ಬೆಳಗಾವಿ ಪ್ಯಾಂಥರ್ಸ್ ಮಾಲಕನಿಗೆ ಜಾಮೀನು ನಿರಾಕರಣೆ

ಬೆಂಗಳೂರು, ನ.26: ಕೆಪಿಎಲ್ ಬೆಟ್ಟಿಂಗ್ ಮತ್ತು ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲಕ ಅಶ್ಫಕ್ ಅಲಿ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ ಎಂದು ಕಾರಣಕೊಡುವ ಮೂಲಕ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು.
ಈಗಾಗಲೇ ಬೆಟ್ಟಿಂಗ್ ಕೇಸ್‌ನಲ್ಲಿ ಅಶ್ಫಕ್ ಅಲಿಯವರು ಜಾಮೀನು ಪಡೆದಿದ್ದಾರೆ. ಸದ್ಯ ಫಿಕ್ಸಿಂಗ್ ಕೇಸ್‌ನಲ್ಲಿ ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಸಲ್ಲಿಸಿದ್ದರು. ನ್ಯಾಯಪೀಠವು ವಕೀಲರ ವಾದ ಆಲಿಸಿ ಜಾಮೀನು ನೀಡಲು ನಿರಾಕರಿಸಿತು.
Next Story





