Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಸಂವಿಧಾನ ವಿರೋಧಿ ಷಡ್ಯಂತ್ರ': ದಲಿತ...

'ಸಂವಿಧಾನ ವಿರೋಧಿ ಷಡ್ಯಂತ್ರ': ದಲಿತ ಸಂಘಟನೆಗಳಿಂದ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 Nov 2019 5:46 PM IST
share
ಸಂವಿಧಾನ ವಿರೋಧಿ ಷಡ್ಯಂತ್ರ: ದಲಿತ ಸಂಘಟನೆಗಳಿಂದ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ

ಮಡಿಕೇರಿ, ನ.25: ಸಮಾನತೆಯ ಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿರುವ ಸಂವಿಧಾನದ ಆಶಯಗಳನ್ನು ಹಾಳುಗೆಡಹಲು ನಿರಂತರ ಷಡ್ಯಂತ್ರಗಳು ನಡೆಯುತ್ತಿದೆ ಎಂದು ಆರೋಪಿಸಿ ಸಂವಿಧಾನ ರಕ್ಷಣಾ ಹೋರಾಟ ಸಮಿತಿಯ ನೇತೃತ್ವದಲ್ಲಿ ವಿವಿಧ ದಲಿತ ಸಂಘಟನೆಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು.

ನಗರದ ಜ.ತಿಮ್ಮಯ್ಯ ವೃತ್ತದಲ್ಲಿ ‘ಮಾನವ ಸರಪಳಿ’ ನಿರ್ಮಿಸಿ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ದಲಿತ ಸಂಘಟನೆಗಳ ಕಾರ್ಯಕರ್ತರು ಘೋಷಣೆಗಳ ಸಹಿತ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಸಂವಿಧಾನ ರಕ್ಷಣಾ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಮೋಹನ್‍ಮೌರ್ಯ ಮಾತನಾಡಿ, ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು  ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನವನ್ನು ರಚನೆ ಮಾಡಿಲ್ಲ ಎಂದು ಹೇಳಿಕೆ ನೀಡಿರುವುದು ಖಂಡನೀಯ. ಅಂಬೇಡ್ಕರ್ ರಚಿಸಿರುವ ಸಂವಿಧಾನ ಸರ್ವ ನಾಗರಿಕರಿಗೆ, ಸರ್ವ ಧರ್ಮೀಯರಿಗೆ ಹಾಗೂ ಭಾರತ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆಯನ್ನು ಒದಗಿಸಲು ಎಲ್ಲಾ ರೀತಿಯ ಅವಕಾಶ ಮಾಡಿಕೊಟ್ಟಿದೆ. ಆದರೆ, ಆಳುವ ಸರ್ಕಾರಗಳು ಸಂವಿಧಾನವನ್ನು ಸರಿಯಾಗಿ ಜಾರಿ ಮಾಡದ ಪರಿಣಾಮ ಇಂದು ಸಂವಿಧಾನವನ್ನು ದೂಷಣೆ ಮಾಡುವ ಕೆಲಸಕ್ಕೆ ಕೆಲವು ಕಿಡಿಗೇಡಿಗಳು ಮುಂದಾಗಿದ್ದಾರೆ ಎಂದು ಆರೋಪಿಸಿದರು. ಈ ದೇಶದ ಸಂವಿಧಾನ ಸರಿಯಿಲ್ಲ,  ಅಂಬೇಡ್ಕರ್ ಸಂವಿಧಾನವನ್ನು ಬರೆದಿಲ್ಲ, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂಬ ಹೇಳಿಕೆಗಳನ್ನು ಎಲ್ಲಾ ದಲಿತಪರ ಸಂಘಟನೆಗಳು ಖಂಡಿಸುತ್ತವೆ ಎಂದರು.

ಸಚಿವರ ರಾಜೀನಾಮೆಗೆ ಆಗ್ರಹ
ಸೋಮವಾರಪೇಟೆ ತಾಲೂಕು ಸಂಚಾಲಕ ಡಿ.ಎಸ್.ನಿರ್ವಾಹಣಪ್ಪ ಮಾತನಾಡಿ, ಡಾ.ಅಂಬೇಡ್ಕರ್ ವಿರುದ್ಧವಾದ ಶಿಕ್ಷಣ ಇಲಾಖೆಯ ಹೇಳಿಕೆ ಹಿನ್ನೆಲೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಮತ್ತು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂವಿಧಾನ ರಕ್ಷಣಾ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಂ.ನಂದಕುಮಾರ್, ಮಡಿಕೇರಿ ತಾಲೂಕು ಸಂಚಾಲಕರಾದ ಹೆಚ್.ಎಲ್.ದಿವಾಕರ್, ದೀಪಕ್, ಪಾವನಿ, ರಮೇಶ್ ಚಕ್ರವರ್ತಿ, ಎ.ಕೆ.ಹರೀಶ್, ಸುಬ್ಬಯ್ಯ, ರವಿ, ರಘು, ಬೈರಬೋಜ, ಸೋಮವಾರಪೇಟೆ ತಾಲೂಕು ಸಂಚಾಲಕರಾದ ಜೋಯಪ್ಪ ಹಾನಗಲ್, ಹನುಮಂತಯ್ಯ, ಹೊನ್ನಪ್ಪ, ಟಿ.ಎ.ಸುರೇಶ್, ಹೆಚ್.ಎಂ. ಸೋಮಪ್ಪ, ಕೆ.ಬಿ.ಮಂಜುನಾಥ್, ರಾಜು, ಸುಕುಮಾರ್, ಸಣ್ಣಪ್ಪ, ಜಗದೀಶ್, ವೆಂಕಟೇಶ್, ರಾಜು ಶನಿವಾರಸಂತೆ, ಗಣೇಶ್ ಕೂಡಿಗೆ, ಜೆ.ಎಲ್ ಜನಾರ್ಧನ್, ಶಿವಲಿಂಗ, ಪಾಲಾಕ್ಷ, ಮಂಜುನಾಥ್, ರವೀಂದ್ರನಾಥ್, ಎಂ.ಬಿ. ಲತ, ಮಾಲಂಬಿ, ಕೆ.ಜೆ. ಸಾವಿತ್ರಮ್ಮ, ಹೆಚ್.ವಿ. ಜಯಮ್ಮ , ವೀಣಾ, ವಿರಾಜಪೇಟೆ ತಾಲೂಕು ಸಂಚಾಲಕರಾದ ವೀರಭದ್ರ ಮಾಸ್ಟರ್, ಕೃಷ್ಣಪ್ಪ, ಪರಶುರಾಮ್, ದಿನು ಬೋಜಪ್ಪ, ಅರ್ಜುನ್ ಅಮ್ಮತ್ತಿ ಹಾಗೂ ಮತ್ತಿತರ ಕಾರ್ಯಕರ್ತರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X