Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಾಳೆಯಿಂದ ಐತಿಹಾಸಿಕ ಬಸವನಗುಡಿ ಕಡಲೆಕಾಯಿ...

ನಾಳೆಯಿಂದ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ

ವಾರ್ತಾಭಾರತಿವಾರ್ತಾಭಾರತಿ24 Nov 2019 11:32 PM IST
share
ನಾಳೆಯಿಂದ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ

ಬೆಂಗಳೂರು, ನ.24: ನಗರದಲ್ಲಿ ಕಡೆ ಕಾರ್ತಿಕ ಸೋಮವಾರದಂದು ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಬಸವಗುಡಿಯಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ರಾಜ್ಯ ಹಾಗೂ ಹೊರ ರಾಜ್ಯಗಳಿಂದ ವಿವಿಧ ಬಗೆಯ ಕಡಲೆಕಾಯಿಯ ಮಳಿಗೆಗಳು ತಲೆ ಎತ್ತಿವೆ.

ನಾಳೆಯಿಂದ ಮೂರು ದಿನಗಳ ಕಾಲ ನಡೆಯುವ ಕಡಲೆಕಾಯಿ ಪರಿಷೆಯ ಹಿನ್ನೆಲೆಯಲ್ಲಿ ಬುಲ್ ಟೆಂಪಲ್ ರಸ್ತೆ, ಎನ್.ಆರ್.ಕಾಲೋನಿ ರಸ್ತೆ, ರಾಮಕೃಷ್ಣ ಆಶ್ರಮ ರಸ್ತೆಯಲ್ಲಿ ಕಡಲೆಕಾಯಿ ರಾಶಿ ರಾರಾಜಿಸುತ್ತಿದ್ದು, ಪರಿಷೆಗೆ ಗಡಂಗ್, ಬಾದಾಮಿ, ಸಾಮ್ರಾಟ್ ಸೇರಿದಂತೆ ವಿವಿಧ ತಳಿಗಳ ಕಡಲೆಕಾಯಿಹಾಗೂ ಕೆಂಪು, ಗುಲಾಬಿ ಬಣ್ಣದ ಬೀಜ ಹೊಂದಿರುವ ಕಡಲೆಕಾಯಿ ಬಂದಿವೆ. ರಾಮಕೃಷ್ಣ ಆಶ್ರಮದಿಂದ ಎನ್.ಆರ್. ಕಾಲೋನಿವರೆಗೆ, ಠ್ಯಾಗೋರ್ ಸರ್ಕಲ್‌ನಿಂದ ಹನುಮಂತನಗರ ವರೆಗೆ, ಬಿಎಂಎಸ್ ಕಾಲೇಜು ಮುಂಭಾಗ ಸೇರಿದಂತೆ ದೊಡ್ಡಗಣಪತಿ ದೇವಸ್ಥಾನ ಸುತ್ತಲ ಪ್ರದೇಶದಲ್ಲಿ ವ್ಯಾಪಾರಿಗಳು ಮಳಿಗೆ ನಿರ್ಮಿಸಿದ್ದು, ನ.23 ಮತ್ತು 24ರಂದು ರಜೆ ದಿನವಾಗಿರುವುದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪರಿಷೆಗೆ ಆಗಮಿಸುವ ಸಾಧ್ಯತೆ ಇದೆ.

ಕುಣಿಗಲ್, ಚಿಂತಾಮಣಿ, ಶ್ರೀನಿವಾಸಪುರ, ಮಂಡ್ಯ, ಮೈಸೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಾಗಡಿ ಹೀಗೆ ರಾಜ್ಯದ ಹಲವು ಭಾಗಗಳಿಂದ ಕಡಲೆಕಾಯಿ ಬಂದಿದ್ದು, ಆಂಧ್ರಪ್ರದೇಶ ಮತ್ತು ತಮಿಳುನಾಡಿನಿಂದ ಬಗೆ ಬಗೆಯ ಕಡಲೆಕಾಯಿ ಬಂದಿವೆ.

