ನ.29: ವಿಕಲಚೇತನರಿಗೆ ಕ್ರೀಡಾಕೂಟ
ಮಂಗಳೂರು, ನ. 25: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ಉತ್ತರ ವಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದ.ಕ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ (ಡಿ.ಡಿ.ಆರ್.ಸಿ), ಲಯನ್ಸ್ ಲಿಂಬ್ ಸೆಂಟರ್, ದ.ಕ. ಮತ್ತು ಉಡುಪಿ ಜಿಲ್ಲಾ ವಿಕಲಚೇತನರ ಸಂಘ, ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ, ಗ್ರಾಮೀಣ ತಾಲೂಕು ಪುನರ್ವಸತಿ ಕಾರ್ಯಕರ್ತರು ಮಂಗಳೂರು ಇವುಗಳ ಸಹಯೋಗದೊಂದಿಗೆ ನ.29ರಂದು ಬೆಳಗ್ಗೆ 9ರಿಂದ ಲೇಡಿಹಿಲ್ ಗಾಂಧಿನಗರದ ದ.ಕ.ಜಿ.ಪಂ ಹಿ.ಪ್ರಾ.ಶಾಲೆಯ ಮೈದಾನದಲ್ಲಿ ಮಂಗಳೂರು ತಾಲೂಕು ಮಟ್ಟದ ವಿಕಲಚೇತನರಿಗೆ ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ಕ್ರೀಡಾಕೂಟ ಏರ್ಪಡಿಸಲಾಗಿದೆ.
ಮಾಹಿತಿಗಾಗಿ ಮೊ.ಸಂ: 9964052949, 7026336559, ದೂ.ಸಂ: 0824-2422300ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿಯ ಪ್ರಕಟನೆ ತಿಳಿಸಿದೆ.
Next Story