Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜೆಪಿ ಸರಕಾರದ ವಿರುದ್ಧ ಮಾಜಿ ಸಚಿವ...

ಬಿಜೆಪಿ ಸರಕಾರದ ವಿರುದ್ಧ ಮಾಜಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ26 Nov 2019 11:00 PM IST
share
ಬಿಜೆಪಿ ಸರಕಾರದ ವಿರುದ್ಧ ಮಾಜಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಬೆಂಗಳೂರು, ನ.26: ಕೇಂದ್ರದಲ್ಲಿ ಎರಡನೆ ಬಾರಿಗೆ ಅಧಿಕಾರ ಹಿಡಿದಿರುವ ಬಿಜೆಪಿ ಸರಕಾರದ ಸಾಧನೆ ಶೂನ್ಯ ಹಾಗೂ ರಾಜ್ಯ ಸರಕಾರವೂ ಸಂಪೂರ್ಣವಾಗಿ ನಿಶ್ಯಕ್ತವಾಗಿದೆ ಎಂದು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಶಿವರಾಜು ಪರ ಮತಯಾಚನೆ ವೇಳೆ ಮಾತನಾಡಿದ ಅವರು, ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿಯುವುದು ಬಿಜೆಪಿ ನಾಯಕರ ರಕ್ತದಲ್ಲಿಯೇ ಕರಗತವಾಗಿದೆ ಎಂದು ಟೀಕಿಸಿದರು.

ಜಾತಿ, ಧರ್ಮಗಳ ನಡುವೆ ಕೋಮು ಸೌಹಾರ್ದತೆಯನ್ನು ಹಾಳು ಮಾಡಿ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಾರೆ. ಬಿಜೆಪಿಯು ಅಕ್ರಮ ಹಣದ ಮೂಲಕ ಚುನಾವಣೆ ಗೆಲ್ಲುವುದು ಅವರ ಸಿದ್ದಾಂತವಾಗಿದೆ. ಪ್ರಧಾನಿ ಮೋದಿ ಮಾತುಗಳಿಗೆ ಮರುಳಾಗಿ ಜನ ಮತ ಹಾಕಿದರು. ಆದರೆ, ಇಂದು ನಾಗರಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ದೇಶದ ಆರ್ಥಿಕ ಪರಿಸ್ಥಿತಿ ಅಧಿಕವಾಗಿ ಕುಸಿತ ಕಂಡಿದೆ. ರಾಜ್ಯ ಸರಕಾರ ದಿವಾಳಿಯಾಗಿದೆ ಎಂದ ಅವರು, ರೈತರ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ. ಪ್ರವಾಹ ಪೀಡಿತರ ಬಗ್ಗೆ ಚಕಾರ ಎತ್ತುತ್ತಿಲ್ಲ. ಆದರೆ, ಕೇವಲ ಸುಳ್ಳುಗಳನ್ನು ಹೇಳಿಕೊಂಡೇ ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ ಎಂದು ದೂರಿದರು.

17 ಜನ ಶಾಸಕರ ರಾಜೀನಾಮೆ ಹಿಂದೆ ಹಣ ಹಾಗೂ ಅಧಿಕಾರದ ಆಸೆ ಕೆಲಸ ಮಾಡಿದೆ. ಈ ಸಂದರ್ಭದಲ್ಲಿ ರಾಜೀನಾಮೆ ನೀಡಿದವರಿಗೆ ಕ್ಷೇತ್ರದ ಮತದಾರರ ನೆನಪೇ ಆಗಿಲ್ಲ. ಇಂತಹವರಿಗೆ ಮತದಾರರೇ ಸರಿಯಾದ ಉತ್ತರ ನೀಡಬೇಕು ಎಂದು ಅವರು ಸಲಹೆ ನೀಡಿದರು.

ಈ ವೇಳೆ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ, ರಘುವೀರ್ ಗೌಡ, ರವಿ ಗಾಣಿಗ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X