ಪರಿಷೆಯಲ್ಲಿ ರೈತರ ಮಳಿಗೆಗಿಂತ ವ್ಯಾಪಾರಿಗಳದೇ ಕಾರುಬಾರು ಜೋರಾಗಿದ್ದು, ಒಂದು ಸೇರು ಹಸಿ ಕಾಯಿ ಹಾಗೂ ಹುರಿದ ಕಡಲೆಕಾಯಿಗೆ 30-40 ರೂ. ಇದೆ. ರಸ್ತೆಯ ಎಡ ಮತ್ತು ಬಲ ಬದಿಗಳಲ್ಲಿ ಬಹುತೇಕ ಮಳಿಗೆಗಳಲ್ಲಿ ಹಸಿಯ ಹಾಗೂ ಹುರಿದ ಕಡಲೆಕಾಯಿ ರಾಶಿ ಹಾಕಿದ್ದರೆ, ಮತ್ತೆ ಕೆಲವು ಮಳಿಗೆಗಳಲ್ಲಿ ಮಾರಾಟಗಾರರು ಅಲ್ಲಿಯೇ ಗ್ಯಾಸ್ ಸ್ಟೌವ್ ಹಚ್ಚಿಕೊಂಡು ಹುರಿದ ಕಡಲೆಕಾಯಿ ಮಾರಾಟ ಮಾಡುತ್ತಿದ್ದಾರೆ.

ನಾಳೆ ಅಧಿಕೃತ ಚಾಲನೆ: ನ. 25ರಂದು ಬೆಳಗ್ಗೆ 9.30ಕ್ಕೆ ಮೇಯರ್ ಎಂ.ಗೌತಮ್ ಕುಮಾರ್ ಅವರು ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಯಾಗಿ ಉಪಮುಖ್ಯಮಂತ್ರಿ ಡಾ.ಸಿ.ಎಸ್. ಅಶ್ವಥ್ ನಾರಾಯಣ್, ಸಚಿವ ಆರ್.ಅಶೋಕ್, ಶಾಸಕ ರವಿಸುಬ್ರಹ್ಮಣ್ಯ, ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ.

ಪೊಲೀಸ್ ಬಿಗಿ ಭದ್ರತೆ: ಪರಿಷೆಗೆ ಲಕ್ಷಾಂತರ ಜನರು ಭೇಟಿ ನೀಡಲಿದ್ದು, ಪೊಲೀಸ್ ಇಲಾಖೆ ಬಿಗಿ ಭದ್ರತೆ ನೀಡಿದೆ. ಇಬ್ಬರು ಎಸಿಪಿ, 8 ಮಂದಿ ಇನ್‌ಸ್ಪೆಕ್ಟರ್, 12 ಮಂದಿ ಪಿಎಸ್‌ಐ, ಒಂದು ಕೆಎಸ್‌ಆರ್‌ಪಿ ತುಕಡಿ, 250 ಮಂದಿ ಗೃಹರಕ್ಷಕರು ಸೇರಿದಂತೆ ಮೂರು ಪಾಳಿಯದಲ್ಲಿ 300 ಪೊಲೀಸರು ಭದ್ರತೆ ನೀಡಲಿದ್ದಾರೆ. ಪರಿಷೆ ಸುತ್ತಲು 12 ಸಿಸಿ ಟಿವಿ ಅಳವಡಿಸಿದ್ದು, ಒಂದು ಕಂಟ್ರೋಲ್ ರೂಮ್ ತೆರೆಯಲಾಗಿದೆ. ಭದ್ರತೆ ದೃಷ್ಟಿಯಿಂದ ಒಂದು ಕಡೆ ಚೆಕ್ ಪಾಯಿಂಟ್, ಧ್ವನಿವರ್ಧಕ ಅಳವಡಿಸಲಾಗುವುದು ಎಂದು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸೆಪಟ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X