ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ರಥಯಾತ್ರೆಗೆ ಚಾಲನೆ

ಉಡುಪಿ, ನ.26: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಕಾರ್ಮಿಕ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರನ್ವಯ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತಾದ ಮಾಹಿತಿಯುಳ್ಳ ರಥಯಾತ್ರೆಗೆ ಜಿಲ್ಲಾಧಿಕಾರಿ ಜಿ.ಜಗದೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಇವರು ಸೋಮವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಕಾರ್ಮಿಕ ಅಧಿಕಾರಿ ಬಾಲಕೃಷ್ಣ ಎಂ., ಕಾರ್ಮಿಕ ನಿರೀಕ್ಷಕ ಜೀವನ್ ಕುಮಾರ್, ಕಾರ್ಮಿಕ ನಿರೀಕ್ಷಕ ಪ್ರವೀಣ್ ಕುಮಾರ್, ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕಿ ಪೂರ್ಣಿಮಾ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಸದಾನಂದ ನಾಯಕ್, ಮಕ್ಕಳ ಸಹಾಯವಾಣಿಯ ರಾಮಚಂದ್ರ ಉಪಾಧ್ಯಾಯ ಉಪಸ್ಥಿತರಿದ್ದರು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನಾ ಕಾರ್ಯಕ್ರಮದ ರಥಯಾತ್ರೆಯು ನ.25ರಿಂದ 29ರವರೆಗೆ ಜಿಲ್ಲೆಯಾದ್ಯಾಂತ ಸಂಚರಿಸಲಿದ್ದು, ಬಾಲಕಾರ್ಮಿಕ ಕಾಯ್ದೆ ಕುರಿತು ಜನಸಾಮಾನಯರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಲಿದೆ ಎಂದು ಕಾರ್ಮಿಕ ಇಲಾಖೆಯ ಪ್ರಕಟಣೆ ತಿಳಿಸಿದೆ.








