ಕರ್ತವ್ಯಲೋಪ ಆರೋಪ: ಆರು ಅಧಿಕಾರಿಗಳ ಅಮಾನತು
ಉಪ ಚುನಾವಣೆ
ಬೆಂಗಳೂರು, ನ.26: ಬಿಬಿಎಂಪಿ ವ್ಯಾಪ್ತಿಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಉಪ ಚುನಾವಣೆ ಸಂಬಂಧಿಸಿದಂತೆ ವಿವಿಧ ಚೆಕ್ ಪೋಸ್ಟ್‌ಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿ/ಸಿಬ್ಬಂದಿಗಳಲ್ಲಿ ಚುನಾವಣಾ ಕರ್ತವ್ಯ ಲೋಪವೆಸಗಿದ ಆರು ಮಂದಿಯನ್ನು ಅಮಾನತುಗೊಳಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಾದ ಮಹಾಲಕ್ಷ್ಮೀ ಲೇಔಟ್, ಯಶವಂತಪುರ, ಶಿವಾಜಿನಗರ ಹಾಗೂ ಕೆ.ಆರ್. ಪುರಂ ವ್ಯಾಪ್ತಿಯ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಅಧಿಕಾರಿ/ಸಿಬ್ಬಂದಿಗಳಲ್ಲಿ 6 ಮಂದಿ ಚುನಾವಣಾ ಕರ್ತವ್ಯ ಲೋಪವೆಸಗಿರುವ ಪರಿಣಾಮ ಅದನ್ನು ಗಂಭಿರವಾಗಿ ಪರಿಗಣಿಸಿ ಸದರಿ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಅಮಾನತುಗೊಳಿಸಲಾಗಿದೆ.
Next Story





