Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚುನಾವಣಾ ಬಾಂಡ್‌ಗಳ ಗುಪ್ತಸಂಖ್ಯೆಯನ್ನು...

ಚುನಾವಣಾ ಬಾಂಡ್‌ಗಳ ಗುಪ್ತಸಂಖ್ಯೆಯನ್ನು ಎಸ್‌ಬಿಐ ದಾಖಲಿಸಿಕೊಳ್ಳುವುದು ಬಹಿರಂಗ

ಸುಳ್ಳು ಹೇಳಿಕೆ ನೀಡಿ ಸಾರ್ವಜನಿಕರನ್ನು ದಾರಿ ತಪ್ಪಿಸಿದ್ದ ಸರಕಾರ: ಆರೋಪ

ವಾರ್ತಾಭಾರತಿವಾರ್ತಾಭಾರತಿ25 Nov 2019 11:51 PM IST
share
ಚುನಾವಣಾ ಬಾಂಡ್‌ಗಳ ಗುಪ್ತಸಂಖ್ಯೆಯನ್ನು ಎಸ್‌ಬಿಐ ದಾಖಲಿಸಿಕೊಳ್ಳುವುದು ಬಹಿರಂಗ

ಹೊಸದಿಲ್ಲಿ, ನ.25: ಚುನಾವಣಾ ಬಾಂಡ್‌ಗಳ ರಹಸ್ಯ ಕೋಡ್‌ಗಳನ್ನು ಅವುಗಳನ್ನು ವಿತರಿಸುವ ಎಸ್‌ಬಿಐ ದಾಖಲಿಸಿಕೊಳ್ಳುತ್ತದೆ ಎನ್ನುವುದು ಸುದ್ದಿ ಜಾಲತಾಣ ‘ದಿ ಕ್ವಿಂಟ್’ಗೆ ಲಭಿಸಿರುವ ಆರ್‌ಟಿಐ ಉತ್ತರದಿಂದ ಬಟಾಬಯಲಾಗಿದೆ. ಇದರೊಂದಿಗೆ ಸರಕಾರವು ಈ ಹಿಂದೆ ಸುಳ್ಳು ಹೇಳಿಕೆಯನ್ನು ನೀಡಿ ಸಾರ್ವಜನಿಕರನ್ನು ದಾರಿ ತಪ್ಪಿಸಿತ್ತು ಎನ್ನುವುದೂ ಬಹಿರಂಗಗೊಂಡಿದೆ.

ಚುನಾವಣಾ ಬಾಂಡ್‌ಗಳು ಹೊಂದಿರುವ,ಕೇವಲ ಅಲ್ಟ್ರಾವಯಲೆಟ್ ಕಿರಣಗಳ ಮೂಲಕ ಗೋಚರವಾಗುವ ವಿಶಿಷ್ಟ,ರಹಸ್ಯ,ಆಲ್ಫಾನ್ಯುಮರಿಕ್ ಅಥವಾ ಅಕ್ಷರಸಂಖ್ಯಾಯುಕ್ತ ಕೋಡ್‌ಗಳಿಂದಾಗಿ ಎಲ್ಲ ಚುನಾವಣಾ ಬಾಂಡ್‌ಗಳ ಜಾಡನ್ನು ಪತ್ತೆ ಹಚ್ಚಬಹುದಾಗಿದೆ ಎಂದು ದಿ ಕ್ವಿಂಟ್ ಎಪ್ರಿಲ್ 2018ರಷ್ಟು ಹಿಂದೆಯೇ ತನ್ನ ವರದಿಯಲ್ಲಿ ಬಯಲುಗೊಳಿಸಿತ್ತು.

