BREAKING NEWS- ಮಹಾರಾಷ್ಟ್ರ: ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ

ಮುಂಬೈ, ನ.26: ಮಹಾರಾಷ್ಟ್ರದ ರಾಜಕಾರಣದಲ್ಲಿ ನಡೆದ ಮಹತ್ವದ ಬೆಳವಣಿಗೆಯಲ್ಲಿ ಎನ್ಸಿಪಿ ಮುಖಂಡ ಅಜಿತ್ ಪವಾರ್ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ನೇತೃತ್ವದ ಸರಕಾರಕ್ಕೆ ಬುಧವಾರವೇ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಬಹುಮತ ಸಾಬೀತಿಗೆ ಮೊದಲೇ ಅಜಿತ್ ಪವಾರ್ ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಇಂದು ಮಧ್ಯಾಹ್ನ 3:30ಕ್ಕೆ ತುರ್ತು ಸುದ್ದಿಗೋಷ್ಠಿ ಕರೆದಿದ್ದು, ಅವರು ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆಂಬ ಕುತೂಹಲ ಎಲ್ಲರಲ್ಲಿದೆ.
Next Story