ಕಾಂಗ್ರೆಸ್ 12 ಸ್ಥಾನ ಗೆದ್ದರೆ ಸಿದ್ದರಾಮಯ್ಯಗೆ ಚಿನ್ನದ ಉಂಗುರ ತೊಡಿಸಿ ಮೆರವಣಿಗೆ: ಡಿಸಿಎಂ ಕಾರಜೋಳ

ಅಥಣಿ, ನ.26: ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಚಿನ್ನದ ಉಂಗುರ ತೊಡಿಸಿ, ಮೆರವಣಿಗೆ ಮಾಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ನುಡಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ 12 ಸ್ಥಾನ ಗೆದ್ದರೆ ಸಿದ್ದರಾಮಯ್ಯ ಅವರಿಗೆ ರೇಷ್ಮೆ ಪೇಟ ಹಾಕಿ, ಒಂದು ತೊಲ ಬಂಗಾರದ ಉಂಗುರ ತೊಡಿಸಿ, ಅಥಣಿ ಬಜಾರ್ ರಸ್ತೆಯಲ್ಲಿ ಮೆರವಣಿಗೆ ಮಾಡಿಸುತ್ತೇನೆ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಕಾಂಗ್ರೆಸ್ ಸೇರ್ಪಡೆ ಬಳಿಕ ಬಹಳ ಸುಳ್ಳು ಹೇಳುತ್ತಿದ್ದಾರೆ ಎಂದ ಅವರು, ಈ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಅವರು ಜನರ ಹಿತಕ್ಕಾಗಿ ದುಡಿಯಲಿದ್ದಾರೆ ಎಂದು ತಿಳಿಸಿದರು.
Next Story





