾರಿಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.
ಮಳೆಯಿಂದ ಹಾನಿಗೀಡಾದ ಕಡೆಗಳಲ್ಲಿ ಆಗಬೇಕಿರುವ ಕಾಮಗಾರಿಗಳ ಕುರಿತು ಸಾರ್ವಜನಿಕರು ನನ್ನಲ್ಲಿ ಮನವಿ ಸಲ್ಲಿಸಿದ್ದರು. ಅದರಂತೆ ಎಂಟು ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿದೆ. ಶೀಘ್ರವೇ ಈ ಕಾಮಗಾರಿಗಳು ಪ್ರಾರಂಭವಾಗಲಿದ್ದು, ಕಾಮಗಾರಿ ನಡೆಯುವ ವೇಳೆ ಸಾರ್ವಜನಿಕರ ಸಹಕಾರ ಬೇಕಿದೆ ಎಂದರು.
ಸ್ಥಳೀಯ ನಿವಾಸಿಗಳ ಬೇಡಿಕೆಯಂತೆ ಅಗತ್ಯವಿರುವ ಕಾಮಗಾರಿಗಳನ್ನು ಈಗಾಗಲೇ ಗುರುತಿಸಲಾಗಿದೆ. ಮುಂದಿನ ದಿನಗಳಲ್ಲಿ ಅನುದಾನ ಜೋಡಿಸಿ ಜನರ ಅಪೇಕ್ಷೆಯ ಎಲ್ಲ ಕಾಮಗಾರಿಗಳನ್ನು ಮಾಡಿಕೊಡುವುದಾಗಿ ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.







