Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಕಾಸ್ ಕಾಲೇಜಿನ ‘ಪಾಂಚ್ ಸೌ ಕಾ ಜೋಶ್’...

ವಿಕಾಸ್ ಕಾಲೇಜಿನ ‘ಪಾಂಚ್ ಸೌ ಕಾ ಜೋಶ್’ ಉಡುಪಿ ಜಿಲ್ಲಾ ಮಟ್ಟದ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ26 Nov 2019 6:49 PM IST
share
ವಿಕಾಸ್ ಕಾಲೇಜಿನ ‘ಪಾಂಚ್  ಸೌ ಕಾ ಜೋಶ್’ ಉಡುಪಿ ಜಿಲ್ಲಾ ಮಟ್ಟದ ಸ್ಪರ್ಧೆ

ಉಡುಪಿ: ವಿಕಾಸ್ ಪದವಿ ಪೂರ್ವ ಕಾಲೇಜಿನಿಂದ ಆಯೋಜಿಸಲ್ಪಟ್ಟ ‘ಪಾಂಚ್  ಸೌ ಕಾ ಜೋಶ್’ ಮೂರನೇ ಆವೃತ್ತಿಯ ಉಡುಪಿ  ಜಿಲ್ಲಾ ಮಟ್ಟದ ಸ್ಪರ್ಧೆಯು ಸೋಮವಾರ ಉಡುಪಿಯ ಟಿ ಎ ಪೈ ಆಂಗ್ಲಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆಸಲಾಯಿತು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ವಿಕಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುನೀಲ್ ಬಿ ಎಮ್, ಟಿ ಎ ಪೈ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಗೌರವ ಅತಿಥಿಗಳಾಗಿ ಋಷಿ ಅಕಾಡೆಮಿಯ ಸ್ಥಾಪಕ ಪ್ರಭಾಕರ್ ಶೆಟ್ಟಿ, ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯ ಸಮನ್ವಯಾಧಿಕಾರಿ ಜೆ ಪಾಲೆಮಾರ್, ಡೀನ್ ಡಾ.ಮಂಜುಳಾ ರಾವ್, ಕಾರ್ಯಕ್ರಮ ಸಂಯೋಜಕರಾದ ಅಜಯ್ ಕರ್ಕೇರಾ,  ಶ್ರೀ ಲಕ್ಷ್ಮೀಶ್ ಭಟ್ ಉಪಸ್ಥಿತರಿದ್ದರು.

ಟಿ ಎ ಪೈ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಮಂಜುನಾಥ್ ಕೆ ವಿ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಅಭಿಜ್ಞಾ ಎಜ್ಯುಕೇಷನ್ ಪ್ರೈವೇಟ್ ಲಿಮಿಟೆಡ್‍ನ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಅಭಿಲಾಷ್ ಕೆ ಯವರು ವಿದ್ಯಾರ್ಥಿಗಳಿಗೆ ಎಸ್‍ಎಸ್‍ಎಲ್‍ಸಿ ನಂತರದ ವಿದ್ಯಾಭ್ಯಾಸ ಹಾಗೂ ವೃತ್ತಿಮಾರ್ಗದರ್ಶನದ ಬಗ್ಗೆ ಮಾಹಿತಿ ನೀಡಿದರು.  

ಸ್ವದೇಶಿ ವಸ್ತುಗಳ ಉತ್ಪಾದನೆ ಹಾಗೂ ಬಳಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಹಿಂದೆ ಕೇಂದ್ರ ಸರ್ಕಾರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಸಾರಥ್ಯದಲ್ಲಿ ಮೇಕ್ ಇನ್ ಇಂಡಿಯಾ ಕಾರ್ಯಕ್ರಮಕ್ಕೆ ಚಾಲನೆ  ನೀಡಲಾಗಿತ್ತು. ಭಾರತ ದೇಶದ ಆರ್ಥಿಕ ಪರಿಸ್ಥಿತಿಯ ಸುಧಾರಣೆ ಮತ್ತು ಆಧುನಿಕ ತಂತ್ರಜ್ಞಾನದ ಮೂಲಕ ಔದ್ಯೋಗಿಕ ಕ್ರಾಂತಿ ಇದರ ಮೂಲ ಉದ್ಧೇಶ. ವಿದ್ಯಾರ್ಥಿಗಳಲ್ಲಿ ಈ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸುವುದಕ್ಕೋಸ್ಕರ ವಿಕಾಸ್ ಪದವಿ ಪೂರ್ವ ಕಾಲೇಜು ‘ಪಾಂಚ್  ಸೌ ಕಾ ಜೋಶ್’ ಎಂಬ ಕಾರ್ಯಕ್ರಮವನ್ನು ಸ್ಪರ್ಧೆಯ ಮೂಲಕ ರಾಜ್ಯದ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಈ ಹಿಂದೆ ಪರಿಚಯಿಸಿತ್ತು. ಇದರ ಮೂರನೇ ಆವೃತ್ತಿಯ ಅಂಗವಾಗಿ ಉಡುಪಿ ಜಿಲ್ಲೆಯ ಪ್ರೌಢಶಾಲೆಯ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಮಾದರಿ ತಯಾರಿಕೆಯ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ವಿಕಾಸ ಸಮೂಹ ಶಿಕ್ಷಣ ಸಂಸ್ಥೆಯ ಮೂಲಕ ಪಡೆದ 500 ರೂಪಾಯಿಗಳ ಮೂಲ ಬಂಡವಾಳದೊಂದಿಗೆ ತಯಾರಿಸಿದ ಮಾದರಿಗಳನ್ನು ಪ್ರದರ್ಶಿಸಲಾಯಿತು. ಪ್ರತಿ ವಿಭಾಗದ ವಿಜೇತ ತಂಡಗಳಿಗೆ ಹತ್ತು ಸಾವಿರ ರೂಪಾಯಿಗಳ ನಗದು ಬಹುಮಾನ ಮತ್ತು 5000 ರೂಪಾಯಿಗಳ ಸಮಾಧಾನಕರ  ಬಹುಮಾನಗಳನ್ನು ವಿತರಿಸಲಾಯಿತು.

ವಿಜ್ಞಾನ  ವಿಭಾಗದಲ್ಲಿ ಮಿಲಾಗ್ರಿಸ್ ಪ್ರೌಢ ಶಾಲೆಯ  ವಿದ್ಯಾರ್ಥಿಗಳು, ಕಲಾ ವಿಭಾಗದಲ್ಲಿ ಸೈಂಟ್ ಜಾನ್ಸ್ ಅಕಾಡೆಮಿಯ  ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಟಿ ಎ ಪೈ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಬಹುಮಾನವನ್ನು ಪಡೆದಿದ್ದಾರೆ.

ಸಮಾಧಾನಕರ ಬಹುಮಾನವನ್ನು  ಸೈಂಟ್ ಜಾನ್ಸ್ ಅಕಾಡೆಮಿ ಉಡುಪಿ, ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ಇಲ್ಲಿನ ವಿದ್ಯಾರ್ಥಿಗಳು ಪಡೆದರು. 
ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು. ಉಪನ್ಯಾಸಕ  ಅಜಿತ್ ರೈ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X