ನ.26: ಕಾನೂನು ದಿನಾಚರಣೆ
ಮಂಗಳೂರು, ನ.25: ಮಂಗಳೂರು ಬಿಎಆರ್ ಅಸೋಸಿಯೇಶನ್ (ರಿ), ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವುಗಳ ಜಂಟಿ ಆಶ್ರಯದಲ್ಲಿ ಕಾನೂನು ದಿನಾಚರಣೆಯು ನ.26ರಂದು ಸಂಜೆ 5:30ಕ್ಕೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.
ನಿವೃತ್ತ ನ್ಯಾಯಮೂರ್ತಿ ಎ. ಚಂದ್ರಶೇಖರ್ ಅತಿಥಿಯಾಗಿ ಭಾಗವಹಿಸಲಿದ್ದಾರೆ. ದ.ಕ. ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮತ್ತು ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷ ಕಡ್ಲೂರ್ ಸತ್ಯನಾರಾಯಣ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