ಈ ವರದಿಗೆ ಪ್ರತಿಕ್ರಿಯಿಸಿದ್ದ ಕೇಂದ್ರ ವಿತ್ತ ಸಚಿವಾಲಯವು ‘ಖರೀದಿದಾರ ಅಥವಾ ನಿರ್ದಿಷ್ಟ ಚುನಾವಣಾ ಬಾಂಡ್‌ನ್ನು ಸಲ್ಲಿಸುವ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳಲ್ಲಿ ಎಸ್‌ಬಿಐ ಈ ರಹಸ್ಯ ಕೋಡ್‌ನ್ನು ನಮೂದಿಸುವುದಿಲ್ಲ ’ಎಂಬ ಮಾಧ್ಯಮ ಹೇಳಿಕೆಯೊಂದನ್ನು ಹೊರಡಿಸುವ ಮೂಲಕ ಸಾರ್ವಜನಿಕರನ್ನು ದಾರಿ ತಪ್ಪಿಸಿತ್ತು.

ಆದರೆ ದಿ ಕ್ವಿಂಟ್ ಈಗ ಆರ್‌ಟಿಐ ಕಾಯ್ದೆಯಡಿ ಎಸ್‌ಬಿಐನಿಂದ ಪಡೆದುಕೊಂಡಿರುವ ದಾಖಲೆಗಳು ಬೇರೆಯದೇ ಕಥೆಯನ್ನು ಹೇಳುತ್ತಿವೆ. ರಹಸ್ಯ ಆಲ್ಪಾನ್ಯುಮರಿಕ್ ಕೋಡ್‌ನ್ನು ಎಸ್‌ಬಿಐ ದಾಖಲಿಸಿಕೊಳ್ಳುತ್ತದೆ ಎನ್ನುವುದನ್ನು ಈ ದಾಖಲೆಗಳು ತೋರಿಸಿವೆ. ಚುನಾವಣಾ ಬಾಂಡ್‌ಗಳ ವಿತರಣೆಯ ಹೊಣೆಯನ್ನು ಎಸ್‌ಬಿಐ ಹೊಂದಿದೆ.

ವಾಸ್ತವದಲ್ಲಿ ವಿತ್ತ ಸಚಿವಾಲಯವೇ ರಹಸ್ಯ ಕೋಡ್‌ನ್ನು ದಾಖಲಿಸಿಕೊಳ್ಳಲು ಎಸ್‌ಬಿಐಗೆ ಅವಕಾಶ ನೀಡಿತ್ತು ಮತ್ತು ಯಾವುದೇ ರೀತಿಯಲ್ಲಿ ಅದು ಸೋರಿಕೆಯಾಗದಂತೆ ಅತ್ಯಂತ ರಹಸ್ಯವಾಗಿರಿಸುವಂತೆ ಅದಕ್ಕೆ ಸೂಚಿಸಿತ್ತು ಎನ್ನುವುದನ್ನು ಈ ದಾಖಲೆಗಳು ಸ್ಪಷ್ಟವಾಗಿ ಹೇಳುತ್ತಿವೆ.

ರಾಜಕೀಯ ಪಕ್ಷಗಳಿಗೆ ದೇಣಿಗೆಯನ್ನು ನೀಡುವವರಿಗೆ ಯಾವುದೇ ಕಿರುಕುಳವಾಗದಂತೆ ನೋಡಿಕೊಳ್ಳಲು ಬಾಂಡ್‌ಗಳ ಮೇಲೆ ಕ್ರಮಸಂಖ್ಯೆಯನ್ನು ಅಗೋಚರ ಶಾಯಿಯಿಂದ ಗುರುತಿಸಲಾಗುತ್ತದೆ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ಖಜಾಂಚಿ ಪಿಯೂಷ ಗೋಯಲ್ ಅವರು ನ.21ರಂದು ಸುದ್ದಗೋಷ್ಠಿಯಲ್ಲಿ ತಿಳಿಸಿದ್ದರು. ಆದರೆ ರಹಸ್ಯ ಕೋಡ್ ಅನ್ನು ಎಸ್‌ಬಿಐ ದಾಖಲಿಸಿಕೊಳ್ಳುತ್ತದೆ ಎನ್ನುವುದನ್ನು ಉಲ್ಲೇಖಿಸಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X