ಯು.ಟಿ.ಖಾದರ್‌ಗೆ ರಕ್ಷಣೆ: ಡಿಸಿಪಿ ಅರುಣಾಂಶುಗಿರಿ
ಮಂಗಳೂರು, ನ. 24: ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಅವರಿಗೆ ಪೊಲೀಸ್ ಭದ್ರತೆ ನೀಡಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಉಪ ಆಯುಕ್ತ ಅರುಣಾಂಶುಗಿರಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಠ್ ಮೇಲೆ ಇತ್ತೀಚೆಗೆ ಕೊಲೆಯತ್ನ ನಡೆದಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರಿಗೆ ಪೊಲೀಸ್ ರಕ್ಷಣೆ ನೀಡಲಿದ್ದೇವೆ ಎಂದು ಹೇಳಿದರು.
ಖಾದರ್ ಪ್ರಸ್ತುತ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಉಪ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಅಲ್ಲಿನ ಜಿಲ್ಲಾ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಗನ್ ಮ್ಯಾನ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಶಾಸಕರು ಮಂಗಳೂರಿಗೆ ವಾಪಸಾದ ಬಳಿಕ ನಗರದಲ್ಲಿ ಪ್ರತ್ಯೇಕವಾಗಿ ಗನ್‌ಮ್ಯಾನ್ ನೇಮಿಸಲಾಗುವುದು ಎಂದು ಡಿಸಿಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





